HomeStateDYSP: ದೂರು ಕೊಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ DYSP, ವಿಡಿಯೋ ವೈರಲ್...!

DYSP: ದೂರು ಕೊಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ DYSP, ವಿಡಿಯೋ ವೈರಲ್…!

DYSP  : ಗೃಹ ಸಚಿವ ಡಾ.ಪರಮೇಶ್ವರ್ ರವರ ತವರು ಜಿಲ್ಲೆ ತುಮಕೂರಿನಲ್ಲಿ ದೂರು ನೀಡಲು ಹೋದ ಮಹಿಳೆಯೊಂದಿಗೆ ಪೊಲೀಸಪ್ಪ ರಾಸಲೀಲೆ ನಡೆಸಿದ ಘಟನೆ ನಡೆದಿದ್ದು, ಈ ಸಂಬಂಧ ವಿಡಿಯೋ ಒಂದು ಸಹ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ಇಡೀ ಪೊಲೀಸ್ ರನ್ನು ತಲೆತಗ್ಗಿಸುವಂತೆ ಮಾಡಿದೆ ಎನ್ನಲಾಗುತ್ತಿದೆ.

ನ್ಯಾಯ ಕೊಡಿಸಬೇಕಾದ ಪೊಲೀಸರೇ ಸ್ತ್ರೀ ಭಕ್ಷಕರಾಗಿದ್ದಾರೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆಯರ, ಮಕ್ಕಳ ರಕ್ಷಣೆ ಮಾಡುವ ಪ್ರತಿಜ್ಞೆಯನ್ನು ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ರವರ ತವರು ಜಿಲ್ಲೆಯಲ್ಲಿ ಈ ನಾಚಿಕೆಗೇಡಿನ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ DYSP ಕಚೇರಿಯಲ್ಲಿ ಈ ಅಸಹ್ಯಕಾರಿ ಘಟನೆ ನಡೆದಿದ್ದು ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

TUMKUR DYSP

ಇನ್ನೂ ಪಾವಗಡ ಮೂಲದ ಮಹಿಳೆಯೊಬ್ಬರು ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಮಾತುಕತೆ ನಡೆಸಲು ಹಾಗೂ ಕೆಲವೊಂದು ವಿಚಾರಗಳ ಕುರಿತು ವಿಚಾರಣೆ ನಡೆಸಬೇಕು ಅಂತಾ ಮಹಿಳೆಯನ್ನು DYSP ಕಚೇರಿಗೆ ಕರೆಸಲಾಗಿತ್ತು. ಈ ವೇಳೆ DYSP ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನು ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಂಡಿದ್ದಾನೆ. ತನಗೆ ನ್ಯಾಯ ಸಿಗಬೇಕೆಂಬ ದೃಷ್ಟಿಯಿಂದ ಮಹಿಳೆ ಒಪ್ಪಿಕೊಂಡಿರಬಹುದು ಎನ್ನಲಾಗಿದೆ.

ನಂತರ DYSP ಮಹಿಳೆಯನ್ನು ಕಚೇರಿಯಲ್ಲಿದ್ದ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ರಾಸಲೀಲೆ ಆರಂಭಿಸಿದ್ದಾನೆ. ಈ ವೇಳೆ ಶೌಚಾಲಯದ ಕಿಟಕಿಯಿಂದ ಯಾರೋ ಈ ದೃಶ್ಯವನ್ನು ವಿಡಿಯೋ ಮಾಡಿದ್ದಾರೆ. ವಿಡಿಯೋದಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿರುವುದು ಕಾಣುತ್ತದೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ ವ್ಯಕ್ತವಾಗುತ್ತಿದೆ.

by Baluhttp://ismkannadanews.com
ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular