Child Labour : ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ನ್ಯಾ. ಸವಿತಾ ರುದ್ರಗೌಡ ಚಿಕ್ಕನಗೌಡರ್

Child Labour – ಮಕ್ಕಳ ಭವಿಷ್ಯದ ಹಾದಿ ಶಿಕ್ಷಣದಿಂದ ಮಾತ್ರ ಸುಗಮವಾಗುತ್ತದೆ. ಬಾಲಕಾರ್ಮಿಕ ಪದ್ಧತಿ ಎಂಬ ಪಿಡುಗು ನಮ್ಮ ಸಮಾಜದಿಂದ ಸಂಪೂರ್ಣವಾಗಿ ನಿರ್ಮೂಲನೆ ಆಗಬೇಕು. ಇದಕ್ಕಾಗಿ ಪೋಷಕರು, ಅಧಿಕಾರಿಗಳು ಮತ್ತು ಸಾರ್ವಜನಿಕರು ಒಟ್ಟಾಗಿ ಕೈಜೋಡಿಸಬೇಕು ಎಂದು ಗುಡಿಬಂಡೆ ಜೆಎಂಎಫ್‌ಸಿ ನ್ಯಾಯಾಧೀಶರಾದ ಸವಿತಾ ರುದ್ರಗೌಡ ಚಿಕ್ಕನಗೌಡರ್ ಅವರು ಕರೆ ನೀಡಿದ್ದಾರೆ.

World Day Against Child Labour awareness event at a government girls' high school in Gudibande, Chikkaballapur district.

ಚಿಕ್ಕಬಳ್ಳಾಪುರದ ಗುಡಿಬಂಡೆ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತಿ ರವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Child Labour – ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ

ನಂತರ ತಾಪಂ ಇಒ ನಾಗಮಣಿ ಮಾತನಾಡಿ, ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆದುಕೊಳ್ಳುವಂತೆ ತಿಳುವಳಿಕೆ ಮೂಡಿಸಿದರು, ಶಾಲಾ ಆವರಣ, ಬಸ್ ನಿಲ್ದಾಣ, ಅಥವಾ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ನಿಮ್ಮ ನೆರೆ ಹೊರೆಯ ವಾಸಸ್ಥಳಗಳಲ್ಲಿ ಅಪ್ರಾಪ್ತ ಹೆಣ್ಣುಮಕ್ಕಳನ್ನು ಲೈಂಗಿಕ ಸಂಪರ್ಕಕ್ಕೆ ಪ್ರಚೋದಿಸುವುದು, ನಿಮ್ಮೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುವುದು, ಬಾಲ್ಯ ವಿವಾಹ ಮಾಡಲು ಪ್ರಯತ್ನಿಸುವುದು ಸೇರಿದಂತೆ ನಿಮ್ಮ ಶೈಕ್ಷಣಿಕ ಪ್ರಗತಿಗೆ ಅಡ್ಡಿ ಉಂಟು ಮಾಡುವ ವ್ಯಕ್ತಿಗಳು ಯಾರೇ ಇದ್ದರೂ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಅಥವಾ ಹೆಲ್ಪ್ ಲೈನ್ 112 ಗೆ ಕರೆ ಮಾಡುವಂತೆ ಸೂಚನೆ ನೀಡಿದರು.

World Day Against Child Labour awareness event at a government girls' high school in Gudibande, Chikkaballapur district.

Child Labour – ಬಾಲಕಾರ್ಮಿಕ ಪದ್ಧತಿ: ಒಂದು ಅಪರಾಧ

ನಂತರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಕೀಲರ ಎಸ್.ವಿ. ನಂದೀಶ್ವರ ರೆಡ್ಡಿ ಮಾತನಾಡಿ, 14 ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಅಪರಾಧವಾಗಿದ್ದು ಪೋಷಕರಾಗಲಿ,  ಮಾಲಿಕರಾಗಲಿ ಈ ವಯಸ್ಸಿನ ಮಕ್ಕಳನ್ನು ದುಡಿಮೆಗೆ ಹಚ್ಚುವುದು ಅಪರಾಧವಾಗಿದ್ದು ಬಾಲ ಕಾರ್ಮಿಕರನ್ನು ದುಡಿಮೆಗೆ ಹಚ್ಚಿರುವ ವಿಚಾರ ಕಂಡುಬಂದಲ್ಲಿ ಅಂತಹವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು, ಬಾಲಕಾರ್ಮಿಕರು ಕೂಲಿ ಕೆಲಸದಲ್ಲಿ ತೊಡಗಿಸಿಕೊಂಡಿರುವು ಎಲ್ಲಾದರೂ ಕಂಡು ಬಂದಲ್ಲಿ ಸಾರ್ವಜನಿಕರು ಅಧಿಕಾರಿಗಳಿಗೆ ಮಾಹಿತಿ ನೀಡಬೇಕೆಂದು ತಿಳಿಸಿದರು.

Read this also : ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಎಲ್ಲರೂ ಶ್ರಮಿಸಬೇಕು: ತಾ.ಪಂ. ಇಒ ನಾಗಮಣಿ

Child Labour – ಕಾರ್ಯಕ್ರಮದಲ್ಲಿದ್ದ ಗಣ್ಯರು

ಇದೇ ಸಮಯದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಕೀಲರ ಎಸ್.ವಿ. ನಂದೀಶ್ವರ ರೆಡ್ಡಿ, ಬಿಇಒ ಕೃಷ್ಣ ಕುಮಾರಿ, ವಕೀಲರ ಸಂಘದ ಅಧ್ಯಕ್ಷ ಟಿ.ಸಿ.ಅಶ್ವತ್ಥರೆಡ್ಡಿ, ಸಹಾಯಕ ಸರ್ಕಾರಿ ಅಭಿಯೋಜಕ ವಿ ರಾಮಮೂರ್ತಿ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಟಿಪಿಒ ಮುರಳಿ, ಶಾಲೆಯ ಮುಖ್ಯ ಶಿಕ್ಷಕರು, ವಕೀಲರಾದ ನರೇಂದ್ರ, ನ್ಯಾಯಾಲಯದ ಸಿಬ್ಬಂದಿ ಸುರೇಶ್, ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Leave a Comment

Your email address will not be published. Required fields are marked *

Scroll to Top