Saturday, August 30, 2025
HomeStateLocal News : ಗುಡಿಬಂಡೆಯಲ್ಲಿ ಅರ್ಥಪೂರ್ಣವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನ..!

Local News : ಗುಡಿಬಂಡೆಯಲ್ಲಿ ಅರ್ಥಪೂರ್ಣವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನ..!

Local News – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಪೂರ್ವಭಾವಿ ಸಭೆಯನ್ನು ಆಯೋಜಿಸಿದ್ದು, ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಸಮ್ಮೇಳನ ನಡೆಸಲು ತೀರ್ಮಾನಿಸಲಾಯಿತು.

Local News –  ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕಾರ ನೀಡಿ

ಈ ವೇಳೆ ಮಾತನಾಡಿದ ಗುಡಿಬಂಡೆ ಪ್ರಭಾರಿ ತಹಸೀಲ್ದಾರ್‍ ರವಿ, ಕನ್ನಡ ಸಾಹಿತ್ಯ ಸಮ್ಮೇಳನ ಎಂಬುದು ಹಬ್ಬವಿದ್ದಂತೆ. ಈ ಕಾರ್ಯಕ್ರಮ ಎಲ್ಲರನ್ನೂ ಜೊತೆಗೂಡಿಸಿಕೊಂಡು ಮಾಡಬೇಕಾದ ಕಾರ್ಯಕ್ರಮವಾಗಿದೆ. ಆದ್ದರಿಂದ ಎಲ್ಲಾ ಸಂಘ ಸಂಸ್ಥೆಗಳು, ಕನ್ನಡಪರ ಸಂಘಟನೆಗಳು ಜೊತೆಗೆ ಸರ್ಕಾರಿ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಕಸಾಪ ಆಡಳಿತ ಮಂಡಳಿ ಎಲ್ಲಾ ವ್ಯವಸ್ಥೆಗಳನ್ನು ಮಾಡಬೇಕು. ಗಡಿ ಭಾಗದಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದು ತುಂಭಾನೆ ಮುಖ್ಯವಾಗಿದೆ. ಆದ್ದರಿಂದ ಎಲ್ಲರೂ ಈ ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಬೇಕು ಎಂದರು.

"Preparatory meeting for Kannada Sahitya Sammelana in Gudibande, Chikkaballapur district"

Local News –  ಶೀಘ್ರದಲ್ಲೇ ಸಮ್ಮೇಳನ ದಿನಾಂಕ ಘೋಷಣೆ

ನಂತರ ಕಸಾಪ ಅಧ್ಯಕ್ಷ ಬಿ.ಮಂಜುನಾಥ್ ಮಾತನಾಡಿ, ಗುಡಿಬಂಡೆ ತಾಲೂಕು ಚಿಕ್ಕದಾದರೂ, ಗಡಿ ಭಾಗದಲ್ಲಿದ್ದರೂ ಈ ಭಾಗದಲ್ಲಿ ಕನ್ನಡ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರುತ್ತದೆ. ಜೊತೆಗೆ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸಲಾಗುತ್ತದೆ. ಈ ಬಾರಿಯೂ ಸಹ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿತ್ತು. ಅದರಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು, ಕನ್ನಡಪರ ಸಂಘಟನೆಗಳು, ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ಶೀಘ್ರದಲ್ಲೇ ಸಮ್ಮೇಳನದ ದಿನಾಂಕವನ್ನು ನಿಗಧಿಪಡಿಸಿ ತಿಳಿಸಲಾಗುವುದು ಎಂದರು.

Local News –  ಸಾರ್ವಜನಿಕವಾಗಿ ಸಮ್ಮೇಳನಾಧ್ಯಕ್ಷರನ್ನು ಘೋಷಣೆ ಮಾಡಲು ಒತ್ತಾಯ

ಇನ್ನೂ ಸಭೆಯಲ್ಲಿ ಈ ಬಾರಿಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನು ಕಸಾಪ ಆಡಳಿತ ಮಂಡಳಿ, ಕನ್ನಡಪರ ಸಂಘಟನೆಗಳು ಸೇರಿದಂತೆ ಇತರೆ ಸಂಘ ಸಂಸ್ಥೆಗಳ ಸಮ್ಮುಖದಲ್ಲಿ ಆಯ್ಕೆ ಮಾಡಬೇಕು. ಅಧ್ಯಕ್ಷರನ್ನು ಆಯ್ಕೆ ಮಾಡಲು ಯಾವುದೇ ಅರ್ಜಿಗಳನ್ನು ಪಡೆಯಬಾರದು. ಎಲ್ಲರೂ ಆಯ್ಕೆ ಮಾಡುವಂತಹ ಅರ್ಹ ಹಾಗೂ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಬೇಕೆಂದು ಸಭೆಯಲ್ಲಿ ಒತ್ತಾಯ ಮಾಡಲಾಯಿತು.

"Preparatory meeting for Kannada Sahitya Sammelana in Gudibande, Chikkaballapur district"

ಇನ್ನೂ ಸಭೆಯಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕೇಶವರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಲಕ್ಷ್ಮೀಪತಿರೆಡ್ಡಿ, ಪಪಂ ಮುಖ್ಯಾಧಿಕಾರಿ ಸಭಾ ಶಿರೀನ್, ಶಿಕ್ಷಣ ಇಲಾಖೆಯ ಮುರಳಿ, ರಾಘವೇಂದ್ರ, ಕಸಾಪ ನಿಕಟ ಪೂರ್ವ ಅಧ್ಯಕ್ಷ ಸ.ನ.ನಾಗೇಂದ್ರ, ಕಸಪಾ ಪದಾಧಿಕಾರಿಗಳಾದ ವಾಹಿನಿ ಸುರೇಶ್, ರಾಜೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಜರಿದ್ದರು.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular