Supreme Court Jobs – ಸುಪ್ರೀಂ ಕೋರ್ಟ್‌ನಲ್ಲಿ ಖಾಲಿಯಿರುವು 107 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು, ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕೋರ್ಟ್ ಮಾಸ್ಟರ್, ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಹಾಗೂ ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆರಂಭವಾಗಿದೆ. ಡಿ.25 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಈ ಲೇಖನದ ಮೂಲಕ ಹಂಚಿಕೊಳ್ಳಲಾಗಿದೆ.
ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ 107 ಕೋರ್ಟ್ ಮಾಸ್ಟರ್, ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಹಾಗೂ ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈಗಾಗಲೇ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಆರಂಭವಾಗಿದೆ. ಡಿ.25 ಕೊನೆಯ ದಿನಾಂಕವಾಗಿದೆ. ಕೊನೆಯ ದಿನಾಂಕದವರೆಗೂ ಕಾಯದೇ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಅಧಿಸೂಚನೆಯಲ್ಲಿ ತಿಳಿಸಿದ ಕೆಲವೊಂದು ಪ್ರಮುಖ ವಿಚಾರಗಳನ್ನು ಈ ಕೆಳಗೆ ತಿಳಿಸಲಾಗಿದೆ.
- ಹುದ್ದೆಗಳ ವಿವರ : ಒಟ್ಟು 107 ಹುದ್ದೆಗಳು
-
-
- ಕೋರ್ಟ್ ಮಾಸ್ಟರ್ -31
- ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ -33
- ಪರ್ಸನಲ್ ಅಸಿಸ್ಟೆಂಟ್ – 43
- ಶೈಕ್ಷಣಿಕ ವಿದ್ಯಾರ್ಹತೆ ಹಾಗೂ ವಯೋಮಿತಿ
-
- ಕೋರ್ಟ್ ಮಾಸ್ಟರ್ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ಪದವಿ, ಇಂಗ್ಲಿಷ್ ಶಾರ್ಟ್ ಹ್ಯಾಂಡ್ ಟೈಪ್ ರೈಟಿಂಗ್ ತರಬೇತಿ ಪಡೆದಿರಬೇಕು. ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
- ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಹಾಗೂ ಪರ್ಸನಲ್ ಅಸಿಸ್ಟೆಂಟ್ ಹುದ್ದೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ಪಡೆದಿರಬೇಕು ಇಂಗ್ಲಿಷ್ ಶಾರ್ಟ್ ಹ್ಯಾಂಡ್ ಟೈಪ್ ರೈಟಿಂಗ್ ತರಬೇತಿಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
- ವಯೋಮಿತಿ: ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಮತ್ತು ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು. ಕೋರ್ಟ್ ಮಾಸ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 30 ವರ್ಷ ಹಾಗೂ ಗರಿಷ್ಠ 45 ವರ್ಷ ದಾಟಿರಬಹುದು.
- ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಹಾಗೂ ಪಂಗಡ, ಅಂಗವಿಕಲ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 250, ಸಾಮಾನ್ಯ ವರ್ಗ, 2ಎ/2ಬಿ/3ಎ/3ಬಿವರ್ಗದ ಅಭ್ಯರ್ಥಿಗಳಿಗೆ ರೂ 1000 ನಿಗಧಿಪಡಿಸಲಾಗಿದೆ.
- ಆಯ್ಕೆ ವಿಧಾನ: ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಟೈಪಿಂಗ್ ಸ್ಪೀಡ್ ಟೆಸ್ಟ್ ಬಳಿಕ ಸಂದರ್ಶನದ ಬಳಿಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04-12-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-12-2024
Official Notification & Application Link:
- Supreme Court of India Website Career Page: Click Here
- Supreme Court of India Official Advertisement PDF: Click Here
- Supreme Court of India Online Application Form: Click Here