ಸದ್ಯ ರಾಜ್ಯದಲ್ಲಿ ST Borad ಹಗರಣದ ಜೊತೆಗೆ ಮೈಸೂರಿನ ಮೂಡಾ ಹಗರಣ ಜೋರು ಚರ್ಚೆ ನಡೆಯುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ರವರ ಪತ್ನಿ ಪಾರ್ವತಿ ರವರ ಹೆಸರಿಗೆ 50:50 ಅನುಪಾತದಲ್ಲಿ 14 ಸೈಟ್ ಗಳನ್ನು ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಅಷ್ಟಕ್ಕೂ ಸಿಎಂ ಸಿದ್ದರಾಮಯ್ಯ ಹೇಳಿದ್ದಾದರೂ ಏನು ಎಂಬ ವಿಚಾರಕ್ಕೆ ಬಂದರೇ,
ಮೈಸೂರಿನ ಮೂಡಾದಲ್ಲಿ ಭಾರಿ ಹಗರಣ ನಡೆದಿದೆ ಎಂಬ ಆರೋಪ ಜೋರಾಗಿ ಕೇಳಿಬರುತ್ತಿದೆ. ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಮೂಡಾದಲ್ಲಿ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಸಿಎಂ ಪತ್ನಿಗೆ 14 ನಿವೇಶನಗಳು ಮಂಜೂರಾದ ದಾಖಲೆಗಳನ್ನು ಸಹ ಬಿಡುಗಡೆ ಮಾಡಿದ್ದಾರೆ. ಇನ್ನೂ ಈ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಧರ್ಮ ಪತ್ನಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿತ್ತು. ಅದಕ್ಕೆ ಪರ್ಯಾಯವಾಗಿ ಮೂಡಾ 50:50 ಅನುಪಾತದಲ್ಲಿ ಬೇರೆ ಕಡೆ ನಿವೇಶಗಳನ್ನು ಕೊಡಲಾಗಿತ್ತು. ಅದರು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ರವರು ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ 3.16 ಎಕರೆ ಜಮೀನನ್ನು ರಂಗ್ ರೋಡ್ ಪಕ್ಕದ ಕೆಸರೆಯಲ್ಲಿದೆ ಅದನ್ನು ನನ್ನ ಭಾವ ಮೈದುನ ಪಡೆದಿದ್ದು, ನನ್ನ ಪತ್ನಿಗೆ ದಾನವಾಗಿ ಕೊಟ್ಟಿದ್ದರು. ನಾನು ಅಧಿಕಾರದಲ್ಲಿದ್ದಾಗ ತೆಗೆದುಕೊಳ್ಳಲು ಹೋಗಿಲ್ಲ. 50:50 ಅನುಪಾದಲ್ಲಿ ಸೈಟ್ ಗಳನ್ನ ಕೊಡಬೇಕು ಎಂಬ ಕಾನೂನು ಮಾಡಿದ್ದು ಬಿಜೆಪಿಯವರೇ ಎಂದು ಹೇಳಿದ್ದಾರೆ.
ಇನ್ನೂ ನಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳದೇ ಮೂಡಾದವರು ನಿವೇಶನಗಳನ್ನು ಮಾಡಿ ಹಂಚಿದ್ದರು. ಈ ಪ್ರಕ್ರಿಯೆಯ ಸಮಯದಲ್ಲೇ ಕಾನೂನು ಬದ್ದವಾಗಿ ನಮಗೆ ನಿವೇಶನ ಕೊಡಬೇಕು, ಅದರಂತೆ 50:50 ಅನುಪಾತದಲ್ಲಿ ನಿವೇಶನ ಕೊಡಲು ಒಪ್ಪಿದರು. ಸರ್ಕಾರದ ನಿಯಮಾವಳಿ ಆದೇಶದಂತೆ ನಮಗೆ ನಿವೇಶನ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ನಿವೇಶನಗಳನ್ನು ಕೊಟ್ಟಿದ್ದಾರೆ ಅದರಲ್ಲಿ ಏನು ತಪ್ಪು ಎಂದು ಸಿಎಂ ಪ್ರಶ್ನಿಸಿದ್ದಾರೆ. ಸದ್ಯ ರಾಜ್ಯದಲ್ಲಿ ವಾಲ್ಮೀಕಿ ನಿಗಮದ ಹಣ ದುರ್ಬಳಕೆಯ ಪ್ರಕರಣದ ಜೊತೆಗೆ ಮುಡಾ ಪ್ರಕರಣ ಸಹ ವಿರೋಧ ಪಕ್ಷದವರಿಗೆ ಬಲವಾದ ಅಸ್ತ್ರವಾಗಿದೆ.