ರಾಜ್ಯದಲ್ಲಿ ಕೆಲವು ದಿನಗಳಿಂದ ಬಿಸಿಲಿನ ತಾಪಕ್ಕೆ ಜನಜೀವನ ತತ್ತರಿಸಿಹೋಗಿದ್ದರು. ಎ.ಸಿ, ಕೂಲರ್, ಫ್ಯಾನ್ ಗಳಿಗೆ ತುಂಬಾನೆ ಬೇಡಿಕೆ ಸಹ ಇತ್ತು. ಇದೀಗ ಬಿಸಿಲಿನ ತಾಪಕ್ಕೆ ತತ್ತರಿಸಿದ್ದ ಜನರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಹಾಸನ, ಕೋಲಾರ, ಮೈಸೂರು, ಮಂಡ್ಯ, ಶಿವಮೊಗ್ಗ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಇನ್ನೂ ಕಲಬುರಗಿ ಹಾಗೂ ರಾಯಚೂರಿನಲ್ಲಿ 44.0 ಡಿಗ್ರಿ ಸೆಲ್ಸಿಯಸ್ ನಷ್ಟು ಅತ್ಯಂತ ಗರಿಷ್ಟ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತವರಣವಿರಲಿದೆ. ಎಚ್.ಎ.ಎಲ್ ನಲ್ಲಿ ಗರಿಷ್ಟ ಉಷ್ಣಾಂಶ 36.6 ಡಿಗ್ರಿ ಸೆಲ್ಸಿಯಸ್, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಟ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಗರಿಷ್ಟ 37.0 ಡಿಗ್ರಿ ಸೆಲ್ಸಿಯಸ್, ಕನಿಷ್ಟ 23.3 ಡಿಗ್ರಿ ಸೆಲ್ಸಿಯಸ್, ಜಿಕೆವಿಕೆಯಲ್ಲಿ ಗರಿಷ್ಟ 37.0 ಉಷ್ಣಾಂಶ, 20.8 ಡಿಗ್ರಿ ಕನಿಷ್ಟ ಉಷ್ಣಾಂಶ ದಾಖಲಾಗಿದೆ. ಅದರಂತೆ ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶ 41.7 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24.1 ಡಿಗ್ರಿ ಸೆಲ್ಸಿಯಸ್, ಧಾರವಾಡದಲ್ಲಿ ಗರಿಷ್ಠ ಉಷ್ಣಾಂಶ 39.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20.0 ಡಿಗ್ರಿ ಸೆಲ್ಸಿಯಸ್, ಬೆಳಗಾವಿಯಲ್ಲಿ ಗರಿಷ್ಠ ಉಷ್ಣಾಂಶ 39.0 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.