Saturday, August 30, 2025
HomeStateDr B R Ambedkar : ಗುಡಿಬಂಡೆಯಲ್ಲಿ ಅದ್ದೂರಿಯಾಗಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲು ತೀರ್ಮಾನ

Dr B R Ambedkar : ಗುಡಿಬಂಡೆಯಲ್ಲಿ ಅದ್ದೂರಿಯಾಗಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲು ತೀರ್ಮಾನ

Dr B R Ambedkar – ಏಪ್ರಿಲ್ 14 ರಂದು ನಡೆಯುವ ಡಾ,ಬಿ.ಆರ್‍. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್ ರಾಂ ರವರ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಣೆ ಮಾಡಲು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳು ಹಾಗೂ ದಲಿತ ಮುಖಂಡರುಗಳ ಸಮ್ಮುಖದಲ್ಲಿ ತೀರ್ಮಾನಿಸಲಾಯಿತು.

Dr B R Ambedkar – ಅಂಬೇಡ್ಕರ್ ಜಯಂತಿಯನ್ನು ಎಲ್ಲರೂ ಆಚರಿಸುವಂತಾಗಲಿ

ಈ ವೇಳೆ ಮಾತನಾಡಿದ ತಹಸೀಲ್ದಾರ್ ಸಿಗ್ಬತ್ತುಲ್ಲಾ, ಎಲ್ಲ ಜನಾಂಗದವರಿಗೂ ಅಂಬೇಡ್ಕರ್ ರವರು ಸಂವಿಧಾನ ರಚಿಸಿಕೊಟ್ಟಿದ್ದಾರೆ. ಅವರು ರಚಿಸಿಕೊಟ್ಟ ಸಂವಿಧಾನದ ಕಾರಣದಿಂದಲೇ ನಾವೆಲ್ಲರೂ ಇಂದು ಯಾವುದೇ ತೊಂದರೆಯಿಲ್ಲದೇ ಜೀವನ ಸಾಗಿಸುತ್ತಿದ್ದೇವೆ. ಅಂತಹ ಮಹನೀಯರ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅಂಬೇಡ್ಕರ್ ಜಯಂತಿಗೆ ಕೇವಲ ಒಂದು ಸಮುದಾಯದವರು ಸೀಮಿತರಾಗದೇ ಎಲ್ಲರೂ ಹಬ್ಬದಂತೆ ಆಚರಣೆ ಮಾಡಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದರು.

ಏ.5 ರಂದು ಬಾಬು ಜಗಜೀವನ್ ರಾಂ ರವರ ಜಯಂತಿ:  ಇದೇ ಏ.5 ರಂದು ತಾಲೂಕು ಕಚೇರಿಯಲ್ಲಿ ಸಾಂಕೇತಿಕವಾಗಿ ಡಾ.ಬಾಬು ಜಗಜೀವನ್ ರಾಂ ರವರ ಜಯಂತಿ ಆಚರಣೆ ಮಾಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಎಲ್ಲರೂ ತಪ್ಪದೇ ಭಾಗವಹಿಸಬೇಕು. ಏ.14 ರಂದು ಡಾ.ಬಾಬು ಜಗಜೀವನ್ ರಾಂ ಹಾಗೂ ಡಾ.ಬಿ.ಆರ್‍. ಅಂಬೇಡ್ಕರ್‍ ರವರ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.

Dr B R Ambedkar - preparations for Dr. B.R. Ambedkar Jayanti celebration at Gudibande Taluk Offic
– ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ:

ಏ.14 ರಂದು ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೆಲವೊಂದು ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ. ಈ ಸ್ಪರ್ಧೆಗಳಲ್ಲಿ ಗೆದ್ದಂತಹ 3 ಮಂದಿ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರೊತ್ಸಾಹಧನ ನೀಡುವುದದಾಗಿ ತೀರ್ಮಾನಿಸಲಾಯಿತು.

Dr B R Ambedkar – ದಲಿತ ಮುಖಂಡರ ಒತ್ತಾಯ:

ಇನ್ನೂ ಪಟ್ಟಣದ ಅಂಬೇಡ್ಕರ್‍ ವೃತ್ತದಲ್ಲಿ ನಿರ್ಮಾಣವಾಗಿರುವ ಡಾ.ಬಿ.ಆರ್‍.ಅಂಬೇಡ್ಕರ್‍ ಪುತ್ಥಳಿಯ ಬಳಿ ಮತ್ತಷ್ಟು ಕಾಮಗಾರಿ ನಡೆಯಬೇಕಿದೆ. ಜೊತೆಗೆ ಅಲ್ಲಿನ ನಿರ್ವಹಣೆ ಸಹ ಸರಿಯಾಗಿ ನಡೆಯುತ್ತಿಲ್ಲ. ಪುತ್ತಳಿಯ ನಿರ್ವಹಣೆಯನ್ನು ಸ್ಥಳೀಯ ಪ.ಪಂ ಗೆ ಜವಾಬ್ದಾರಿ ವಹಿಸುವುದು ಹಾಗೂ ಸ್ವಚ್ಚತೆ ಕಾಪಾಡುವ ಜವಾಬ್ದಾರಿಯನ್ನು ವಹಿಸಬೇಕೆಂದು ದಲಿತ ಮುಖಂಡರು ಒತ್ತಾಯಿಸಿದರು.

Read this also : ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ, ಅಂಬೇಡ್ಕರ್ ರವರ ಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಬಿಇಒ ಕೃಷ್ಣಪ್ಪ ಹೇಳಿಕೆ…!

ಈ ಸಭೆಯಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಣಾಧಿಕಾರಿ ನಾಗಮಣಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಲಕ್ಷ್ಮೀಪತಿರೆಡ್ಡಿ, ಕೃಷಿ ಇಲಾಖೆಯ ಕೇಶವರೆಡ್ಡಿ, ಬಿಇಒ ಕೃಷ್ಣಪ್ಪ, ಪ.ಪಂ ಅಧ್ಯಕ್ಷ ವಿಕಾಸ್, ಮುಖ್ಯಾಧಿಕಾರಿ ಸಭಾ ಶಿರೀನ್, ಸರ್ಕಾರಿ ನೌಕರರ ಸಂಘದ ಕೆ.ವಿ.ನಾರಾಯಣಸ್ವಾಮಿ, ದಲಿತ ಮುಖಂಡರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular