Education – ಉತ್ತಮ ಫಲಿತಾಂಶ ಹಾಗೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಥಮಿಕ ಹಂತದಿಂದ ಪ್ರೌಢಶಾಲಾ ಹಂತದವರೆಗೂ ಶಿಕ್ಷಕರು ಹಾಗೂ ಅಧಿಕಾರಿಗಳು ಶ್ರಮಿಸಬೇಕೆಂದು, ಈ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮವಾಗಿಸಲು ಶಿಕ್ಷಕರು ಪಣ ತೊಡಬೇಕೆಂದು ಎಂದು ಗುಡಿಬಂಡೆ ತಾ.ಪಂ. ಇಒ ನಾಗಮಣಿ ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯ ಆವರಣದಲ್ಲಿ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಅಭಿಯಾನದಡಿ ಏರ್ಪಡಿಸಿದ್ದ ನಮ್ಮ ಶಾಲೆ, ನಮ್ಮ ಜವಾಬ್ದಾರಿ ಕಾರ್ಯಕ್ರಮದಲ್ಲಿ ಮಾತನಾಡಿದರು.
Education – ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ಶಿಕ್ಷಕರು ಮತ್ತು ಪೋಷಕರ ಪಾತ್ರ ಮುಖ್ಯ
ಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡುವುದು ನಮ್ಮೆಲ್ಲರ ಕರ್ತವ್ಯ. ಮಕ್ಕಳನ್ನು ಪ್ರಾಥಮಿಕ ಹಂತದಿಂದಲೇ ಉತ್ತಮ ಶಿಕ್ಷಿತರನ್ನಾಗಿ ಮಾಡಬೇಕು. ಪರೀಕ್ಷೆ ಸಮಯದಲ್ಲಿ ಮಾತ್ರ ಹೆಚ್ಚು ಒತ್ತು ಕೊಡದೇ, ಶಾಲೆಯ ಆರಂಭದಿಂದಲೂ ಮಕ್ಕಳಲ್ಲಿ ಓದು ಹವ್ಯಾಸ ಬೆಳೆಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಸಹ ತರಗತಿ ಆರಂಭದಿಂದಲೇ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಂಡು ಮಕ್ಕಳಿಗೆ ಮನಮುಟ್ಟುವ ರೀತಿಯಲ್ಲಿ ಬೋಧನೆ ಮಾಡಬೇಕು. ಜೊತೆಗೆ ಆಗಿದ್ದಾಂಗೆ ಅವರ ಶೈಕ್ಷಣಿಕ ಸಾಮರ್ಥ್ಯವನ್ನು ಸಹ ಪರೀಕ್ಷೆ ಮಾಡುತ್ತಿರಬೇಕು. ಇದರ ಜೊತೆಗೆ ಪೋಷಕರು ಸಹ ತಮ್ಮ ಮಕ್ಕಳ ಮೇಲೆ ನಿಗಾ ಇಟ್ಟಿರಬೇಕು. ತಮ್ಮ ಮಕ್ಕಳು ಯಾವ ರೀತಿ ಓದುತ್ತಿದ್ದಾರೆ, ಹೇಗೆ ಓದುತ್ತಿದ್ದಾರೆ ಎಂಬುದನ್ನು ಗಮನಿಸುತ್ತಿರಬೇಕು.
Education – ಶೈಕ್ಷಣಿಕ ಅಭಿವೃದ್ಧಿಗೆ ಅಧಿಕಾರಿಗಳ ಕ್ರಮ
ಮಕ್ಕಳಿಗೆ ಮೊಬೈಲ್, ಟಿ.ವಿ ಗಳಿಗೆ ದಾಸರಾಗದಂತೆ ನೋಡಿಕೊಳ್ಳಬೇಕು. ಜೊತೆಗೆ ಮಕ್ಕಳೂ ಸಹ ಓದುವ ಸಮಯವನ್ನು ವ್ಯರ್ಥ ಮಾಡಬಾರದು. ನಿಮ್ಮ ಜೊತೆ ಓದಿದ ಸಹಪಾಠಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದರೇ, ತಾವು ಸಹ ಅದೇ ಪಾಠವನ್ನು ಕೇಳಿರುತ್ತೀರಿ. ನೀವು ಏಕೆ ಕಡಿಮೆ ಅಂಕ ತೆಗೆದುಕೊಳ್ಳುತ್ತೀರಿ ಎಂಬುದನ್ನು ಚಿಂತನೆ ಮಾಡಬೇಕು. ಗುಡಿಬಂಡೆ ತಾಲೂಕಿನ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಶಿಕ್ಷಣ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೂ ಸಹ ಕ್ರಮ ತೆಗೆದುಕೊಳ್ಳಬೇಕುಎಂದರು.
Education – ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಲಭ್ಯ: ಬಿಇಒ ಕೃಷ್ಣಕುಮಾರಿ
ಬಳಿಕ ಬಿಇಒ ಕೃಷ್ಣಕುಮಾರಿ ಮಾತನಾಡಿ. ಖಾಸಗಿ ಶಾಲೆಗಳು, ಇಂಗ್ಲೀಷ್ ವ್ಯಾಮೋಹದ ಕಾರಣದಿಂದ ಅನೇಕರು ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ಭಾವನೆ ತೊರಿ, ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ದಾಖಲು ಮಾಡುತ್ತಿದ್ದಾರೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತ ಉತ್ತಮ ವಾತಾವರಣ ಹಾಗೂ ಶಿಕ್ಷಣ ದೊರೆಯುತ್ತಿದ್ದು, ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು. ಕಡ್ಡಾಯ ಶಿಕ್ಷಣದಡಿ ಮಕ್ಕಳಿಗೆ ಉಚಿತವಾಗಿ ಶಿಕ್ಷಣವನ್ನು ಸರ್ಕಾರದಿಂದಲೇ ನೀಡಲಾಗುತ್ತಿದೆ. ಅನೇಕ ಮಾದ್ಯಮದಲ್ಲಿ ಬೋದನೆ ಮಾಡಲಾಗುತ್ತಿದೆ. ಪಿಎಂ ಶ್ರೀ ಶಾಲೆಗಳನ್ನು ಆರಂಭಿಸಲಾಗಿದೆ. ವಸತಿ ಶಾಲೆಗಳ ಮೂಲಕ ಮಕ್ಕಳಿಗೆ ಮತ್ತಷ್ಟು ಅನುಕೂಲವಾಗುವಂತೆ ಮಾಡಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಇಷ್ಟೆಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಮಕ್ಕಳು ಅವುಗಳನ್ನು ಸದ್ಬಳಕೆ ಮಾಡಿಕೊಂಡು ಸಾದನೆ ಮಾಡಬೇಕು ಎಂದು ಸಲಹೆ ನೀಡಿದರು.
Read this also : ಮಕ್ಕಳ ಪ್ರತಿಭೆಗೆ ವೇದಿಕೆಯಾದ ಗುಡಿಬಂಡೆ ವಿಕಾಸ ಕೇಂದ್ರದ ಬಾಲಸಂಗಮ….!
Education – ಕಾರ್ಯಕ್ರಮದಲ್ಲಿದ್ದ ಗಣ್ಯರು
ಈ ವೇಳೆ ಪಪಂ ಅಧ್ಯಕ್ಷ ವಿಕಾಸ್, ಬಿ.ಆರ್.ಸಿ ಕಚೇರಿಯ ಗಂಗರತ್ನಮ್ಮ, ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ರವೀಂದ್ರ, ಇಸಿಒ ರಘು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಾಲಾಜಿ, ಶ್ರೀರಾಮಪ್ಪ, ಪ್ರೌಢಶಾಲಾ ಶಿಕ್ಷಕರ ಸಂಘದ ಲಕ್ಷ್ಮೀನರಸಿಂಹಗೌಡ, ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಮುರಳಿ ಸೇರಿದಂತೆ ಹಲವರು ಹಾಜರಿದ್ದರು