Siddaramaiah – ರಾಜ್ಯದಲ್ಲಿ ಸಿಎಂ ಬದಲಾವಣೆಯ ಕುರಿತು ಚರ್ಚೆ ನಡೆಯುತ್ತಿದ್ದು, ಇದೇ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ಚಾಮರಾಜನಗರದ ಸತ್ತೇಗಾಲದ ಸರ್ಕಾರಿ ಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಜನರ ಪ್ರೀತಿ ಅಭಿಮಾನ ಗಳಿಸದೇ ಇದ್ದರೇ, ರಾಜಕೀಯದಲ್ಲಿ ಉಳಿಗಾಲ ಸಾಧ್ಯವಿಲ್ಲ. ನಾನೀಗ ರಾಜಕೀಯ ಜೀವನದ ಕೊನೆಗಾಲದಲ್ಲಿದ್ದೇನೆ ಎಂದು ಹೇಳಿಕೆ ನೀಡಿದ್ದು, ಚರ್ಚೆಗೆ ಕಾರಣವಾಗಿದೆ.

ಚಾಮರಾಜನಗರದ ಸತ್ತೇಗಾಲ ಸರ್ಕಾರಿ ಶಾಲಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ (Siddaramaiah) ಅವರು, ನಾನು ಏನಿಲ್ಲ ಅಂದ್ರು 20 ಬಾರಿ ಚಾಮರಾಜನಗರಕ್ಕೆ ಬಂದಿದ್ದೇನೆ. ನಾನು ಚಾಮರಾಜನಗರಕ್ಕೆ ಬಂದಾಗಲೆಲ್ಲ ಅಧಿಕಾರ ಕಳೆದುಕೊಂಡಿಲ್ಲ. ಬದಲಿಗೆ ಸಿಎಂ ಖುರ್ಚಿ ಗಟ್ಟಿಯಾಗಿದೆ. ಮೈಸೂರಿನ(Siddaramaiah) ಅವಿಭಾಜ್ಯ ಈ ಚಾಮರಾಜನಗರ ಜಿಲ್ಲೆ. ಜೆ.ಹೆಚ್ ಪಟೇಲರಿಗೆ ಚಾಮರಾಜನಗರಕ್ಕೆ ಹೋದ್ರೆ ಅಧಿಕಾರ ಕಳೆದುಕೊಳ್ಳುತ್ತೀರಿ ಅಂತ ಆಗಿನ ಕೆಲ ಶಾಸಕರು ಹೇಳಿದ್ದರು. ಪಾಪ ಆಗಿನಿಂದ ಆ ಕಳಂಕ ಚಾಮರಾಜನಗರ ಮೇಲಿದೆ. ನಾನು ಎರೆಡು ಬಾರಿ ಮುಖ್ಯಮಂತ್ರಿಯಾಗಿ ಚಾಮರಾಜನಗರಕ್ಕೆ ಬಂದಿದ್ದೇನೆ. ಇದನ್ನು ರಾಚಯ್ಯ ಅವರೂ ನಂಬಲಿಲ್ಲ ನಾನು ನಂಬಲಿಲ್ಲ. ನಾನು ಈಗ ರಾಜಕೀಯ ಕೊನೆಗಾಲದಲ್ಲಿದ್ದೇನೆ. ಜನರ ಪ್ರೀತಿ ಅಭಿಮಾನ ಗಳಿಸದೆ ಇದ್ರೆ ರಾಜಕೀಯದಲ್ಲಿ ಉಳಿಗಾಲ ಸಾಧ್ಯವಿಲ್ಲ ಎಂದು ನುಡಿದರು.

ಇನ್ನೂ ಬಿಜೆಪಿಯವರು ಗ್ಯಾರಂಟಿಗಳ (Siddaramaiah) ಬಗ್ಗೆ ಮಾತನಾಡುತ್ತಾರೆ. ನಾವು ಕೊಡುವಂತಹ ಗೃಹಲಕ್ಷ್ಮಿ ಯೋಜನೆಯಿಂದ ಅತ್ತೆ ಸೊಸೆ ನಡುವೆ ಜಗಳ ಸೃಷ್ಟಿಸಿದರು ಎಂದು ಅಪಪ್ರಚಾರ ಮಾಡುತ್ತಿರುತ್ತಾರೆ. ಬಿಜೆಪಿಯವರಿಗೆ ಒಳ್ಳೆಯ ಕೆಲಸಗಳನ್ನು ಮಾಡಿದರೇ ಠೀಕೆ ಮಾಡುವುದೊಂದೆ ಕಾಯಕ. ನಿಮಗೆ ಉಚಿತ ಅಕ್ಕಿ ಕೊಡ್ತಾಯಿರುವವರು ಯಾರು? ನಾನು ಮೊದಲು ಬಾರಿ ಸಿಎಂ (Siddaramaiah) ಆದಾಗ 5 ಕೆಜಿ ಅಕ್ಕಿ ಕೊಟ್ಟಿದ್ದೆ. ಇದೀಗ 10 ಕೆಜಿ ನೀಡುತ್ತೇವೆ ಅಂದ್ರೆ ಅದಕ್ಕೆ ಕೇಂದ್ರ ಅಡ್ಡಗಾಲು ಹಾಕಿದೆ ಎಂದು ಬಿಜೆಪಿ ವಿರುದ್ದ ವಾಗ್ದಾಳಿ (Siddaramaiah) ನಡೆಸಿದರು. ಇನ್ನೂ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ಸತ್ತೆಗಾಲದ ಹಳೇಯ ವಿದ್ಯಾರ್ಥಿಗಳೆಲ್ಲರೂ ಸೇರಿ 2 ಕೋಟಿ ವೆಚ್ಚದಲ್ಲಿ ಸರ್ಕಾರಿ ಶಾಲೆಯನ್ನು ನಿರ್ಮಾಣ ಮಾಡಿಸಿದ್ದಾರೆ.