ನಮ್ಮ ದೇಶದ ಪ್ರತಿಯೊಬ್ಬರೂ ಆಚರಿಸಬೇಕಾದ ಹಬ್ಬಗಳು ಎಂದರೆ ಅದು ಸ್ವಾತಂತ್ರ್ಯ ಹಾಗೂ ಗಣರಾಜ್ಯೋತ್ಸವ ದಿನಾಚರಣೆ. ಈ ಎರಡೂ ದಿನಾಚರಣೆಗಳನ್ನು ಧಾರ್ಮಿಕ ಹಬ್ಬಗಳನ್ನು ಆಚರಿಸುವಂತೆ ವಿಜೃಂಭಣೆಯಿಂದ ಆಚರಿಸಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ 77ನೇ ಗಣರಾಜ್ಯೋತ್ಸವ (77th Republic Day) ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

77th Republic Day – ಸಂವಿಧಾನ ಹಾಗೂ ತ್ಯಾಗದ ಸ್ಮರಣೆ
ಇಂದು ನಾವು ಎಲ್ಲಾ ಧಾರ್ಮಿಕ ಹಬ್ಬಗಳನ್ನು ಅದ್ದೂರಿಯಾಗಿ ಸಂಭ್ರಮ ಸಡಗರದಿಂದ ಆಚರಣೆ ಮಾಡುತ್ತೇವೆ, ಆದರೆ ಆ ಹಬ್ಬಗಳನ್ನು ನಾವು ಅಷ್ಟು ಅದ್ದೂರಿಯಾಗಿ ಆಚರಣೆ ಮಾಡುವುದುದರ ಹಿಂದೆ ಅನೇಕ ಮಹನೀಯರ ತ್ಯಾಗ ಬಲಿದಾನಗಳಿವೆ. ನಾವೆಲ್ಲರೂ ಸ್ವಾತಂತ್ರ್ಯ ತಂದುಕೊಟ್ಟ ಮಹಾನಿಯರನ್ನು ಸದಾ ನೆನಪಿಸಿಕೊಳ್ಳಬೇಕು. ಇಂದು ನಾವು ಈ ರೀತಿಯ ಸೌಲಭ್ಯ ಹಾಗೂ ಹಕ್ಕುಗಳನ್ನು ಪಡೆದಿದ್ದೇವೆ ಎಂದರೆ ಅದು ಸಂವಿಧಾನದಿಂದ ಎಂದು ಮರೆಯಬಾರದು. ಆದರೆ ಜನರು ಮಾತ್ರ ರಾಷ್ಟ್ರೀಯ ಹಬ್ಬಗಳಿಗೂ ತಮಗೂ ಏನೂ ಸಂಬಂಧವಿಲ್ಲ ಎಂಬಂತೆ ವರ್ತನೆ ಮಾಡುತ್ತಿದ್ದಾರೆ. ಇನ್ನು ಮುಂದೆಯಾದರೂ ನಮ್ಮ ರಾಷ್ಟ್ರೀಯ ಹಬ್ಬಗಳನ್ನು ವಿಜೃಂಭಣೆಯಿಂದ ಎಲ್ಲರೂ ಸೇರಿ ಆಚರಣೆ ಮಾಡಲು ಮುಂದಾಗಬೇಕು ಎಂದರು.

ತಾಲೂಕಿನ ಅಭಿವೃದ್ಧಿಗೆ ಬದ್ಧ ಎಂದ ಶಾಸಕರು
ಇನ್ನೂ ಈಗಾಗಲೇ (77th Republic Day) ಗುಡಿಬಂಡೆ ತಾಲೂಕಿಗೆ ಅತ್ಯಧಿಕ ಅನುದಾನ ತಂದಿದ್ದೇನೆ. ಬಹುತೇಕ ಎಲ್ಲಾ ರಸ್ತೆಗಳ ಕಾಮಗಾರಿ ಮುಗಿದಿದೆ. ಜೊತೆಗೆ ಗುಡಿಬಂಡೆ ಪಟ್ಟಣದ ರಾಮಪಟ್ಟಣ ರಸ್ತೆಗೆ ಈಗಾಗಲೇ ಐದು ಕೋಟಿ ಅನುದಾನ ನೀಡಿದ್ದು, ಕಾಮಗಾರಿಯ ಗುದ್ದಿಲಿ ಪೂಜೆ ಸಹ ನೆರವೇರಿದೆ. ಆದರೆ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ರಸ್ತೆಯ ಬದಿಯ ಆಸ್ತಿ ಮಾಲೀಕರ ಸಹಕಾರ ಬೇಕಿದೆ. ಅವರು ಸಹಕಾರ ನೀಡಿದರೇ ಇನ್ನೂ ಐದು ಕೋಟಿ ಅನುದಾನ ನೀಡಿ ಉತ್ತಮ ರಸ್ತೆ ನಿರ್ಮಾಣ ಮಾಡಿಸುತ್ತೇನೆ. ತಾಲೂಕು ಕೇಂದ್ರದಲ್ಲಿ 2 ಕೋಟಿ ಅನುದಾನದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಆಗುತ್ತಿದೆ. ವಾಲ್ಮೀಕಿ ಭವನ ನಿರ್ಮಾಣಕ್ಕೆ 2 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಫೆಬ್ರವರಿ ಮೊದಲ ವಾರದಲ್ಲಿ ಗುದ್ದಲಿ ಪೂಜೆ ನೆರವೇರಿಸುತ್ತೇನೆ. ತಮ್ಮೆಲ್ಲರ ಸಹಕಾರದಿಂದ ಮತ್ತಷ್ಟು ಅಭಿವೃದ್ದಿ ಮಾಡುತ್ತೇನೆ ಎಂದರು.
ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು
ಕಾರ್ಯಕ್ರಮದಲ್ಲಿ (77th Republic Day) ತಾಪಂ ಇಒ ನಾಗಮಣಿ ಹಾಗೂ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ತಿರುಮಣಿ ಶಾಲೆಯ ಶಿಕ್ಷಕ ಲಕ್ಷ್ಮೀಪತಿ ಗಣರಾಜ್ಯೋತ್ಸವ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನಾ ಪಟ್ಟಣದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಟ್ಟಣದ ಮುಖ್ಯ ಬೀದಿಯಲ್ಲಿ ಮೆರವಣಿಗೆಯನ್ನು ನೆರವೇರಿಸಿದರು. ಇನ್ನೂ ಕಾರ್ಯಕ್ರಮದಲ್ಲಿ ಪಿಎಂ ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಅಂಬೇಡ್ಕರ್ ರವರ ಕುರಿತು ನೃತ್ಯ ರೂಪಕವನ್ನು ಪ್ರದರ್ಶನ ಮಾಡಿದ್ದು, ಎಲ್ಲಾ ಸಭಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು. Read this also : ಜನವರಿ 26 ರಿಂದ ಫೆಬ್ರವರಿ 1ರ ವರೆಗಿನ ಅದೃಷ್ಟದ ರಾಶಿಗಳು ಯಾವುವು? ಇಲ್ಲಿದೆ ಸಂಪೂರ್ಣ ಮಾಹಿತಿ…!

ಕಾರ್ಯಕ್ರಮದಲ್ಲಿ ಹಾಜರಿದ್ದ ಗಣ್ಯರು
ಈ ಸಮಯದಲ್ಲಿ (77th Republic Day) ತಹಸೀಲ್ದಾರ್ ಸಿಗ್ಬತ್ತುಲ್ಲಾ, ಆರಕ್ಷಕ ವೃತ್ತ ನಿರೀಕ್ಷಕ ಮುನಿಕೃಷ್ಣ, ಪಪಂ ಅಧ್ಯಕ್ಷ ವಿಕಾಸ್, ಉಪಾಧ್ಯಕ್ಷ ಗಂಗರಾಜು, ಬಿಇಒ ಕೃಷ್ಣಕುಮಾರಿ, ಪಪಂ ಮುಖ್ಯಾಧಿಕಾರಿ ಆರತಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮುನಿಕೃಷ್ಣಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪಪಂ ಸದಸ್ಯರು, ಕೆಡಿಪಿ ಸದಸ್ಯರುಗಳು ಹಾಜರಿದ್ದರು.
