ಕರ್ನಾಟಕದಲ್ಲಿ ತೀವ್ರ ಬರಗಾಲ ತಾಂಡವವಾಡುತ್ತಿದೆ. ಜನ ಜಾನುವಾರುಗಳು ನೀರಿಲ್ಲದೇ ಪರದಾಡುತ್ತಿದ್ದಾರೆ. ಕುಡಿಯುವ ನೀರಿಗೂ ಪರದಾಡುವಂತಹ ದುಸ್ಥಿತಿ ಬಂದಿದೆ. ಇಂತಹ ಕಷ್ಟಕರ ಸಮಯದಲ್ಲಿ ತಮಿಳುನಾಡು ಏಪ್ರಿಲ್ ಹಾಗೂ ಮೇ ಮಾಹೆಯ ಪಾಲಿನ ಕಾವೇರಿ ನೀರನ್ನು ಬಿಡುವಂತೆ ಅರ್ಜಿ ಸಲ್ಲಿಸಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡು ಸರ್ಕಾರಕ್ಕೆ ಮಂಗಳಾರತಿ ಮಾಡಿದೆ. ನೀರು ಬಿಡುವಂತೆ ಸಲ್ಲಿಸಿದ ತಮಿಳುನಾಡಿನ ಅರ್ಜಿಯನ್ನು CWRC ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.
ಕಾವೇರಿ ನದಿ ನೀರು ಹಂಚಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಆಗಾಗ ಕಿತ್ತಾಟಗಳು ನಡೆಯುತ್ತಲೇ ಇರುತ್ತದೆ. ಕರ್ನಾಟಕದಲ್ಲಿ ನೀರಿಗೆ ಅಭಾವವಿದ್ದರೂ ಸಹ ತಮಿಳುನಾಡು ಸರ್ಕಾರ ಮಾತ್ರ ನೀರು ಬಿಡುವಂತೆ ಒತ್ತಾಯ ಮಾಡುತ್ತದೆ. ಕರ್ನಾಟಕದಲ್ಲಿ ಬರಗಾಲ ಆವರಿಸಿ ಜನರು ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಆದರೆ ತಮಿಳುನಾಡು ಸರ್ಕಾರಮಾತ್ರ ನಮ್ಮ ಪಾಲಿನ ನೀರು ಕೊಡಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿಗೆ ಅರ್ಜಿ ಸಲ್ಲಿಸಿತ್ತು. ನಮಗೆ ಕರ್ನಾಕಟದ ಕಾವೇರಿ ನದಿಯಿಂದ ಏಪ್ರಿಲ್ ಹಾಗೂ ಮೇ ತಿಂಗಳು ನೀರನ್ನು ಕೊಟ್ಟಲ್ಲ. ಕೂಡಲೇ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ನೀರನ್ನು ಹರಿಸಲು ಕರ್ನಾಟಕಕ್ಕೆ ಆದೇಶ ನೀಡಬೇಕೆಂದು ತಮಿಳುನಾಡು ಅರ್ಜಿ ಸಲ್ಲಿಸಿತ್ತು.
ಇನ್ನೂ ತಮಿಳುನಾಡಿದ ಅರ್ಜಿಯನ್ನು ಸ್ವೀಕರಿಸಿ ಪರಿಶೀಲನೆ ಮಾಡಿದ CWRC ಸಮಿತಿ ತಮಿಳುನಾಡು ಸರ್ಕಾರಕ್ಕೆ ಛೀಮಾರಿ ಹಾಕಿದೆ ಎನ್ನಲಾಗಿದೆ. ಕರ್ನಾಟಕದಲ್ಲಿ ಬರಗಾಲ ಆವರಿಸಿದೆ. ಕರ್ನಾಟಕದ ಅಣೆಕಟ್ಟುಗಳಲ್ಲಿ ನೀರಿನ ಲಭ್ಯತೆಯಿಲ್ಲ. ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದೆ. ಅಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಮಾಡಲು ಸಾಧ್ಯವೇ ಇಲ್ಲ ಎಂದು ಖಡಕ್ ಉತ್ತರ ನೀಡಿದ್ದಾರೆ. ಕಳೆದ ಜನವರಿ ಹಾಗೂ ಫೆಬ್ರವರಿಯಲ್ಲಿ ತಮಿಳುನಾಡಿನಲ್ಲಿ ಭಾರಿ ಮಳೆಯಿಂದ ಪ್ರವಾಹ ಉಂಟಾಗುವಂತಹ ಪರಿಸ್ಥಿತಿ ಬಂದಿತ್ತು. ಅಂತಹ ಸಮಯದಲ್ಲೂ ಸಹ ತಮಿಳುನಾಡು ಸರ್ಕಾರ ಕಾವೇರಿ ನೀರು ಬಿಡುವಂತೆ ಕೇಳಿತ್ತು.
ಇನ್ನೂ ಸುಪ್ರೀಂ ಕೋರ್ಟ್ ಆದೇಶದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯನ್ನು ಸ್ಥಾಪನೆ ಮಾಡಲಾಗಿದೆ. 2023-24ನೇ ಸಾಲಿನ ಮಳೆಗಾಲದ ನೀರು ಹಂಚಿಕೆ ಸಭೆಯ ಪೂರ್ಣಗೊಂಡಿದೆ. ಮತ್ತೊಂದು ಸಂಸ್ಥೆಯಾದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮೇ.16 ರಂದು ಸಭೆ ನಡೆಸಲಿದೆ. ಈ ಸಭೆಯಲ್ಲಿ ಮಳೆಗಾಲದ ಕಾವೇರಿ ನೀರು ಹಂಚಿಕೆಯ ಕೊನೆಯ ಸಭೆಯಾಗಿದ್ದು, ಈ ಸಭೆಯಲ್ಲಿಯೂ ನೀರು ಬಿಡದಂತೆ ಕರ್ನಾಟಕಕ್ಕೆ ಆದೇಶ ನೀಡದೇ ಇದ್ದರೇ, ರಾಜ್ಯದಲ್ಲಿ ಕುಡಿಯುವ ನೀರು ನಿರ್ವಹಣೆ ಮಾಡುವುದು ಕಷ್ಟವಾಗುವುದಿಲ್ಲ. ಆದರೆ ತಮಿಳುನಾಡಿಗೆ ನೀರು ಹರಿಸುವಂತೆ CWMA ಆದೇಶ ನೀಡಿದರೇ ಕರ್ನಾಟದಲ್ಲಿ ನೀರಿಗಾಗಿ ಮತಷ್ಟು ಸಮಸ್ಯೆ ಉಂಟಾಗಲಿದೆ.