Dr K Sudhakar – ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದ ಗುತ್ತಿಗೆ ನೌಕರ ಬಾಬು ಅವರ ಆತ್ಮಹತ್ಯೆ ಪ್ರಕರಣವು ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ತಮ್ಮ ಡೆತ್ ನೋಟ್‌ನಲ್ಲಿ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರ ಹೆಸರನ್ನು ಉಲ್ಲೇಖಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಕುರಿತು ನವದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಈ ಘಟನೆಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Dr K Sudhakar – ಏನಿದು ಪ್ರಕರಣ?
ಆ.7ರ ಬೆಳಗಿನ ಜಾವ ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಗುತ್ತಿಗೆ ನೌಕರ ಬಾಬು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ನಡೆದ ನಂತರ ಪತ್ತೆಯಾದ ಡೆತ್ ನೋಟ್‌ನಲ್ಲಿ ಡಾ. ಕೆ. ಸುಧಾಕರ್ ಅವರ ಹೆಸರು ಉಲ್ಲೇಖವಾಗಿತ್ತು. ಇದೇ ಕಾರಣಕ್ಕಾಗಿ ಈ ಪ್ರಕರಣದಲ್ಲಿ ರಾಜಕೀಯದ ವಾಸನೆ ಕಾಣುತ್ತಿದೆ. ಕಾಂಗ್ರೆಸ್ ನಾಯಕರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ. ಇತ್ತ ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುಧಾಕರ್ ಅವರು ತಮ್ಮ ಮೇಲಿನ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.
Dr K Sudhakar – ಮಾದ್ಯಮಗಳಿಗೆ ಸಂಸದ ಸುಧಾಕರ್ ಹೇಳಿದ್ದೇನು?
ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಸುಧಾಕರ್, “ನನಗೆ ಬಾಬು ಎಂಬ ವ್ಯಕ್ತಿ ಯಾರು ಎಂದು ಗೊತ್ತಿಲ್ಲ, ನಾನು ಅವನನ್ನು ಮುಖತಃ ನೋಡಿಲ್ಲ. ಈ ದುರಂತ ಸಾವಿನಿಂದ ನನಗೆ ನೋವಾಗಿದೆ. ನನ್ನ ಸಾರ್ವಜನಿಕ ಜೀವನದಲ್ಲಿ ನಾನು ಈ ವ್ಯಕ್ತಿಯನ್ನು ಎಂದೂ ಭೇಟಿಯಾಗಿಲ್ಲ” ಎಂದು ಹೇಳಿದ್ದಾರೆ. “ನಾನು ಸಚಿವ ಮತ್ತು ಶಾಸಕನಾಗಿದ್ದಾಗ ಅನೇಕರಿಗೆ ಸಹಾಯ ಮಾಡಿದ್ದೇನೆ, ಆದರೆ ಈ ವ್ಯಕ್ತಿ ನನಗೆ ಸಂಪೂರ್ಣ ಅಪರಿಚಿತ. ಈ ವ್ಯಕ್ತಿ ನನ್ನ ಹೆಸರನ್ನು ಡೆತ್ ನೋಟ್‌ನಲ್ಲಿ ಯಾಕೆ ಬರೆದಿದ್ದಾರೆ ಎಂದು ನನಗೆ ಗೊತ್ತಿಲ್ಲ” ಎಂದು ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
“ಈ ಸಾವಿನ ಹಿಂದಿನ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಶಾಸಕರು ಮತ್ತು ಉಸ್ತುವಾರಿ ಸಚಿವರು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ದೆಹಲಿಯಿಂದ ಹಿಂತಿರುಗಿದ ನಂತರ ನಾನು ಬಾಬು ಅವರ ಕುಟುಂಬದವರನ್ನು ಭೇಟಿ ಮಾಡುತ್ತೇನೆ ಮತ್ತು ಅವರಿಗೆ ಸಾಂತ್ವನ ಹೇಳುತ್ತೇನೆ” ಎಂದು ಸುಧಾಕರ್ ತಿಳಿಸಿದ್ದಾರೆ.
Dr K Sudhakar – ರಾಜಕೀಯ ಪಿತೂರಿಯ ಆರೋಪ ಮತ್ತು ನ್ಯಾಯಯುತ ತನಿಖೆಗೆ ಒತ್ತಾಯ
ಡಾ. ಕೆ. ಸುಧಾಕರ್ ಅವರು ಈ ಪ್ರಕರಣದ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕರ ಹೆಸರನ್ನು ಉಲ್ಲೇಖಿಸಿ, “ಕಾಂಗ್ರೆಸ್ ಶಾಸಕರ ಹೆಸರು ಬಂದರೆ ಒಂದು ಕಾನೂನು, ಬಿಜೆಪಿ ನಾಯಕರ ಹೆಸರು ಬಂದರೆ ಮತ್ತೊಂದು ಕಾನೂನು ಎಂಬಂತೆ ವರ್ತಿಸುತ್ತಿದ್ದಾರೆ. ಬಾಬು ಅವರ ಸಾವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ” ಎಂದು ತಿರುಗೇಟು ನೀಡಿದ್ದಾರೆ.
ರಾಜಕೀಯ ಪ್ರಭಾವದ ಬಗ್ಗೆ ಸುಧಾಕರ್ ವಿವರಣೆ
“ಈ ಪ್ರಕರಣದಲ್ಲಿ ನಾಗೇಶ್ ಮತ್ತು ಮಂಜುನಾಥ್ ಎಂಬ ಇಬ್ಬರು ವ್ಯಕ್ತಿಗಳು, ಕೆಲಸ ಕೊಡಿಸುವುದಾಗಿ ಹೇಳಿ ₹15 ಲಕ್ಷ ಪಡೆದಿದ್ದಾರೆ ಎಂಬ ಮಾಹಿತಿ ಇದೆ. ನಾಗೇಶ್ ಅವರ ಮಾವ ಕೃಷ್ಣಮೂರ್ತಿ ನಮ್ಮ ಪಕ್ಷದಲ್ಲಿ ಇದ್ದವರು. ಆದರೆ ಈ ಪ್ರಕರಣವನ್ನು ರಾಜಕೀಯ ಕಾರಣಗಳಿಗಾಗಿ ತಿರುಚುವ ಪ್ರಯತ್ನ ನಡೆದಿದೆ” ಎಂದು ಸುಧಾಕರ್ ಆರೋಪಿಸಿದ್ದಾರೆ. Read this also : ಸರ್ಕಾರಿ ಕೆಲಸ ಕೊಡಿಸೋದಾಗಿ ವಂಚನೆ ಆರೋಪ, ಸಂಸದ ಡಾ.ಕೆ.ಸುಧಾಕರ್ ಹೆಸರು ಉಲ್ಲೇಖಿಸಿ ಚಾಲಕ ಆತ್ಮ*ಹತ್ಯೆ
Dr K Sudhakar – ಪಾರದರ್ಶಕ ತನಿಖೆಗೆ ಒತ್ತಾಯ
ಇನ್ನೂ ಡಾ. ಸುಧಾಕರ್ ಅವರು ಈ ಪ್ರಕರಣದ ಬಗ್ಗೆ ನ್ಯಾಯಯುತ ಮತ್ತು ಪಾರದರ್ಶಕ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. “ತಪ್ಪಿತಸ್ಥರು ಯಾರೇ ಆಗಿರಲಿ, ಅವರಿಗೆ ಕಠಿಣ ಶಿಕ್ಷೆಯಾಗಲಿ. ಈ ಘಟನೆಯ ಬಗ್ಗೆ ಮಾಧ್ಯಮಗಳಲ್ಲಿ ಟ್ರಯಲ್ ನಡೆಯುವುದು ಬೇಡ. ದೆಹಲಿಯಿಂದ ಬಂದ ನಂತರ ನಾನು ಮೃತರ ಕುಟುಂಬಸ್ಥರನ್ನು ಭೇಟಿಯಾಗಿ, ಅವರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ” ಎಂದು ಭರವಸೆ ನೀಡಿದ್ದಾರೆ.