Accident – ಚಿಕ್ಕಬಳ್ಳಾಪುರ ನಗರದ ಎಂ.ಜಿ. ರಸ್ತೆಯ ಅಂಬಾ ಭವಾನಿ ಹೋಟೆಲ್ ಬಳಿ ಅಪಘಾತ ನಡೆದಿದೆ. ಮಗಳನ್ನು ಬಸ್ ನಿಲ್ದಾಣಕ್ಕೆ ಡ್ರಾಪ್ ಮಾಡಲು ಹೋಗುತ್ತಿದ್ದಾಗ ತಂದೆಯ ಕಣ್ಣೆದುರೇ ಮಗಳು ಅಪಘಾತದಲ್ಲಿ ಮೃತಪಟ್ಟಿದ್ದಾಳೆ. ಮೃತ ದುರ್ದೈವಿಯನ್ನು ಯೋಗಿತಾ (22) ಎಂದು ಗುರ್ತಿಸಲಾಗಿದೆ. ಮೃತ ದುರ್ದೈವಿ ಯೋಗಿತಾ ಹಾಸನದ ಪಶು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು. ಅಂತಿಮ ವರ್ಷ ಮುಗಿಸಿ ಬೆಂಗಳೂರಿನಲ್ಲಿ ಇಂಟರ್ನ್ ಶಿಪ್ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.
ಮೃತ ಯೋಗಿತಾ ಪ್ರತಿನಿತ್ಯ ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಬಸ್ ಮೂಲಕ ಇಂಟರ್ನ್ ಶಿಪ್ ಕೆಲಸಕ್ಕಾಗಿ ಪ್ರಯಾಣಿಸುತ್ತಿದ್ದಳು. (Accident) ಬಸ್ ನಿಲ್ದಾಣಕ್ಕೆ ತಂದೆ ಬೈಕ್ ಮೂಲಕ ಡ್ರಾಪ್ ಮಾಡುತ್ತಿದ್ದರಂತೆ. ಇಂದು ಸಹ ಮಗಳನ್ನು ಡ್ರಾಪ್ ಮಾಡಲು ಹೋಗುವಾಗ ಈ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರದ (Chikkaballapura) ಅಂಬಾ ಭವಾನಿ ಹೋಟೆಲ್ ಮುಂಭಾಗ ಬೈಕ್ ನಲ್ಲಿ ಹೋಗುತ್ತಿದ್ದಾಗ ಕ್ಯಾಂಟರ್ ಅಡ್ಡ ಬಂದ ಪಾದಚಾರಿ ತಪ್ಪಿಸಲು ಕ್ಯಾಂಟರ್ ಚಾಲಕ ವಾಹನವನ್ನು ಪಕ್ಕಕ್ಕೆ ತಿರುಗಿಸಿದ್ದಾನೆ. ಈ ವೇಳೆ ಬೈಕ್ ಗೆ ಕ್ಯಾಂಟರ್ (Accident) ಟಚ್ ಆಗಿದೆ. ಇದರ ಪರಿಣಾಮವಾಗಿ ಬೈಕ್ ಕೆಳಗೆ ಉರುಳಿದೆ. ಈ ಸಮಯದಲ್ಲಿ ಬೈಕ್ ನ ಹಿಂಬದಿಯಲ್ಲಿದ್ದ ಯೋಗಿತಾ ನೆಲಕ್ಕೆ ಬಿದ್ದಿದ್ದಾಳೆ. ಇದರಿಂದಾಗಿ ಆಕೆಯ ತಲೆಗೆ ಗಂಭೀರವಾದ ಗಾಯಗಳಾಗಿವೆ. ಕೂಡಲೇ ಗಾಯಾಳು ಯೋಗಿತಾಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಚಿಕಿತ್ಸೆ ನಡುವೆ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಇನ್ನೂ ಈ ಕುರಿತು ಚಿಕ್ಕಬಳ್ಳಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ಯಾಂಟರ್ ವಶಖ್ಕೆ ಪಡೆದು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಶಿವಮೊಗ್ಗದಲ್ಲಿ ಟಿವಿ ರಿಮೋಟ್ ಕೊಡದಿದ್ದಕ್ಕೆ ಮನನೊಂದ ಬಾಲಕಿ ಆತ್ಮಹತ್ಯೆ

ಇತ್ತಿಚಿಗೆ ಮಕ್ಕಳು ಕ್ಷುಲ್ಲಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುತ್ತಿದ್ದಾರೆ. ಶಿವಮೊಗ್ಗದಲ್ಲಿ (Shivamogga) ಬಾಲಕಿಯೊಬ್ಬಳು ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ನಗರದ ಸೂಳೆಬೈಲಿನಲ್ಲಿ ರಿಮೋಟ್ ಕೊಡಲಿಲ್ಲ ಎಂಬ ಕಾರಣದಿಂದ ಅಜ್ಜಿ ಬೈದಿದ್ದಾಳೆ. ಇದರಿಂದ ಮನನೊಂದ ಸಹನಾ (16) ಇಲಿ ಪಾಶಾಣ ಸೇವಿಸಿ ಮೃತಪಟ್ಟಿದ್ದಾಳೆ. ಟಿವಿ ರಿಮೋಟ್ ಗಾಗಿ ಇಬ್ಬರು ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ಕಾರಣಕ್ಕಾಗಿ ಅಜ್ಜಿ ಮೊಮ್ಮಗಳಿಗೆ ಬೈದಿದ್ದಾರೆ. ಇದೇ ಕಾರಣದಿಂದ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಸಹನಾ ಭದ್ರಾವತಿ ತಾಲೂಕಿನ ಕಲ್ಲಿಹಾಳ್ ನಿವಾಸಿಯಾಗಿದ್ದಾರೆ. ಅಜ್ಜಿ ಮನೆಯಲ್ಲಿದ್ದುಕೊಂಡು ಓದುತ್ತಿದ್ದಳಂತೆ. ಸದ್ಯ ಈ ಘಟನೆಯ ಸಂಬಂಧ (Shivamogga) ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.