S N Subbareddy : ಶಾಸಕ ಸುಬ್ಬಾರೆಡ್ಡಿಯವರ ಜನ್ಮದಿನಾಚರಣೆ ಅಂಗವಾಗಿ ಅನ್ನಸಂತರ್ಪಣೆ, ಹಣ್ಣು ಹಂಪಲು ವಿತರಣೆ

S N Subbareddy – ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿಯವರ ಜನ್ಮ ದಿನಾಚರಣೆ ಅಂಗವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಹಾಗೂ ತಾಲೂಕು ಕಚೇರಿಯ ಮುಂಭಾಗ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ತಾಲೂಕು ಬ್ಲಾಕ್ ಕಾಂಗ್ರೇಸ್ ಹಾಗೂ ಯೂತ್ ಕಾಂಗ್ರೇಸ್ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

S N Subbareddy's birthday celebrated with fruit distribution and food service

S N Subbareddy – ಶಾಸಕರ ಸೇವೆ ಸದಾ ಮುಂದುವರೆಯುತ್ತಿರಲಿ

ಈ ಸಮಯದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ತಾಲೂಕು ಅಧ್ಯಕ್ಷ ಆದಿರೆಡ್ಡಿ ಮಾತನಾಡಿ, ಗುಡಿಬಂಡೆ, ಬಾಗೇಪಲ್ಲಿ ಹಾಗೂ ಚೇಳೂರು ಮೂರು ತಾಲೂಕುಗಳ ಶಾಸಕರಾದ ಎಸ್.ಎನ್.ಸುಬ್ಬಾರೆಡ್ಡಿರವರು ಸುಮಾರು ವರ್ಷಗಳಿಂದ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಸಾಮೂಹಿಕ ವಿವಾಹಗಳು, ಆರೋಗ್ಯ ಶಿಬಿರಗಳು, ಶೈಕ್ಷಣಿಕ ಶಿಬಿರಗಳು ಸೇರಿದಂತೆ ಸದಾ ಬಡವರ, ರೈತರ ಪರ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರ ಸಾಮಾಜಿಕ ಸೇವೆಯನ್ನು ಮೆಚ್ಚು ಸತತವಾಗಿ ಮೂರು ಬಾರಿ ಶಾಸಕರನ್ನಾಗಿ ಮಾಡಿದ್ದಾರೆ. ಅವರ ಸೇವೆ ಸದಾ ಹೀಗೆ ಮುಂದುವರೆಯಲಿ ಎಂದು ಶುಭ ಹಾರೈಸಿದರು.

S N Subbareddy – ಶಾಸಕ ಸುಬ್ಬಾರೆಡ್ಡಿಯವರಿಗೆ ಮಂತ್ರಿ ಸ್ಥಾನ ಸಿಗಲಿ

ಬಳಿಕ ಯೂತ್ ಕಾಂಗ್ರೇಸ್ ನ ತಾಲೂಕು ಅಧ್ಯಕ್ಷ ಅಂಬರೀಶ್ ಮಾತನಾಡಿ, ನಮ್ಮ ಶಾಸಕರಾದ ಸುಬ್ಬಾರೆಡ್ಡಿಯವರು ಸುಮಾರು 25 ವರ್ಷಗಳಿಂದ ಕ್ಷೇತ್ರದಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದಾರೆ. ಇಂದು ಅವರ ಹುಟ್ಟುಹಬ್ಬವಾಗಿದೆ. ಆದರೆ ಅವರಿಗೆ ಆಡಂಬರದ ಆಚರಣೆ ಇಷ್ಟವಾಗೊಲ್ಲ. ಖುದ್ದು ಅವರೇ ಆಡಂಬರದ ಆಚರಣೆಯ ಬದಲಿಗೆ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಬಾಗೇಪಲ್ಲಿಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಅವರ ಸೂಚನೆಯಂತೆ ಗುಡಿಬಂಡೆಯಲ್ಲಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು, ತಾಲೂಕು ಕಚೇರಿಯ ಮುಂಭಾಗ ಅನ್ನಸಂತರ್ಪಣೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸತತವಾಗಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾದಂತಹ ಸುಬ್ಬಾರೆಡ್ಡಿಯವರಿಗೆ ಈ ಭಾರಿ ಕಡ್ಡಾಯವಾಗಿ ಮಂತ್ರಿ ಸ್ಥಾನ ನೀಡಬೇಕೆಂಬುದು ಈ ಭಾಗದ ಜನರ ಬೇಡಿಕೆಯಾಗಿದ್ದು, ಮುಖ್ಯಮಂತ್ರಿಗಳು ನಮ್ಮ ಬೇಡಿಕೆ ಪೂರೈಸುತ್ತಾರೆಂಬ ನಂಬಿಕೆಯಿದೆ ಎಂದರು. Read this also : ರೈತರಿಗೆ ಶೀಘ್ರ ಭೂಮಿ ಮಂಜೂರು ಭರವಸೆ – ಶಾಸಕ ಸುಬ್ಬಾರೆಡ್ಡಿ

S N Subbareddy's birthday celebrated with fruit distribution and food service

S N Subbareddy –  ಕಾರ್ಯಕ್ರಮದಲ್ಲಿ ಹಾಜರಿದ್ದ ಗಣ್ಯರು

ಕಾರ್ಯಕ್ರಮದಲ್ಲಿ ಪಪಂ ಅಧ್ಯಕ್ಷ ವಿಕಾಸ್, ಸದಸ್ಯರಾದ ರಾಜೇಶ್, ಆದಿನಾರಾಯಣಪ್ಪ, ಕಾಂಗ್ರೇಸ್ ಪಕ್ಷದ ಮುಖಂಡರಾದ ರಘುನಾಥರೆಡ್ಡಿ, ನರಸಿಂಹಮೂರ್ತಿ, ಹೆಚ್.ಪಿ.ಲಕ್ಷ್ಮೀನಾರಾಯಣ, ಕೃಷ್ಣೆಗೌಡ, ನಯಾಜ್, ಮಂಜುನಾಥ್, ನಾಗೇಶ್, ಕೃಷ್ಣಪ್ಪ ಸೇರಿದಂತೆ ಹಲವರು ಇದ್ದರು.

Leave a Comment

Your email address will not be published. Required fields are marked *

Scroll to Top