Anganwadi – ಗುಡಿಬಂಡೆಯಲ್ಲಿ 20 ಲಕ್ಷ ವೆಚ್ಚದ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಚಾಲನೆ

Anganwadi – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ತಿರುಮಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಕಂಬಾಲಹಳ್ಳಿ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.

Anganawadi - MLA S.N. Subbareddy performing bhoomi pooja for Anganwadi building construction in Kambalahalli village

Anganwadi – ಎಲ್ಲಾ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸುವ ಭರವಸೆ

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಗುಡಿಬಂಡೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ಗಳು ಇದ್ದು ಅವುಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಅಡುಗೆ ಮಾಡುವುದು ಅಲ್ಲೇ ಮಕ್ಕಳಿಗೆ ಪಾಠ ಹೇಳುವುದು ಅಲ್ಲೇ ಇಕ್ಕಟ್ಟಾದ ಜಾಗದಲ್ಲಿ ಅಂಗನವಾಡಿ ಕೇಂದ್ರ ನಡೆಸುತ್ತಿದ್ದಾರೆ. ಈ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದೇನೆ. ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಭರವಸೆ ನೀಡಿದರು. Read this also : Akrama Sakrama Scheme : ರೈತರಿಗೆ ಶೀಘ್ರ ಭೂಮಿ ಮಂಜೂರು ಭರವಸೆ – ಶಾಸಕ ಸುಬ್ಬಾರೆಡ್ಡಿ

Anganawadi - MLA S.N. Subbareddy performing bhoomi pooja for Anganwadi building construction in Kambalahalli village

Anganwadi – ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿ

ಇನ್ನೂ ಈ ಒಂದು ಅಂಗನವಾಡಿ ಕೇಂದ್ರಕ್ಕೆ ಸರ್ಕಾರದಿಂದ 12 ಲಕ್ಷ 8 ಲಕ್ಷ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಒಟ್ಟು 20 ಲಕ್ಷ ವೆಚ್ಚದ ಎಲ್ಲಾ ಸೌಲಭ್ಯ ಇರುವ ಅಂಗನವಾಡಿ ಕೇಂದ್ರ ನಿರ್ಮಾಣವಾಗಲಿದೆ ಎಂದರು. ಈ ವೇಳೆ ಗ್ರಾಮ ಪಂಚಾಯತಿ ಹಾಲಿ ಸದಸ್ಯೆ ಮಾಜಿ ಅಧ್ಯಕ್ಷೆ ಇಂದಿರಾ ಅಶ್ವತ್ಥರೆಡ್ಡಿ, ಕಂಬಾಲಹಳ್ಳಿ ಗ್ರಾಮದ ಸದಸ್ಯೆ ಲಕ್ಷ್ಮಿ ದೇವಮ್ಮ, ಸದಸ್ಯ ವೆಂಕಟಸ್ವಾಮಿ, ಪಿಡಿಓ ಶ್ರೀನಿವಾಸ್,ಪಿಆರ್.ಇಡಿ ಇಂಜಿನಿಯರ್ ಅನಿಲ್ ಕುಮಾರ್, ಸಿಡಿಪಿಓ ರಫೀಕ್,  ಮುಖಂಡರಾದ ತಿಪ್ಪರೆಡ್ಡಿ, ನರಸಿಂಹಪ್ಪ,  ಎಂಎಂ ಹಳ್ಳಿ ಅಶ್ವತ್ಥಪ್ಪ, ಸೇರಿದಂತೆ ಅಂಗನವಾಡಿ ಕಾರ್ಯಕರ್ತರು, ಕಾಂಗ್ರೆಸ್ ಮುಖಂಡರು, ಗ್ರಾಮಸ್ಥರು ಇದ್ದರು.

Leave a Comment

Your email address will not be published. Required fields are marked *

Scroll to Top