Allu Arjun: ಹೈದರಾಬಾದ್ ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ, ಅಲ್ಲು ಅರ್ಜುನ್ ಗೆ ಷರತ್ತುಬದ್ದ ಜಾಮೀನು….!

Allu Arjun – ಪುಷ್ಪಾ-2 ಸಿನೆಮಾದ ಪ್ರೀಮಿಯರ್‍ ಶೋ ಸಮಯದಲ್ಲಿ ಹೈದರಾಬಾದ್ ನ ಸಂಧ್ಯಾ ಥಿಯೇಟರ್‍ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ರವರಿಗೆ ತೆಲಂಗಾಣ ಹೈಕೋರ್ಟ್ ಷರತ್ತುಬದ್ದ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ರವರು ರೆಗ್ಯುಲರ್‍ ಬೇಲ್ ಅಥವಾ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನಾಂಪಲ್ಲಿ ಕೋರ್ಟ್‌ನಲ್ಲೂ ಸಹ ಈ ಅರ್ಜಿಯ ವಿಚಾರಣೆ ನಡೆದಿತ್ತು. ಇದೀಗ ಅಲ್ಲು ಅರ್ಜುನ್ ರವರಿಗೆ ಹೈದರಾಬಾದ್‌ ನ ನಾಂಪಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

Allu Arjun Press Meet 1

ಕಳೆದ ಡಿ.04 ರಂದು ಹೈದರಾಬಾದ್ ನ ಸಂಧ್ಯಾ ಥಿಯೇಟರ್‍ ಗೆ ನಟ ಅಲ್ಲು ಅರ್ಜುನ್ ಪುಷ್ಪಾ-2 ಸಿನೆಮಾದ ಸಂಬಂಧ ಭೇಟಿ ನೀಡಿದ್ದರು. ಈ ವೇಳೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗಿಯಾಗಿದ್ದರು. ಈ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ದು, ಆಕೆಯ ಪುತ್ರ ಗಂಭೀರವಾಗಿ ಗಾಯಗೊಂಡಿದ್ದರು. ಈ ಯುವಕ ಈಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಮೃತ ಮಹಿಳೆಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನಂತೆ ಹೈದರಾಬಾದ್ ಪೊಲೀಸರು ನಟ ಅಲ್ಲು ಅರ್ಜುನ್ ಹಾಗೂ ಸಂಧ್ಯಾ ಥಿಯೇಟರ್‍ ನ ಮಾಲೀಕ ಹಾಗೂ ಮ್ಯಾನೇಜರ್‍ ರವರನ್ನು ಬಂಧಿಸಿದ್ದರು. ಈ ಸುದ್ದಿ ದೇಶದಾದ್ಯಂತ ಭಾರಿ ಸದ್ದು ಮಾಡಿತ್ತು.

Allu Arjun Arrested and he got bail

ಇನ್ನೂ ಅಲ್ಲು ಅರ್ಜುನ್ ಬಂಧವಾದ ದಿನದಂತೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು. ಜೊತೆಗೆ ನಾಂಪಲ್ಲಿ ನ್ಯಾಯಾಲಯದಲ್ಲಿ ಜಾಮೀನು ಪಡೆಯಲು ಅರ್ಜಿ ಹಾಕಿದ್ದರು. ಕೆಲವು ದಿನಗಳ ಹಿಂದೆ ಸಹ ಈ ಜಾಮೀನು ಅರ್ಜಿ ವಿಚಾರಣೆ ನಡೆದಿತ್ತು. ಈ ಆದೇಶವನ್ನು ಜನವರಿ 03ಕ್ಕೆ ಕಾಯ್ದಿರಿಸಲಾಗಿತ್ತು. ಇದೀಗ ಈ ಆದೇಶ ಹೊರಬಂದಿದ್ದು, ಅಲ್ಲು ಅರ್ಜುನ್ ರವರಿಗೆ ಜಾಮೀನು ಮಂಜೂರಾಗಿದೆ. ಅಲ್ಲು ಅರ್ಜುನ್ ರವರಿಗೆ ಜಾಮೀನು ನೀಡಿದ ನಾಂಪಲ್ಲಿ ಕೋರ್ಟ್, 1 ಲಕ್ಷ ರೂಪಾಯಿ ಭದ್ರತಾ ಮೊತ್ತ ಹಾಗೂ ಇಬ್ಬರು ವ್ಯಕ್ತಿಗಳ ಶೂರಿಟಿಯನ್ನು ಕೇಳಿದೆ. ಜೊತೆಗೆ ವಿದೇಶ ಪ್ರಯಾಣದ ಮೇಲೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎನ್ನಲಾಗಿದೆ.

Leave a Comment

Your email address will not be published. Required fields are marked *

Scroll to Top