ಸದ್ಯ ಕಾಂಗ್ರೇಸ್ ನಾಯಕರಿಗೆ ಪ್ರಜ್ವಲ್ ರೇವಣ್ಣ ರವರ ಪೆನ್ ಡ್ರೈನ್ ಪ್ರಕರಣದ ದೊಡ್ಡ ಅಸ್ತ್ರವಾಗಿದೆ ಎನ್ನಬಹುದಾಗಿದೆ. ಇದೀಗ ರಾಹುಲ್ ಗಾಂಧಿ ರವರು ಸಹ ಮಾಸ್ ರೇಪಿಸ್ಟ್ ಪರ ಪ್ರಧಾನಿ ಮೋದಿ ಮತಯಾಚನೆ ಮಾಡಿರುವುದು ಇಡೀ ವಿಶ್ವಕ್ಕೆ ಗೊತ್ತಾಗಿದೆ ಎಂದು ಶಿವಮೊಗ್ಗದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಕಿಡಿಕಾರಿದ್ದಾರೆ.
ಕರ್ನಾಟಕದ ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೇಸ್ ಅಭ್ಯರ್ಥಿ ಪರ ರಾಹುಲ್ ಗಾಂಧಿ ಪ್ರಚಾರ ನಡೆಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಮದ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ ಮಾಡಿದ್ದಾರೆ. ಅವರಿಗೆ ಬೆಂಬಲ ನೀಡುತ್ತಾ ರಾಹುಲ್ ಗಾಂಧಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ನೂರಾರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರವೆಸಗಿದ್ದಾರೆ. ಇದು ಸಮೂಹ ಅತ್ಯಾಚಾರವಾಗಿದೆ. ಈ ಪ್ರಕರಣ ಮೊದಲೇ ಬಿಜೆಪಿಯವರಿಗೆ ಗೊತ್ತಿತ್ತು. ಆದರೂ ಪ್ರಧಾನಿಯಿಂದ ಹಿಡಿದು ಎಲ್ಲಾ ಮುಖಂಡರು ಪ್ರಜ್ವಲ್ ರೇವಣ್ಣ ಪರ ಮತ ಯಾಚಿಸಿದ್ದಾರೆ. ಓರ್ವ ಮಾಸ್ ರೇಪಿಸ್ಟ್ ಪರ ಪ್ರಧಾನಿ ಮತಯಾಚನೆ ಮಾಡಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಪ್ರಜ್ವಲ್ ರವರ ಪೆನ್ ಡ್ರೈವ್ ಪ್ರಕರಣವನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ. ಜೊತೆಗೆ ವೇದಿಕೆಯಲ್ಲಿ ಆತನ ಪರ ಪ್ರಚಾರ ಮಾಡಿದ್ದಾರೆ. ಇದು ಬಿಜೆಪಿಯವರ ಸಂಸ್ಕೃತಿಯಾಗಿದ್ದು, ಅಧಿಕಾರಕ್ಕಾಗಿ ಬಿಜೆಪಿಯವರು ಏನು ಬೇಕಾದರೂ ಮಾಡಲು ಸಿದ್ದವಾಗಿರುತ್ತಾರೆ. ಮಾಸ್ ರೇಪಿಸ್ಟ್ ಪ್ರಜ್ವಲ್ ನನ್ನು ವಿದೇಶಕ್ಕೆ ಓಡಿಹೋಗಲು ಅವಕಾಶ ಮಾಡಿಕೊಟ್ಟಿದ್ದಾರೆ. ಜೊತೆಗೆ ಸಿಬಿಐ ಗೆ ಎಲ್ಲಾ ಅಧಿಕಾರವಿದ್ದರೂ ಸಹ ಪ್ರಜ್ವಲ್ ರೇವಣ್ಣರನ್ನು ವಿದೇಶಕ್ಕೆ ಹೋಗಲು ಬಿಟ್ಟಿದ್ದಾರೆ. ಇದೇ ಮೋದಿಯ ಗ್ಯಾರಂಟಿಯಾಗಿದೆ. ಮೋದಿ ಹಾಗೂ ಅಮಿತ್ ಶಾ ಕೂಡಲೇ ದೇಶದ ಜನತೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.