Monday, August 11, 2025
HomeStateLocal News : ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಒತ್ತು: ಶಾಸಕ ಸುಬ್ಬಾರೆಡ್ಡಿ

Local News : ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಒತ್ತು: ಶಾಸಕ ಸುಬ್ಬಾರೆಡ್ಡಿ

Local News – ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ ಭಾಗಗಳಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿ ಹೋಬಳಿ ವ್ಯಾಪ್ತಿಯ ಸೋಮೇಶ್ವರ-ಸಾದಲಿ ಮುಖ್ಯ ರಸ್ತೆ ಅಭಿವೃದ್ದಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದರು.

MLA S.N. Subbareddy at groundbreaking ceremony for Someshwara–Sadali main road development project worth ₹5 crore in Gudibande taluk, Karnataka - Local News

Local News – 5 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿ

ಇಂದು ಚಿಕ್ಕಬಳ್ಳಾಪುರದ ಪೇರೆಸಂದ್ರ ಕ್ರಾಸ್ ಬಳಿಯಿಂದ ಸಾದಲಿ, ಸೋಮೇಶ್ವರ ಮಾರ್ಗ ಗುಂಡಿಗಳಿಂದ ಕೂಡಿದ್ದು, ಜನರು ಸಂಚರಿಸಲು ಕಷ್ಟಕರವಾಗಿತ್ತು. ಈ ಭಾಗದ ಜನರು ಸುಮಾರು ದಿನಗಳಿಂದ ರಸ್ತೆ ದುರಸ್ಥಿಗಾಗಿ ಮನವಿ ಮಾಡಿದ್ದರು. ಅದರಂತೆ ಇದೀಗ ಸುಮಾರು 5 ಕೋಟಿ ವೆಚ್ಚದಲ್ಲಿ ಈ ರಸ್ತೆ ಅಭಿವೃದ್ದಿ ಕಾಮಗಾರಿ ನಡೆಯಲಿದೆ ಎಂದರು. ಇನ್ನೂ ಈಗಾಗಲೇ ಗುತ್ತಿಗೆದಾರರಿಗೆ ಗುಣಮಟ್ಟದ ಕಾಮಗಾರಿಯನ್ನು ನೆರವೇರಿಸುವಂತೆ ಸೂಚನೆ ನೀಡಿದ್ದೇನೆ. ಗ್ರಾಮಸ್ಥರು ಸಹ ಕಾಮಗಾರಿಯ ಗುಣಮಟ್ಟ ಕಾಪಾಡುವಲ್ಲಿ ಗಮನ ಹರಿಸಬೇಕು. ಇನ್ನೂ ಮುದ್ದರೆಡ್ಡಿಹಳ್ಳಿ ಗ್ರಾಮದ ರಸ್ತೆ ಸಹ ತುಂಬಾನೆ ಹದೆಗಟ್ಟಿದ್ದು, ಜನರಿಗೆ ಸಮಸ್ಯೆಯಾಗಿದೆ. ಈ ರಸ್ತೆಯನ್ನು ದುರಸ್ಥಿ ಮಾಡಲು ಈಗಾಗಲೇ ಅನುಮೋದನೆ ಕಳುಹಿಸಲಾಗಿದೆ. ಮುಂದಿನ ಒಂದು ತಿಂಗಳ ಒಳಗಾಗಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಭೂಮಿ ಫೂಜೆಯನ್ನು ನೆರವೇರಿಸುತ್ತೇನೆ ಎಂದರು. Read this also : ಉಚಿತ ಕ್ರೆಡಿಟ್ ಕಾರ್ಡ್‌ನ ಲಾಭ-ನಷ್ಟ: ಪ್ರಮುಖ ಮಾಹಿತಿ ಇಲ್ಲಿದೆ ಓದಿ…!

Local News – ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಪ್ರಮುಖ ಉದ್ದೇಶ

ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನನ್ನ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಬಹುತೇಕ ಎಲ್ಲಾ ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕ, ಉತ್ತಮವಾದ ರಸ್ತೆಗಳನ್ನು ನಿರ್ಮಾಣ ಮಾಡಿದ್ದೇನೆ. ಆದಷ್ಟು ಶೀಘ್ರವಾಗಿ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಉತ್ತಮವಾದ ರಸ್ತೆ ನಿರ್ಮಾಣ ಮಾಡಿಸಿ ಜನರಿಗೆ ಅನುಕೂಲ ಮಾಡುತ್ತೇನೆ ಎಂದರು.

MLA S.N. Subbareddy at groundbreaking ceremony for Someshwara–Sadali main road development project worth ₹5 crore in Gudibande taluk, Karnataka - Local News

Local News – ಕಾರ್ಯಕ್ರಮದಲ್ಲಿ ಹಾಜರಿದ್ದವರು

ಈ ವೇಳೆ ಗ್ರಾಪಂ ಅಧ್ಯಕ್ಷೆ ಸುಮಂಗಲಮ್ಮ ಅಶ್ವತ್ಥಪ್ಪ, ಲೋಕೋಪಯೋಗಿ ಇಲಾಖೆಯ ಅರುಣಾಚಲಂ, ಪೂಜಪ್ಪ, ಕುಡಿಯುವ ನೀರು ಇಲಾಖೆಯ ನವೀನ್. ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಆದಿರೆಡ್ಡಿ, ಮುಖಂಡರಾದ ಆದಿನಾರಾಯಣರೆಡ್ಡಿ, ಕೃಷ್ಣೆಗೌಡ, ದಪ್ಪರ್ತಿ ನಂಜುಂಡ ಸೇರಿದಂತೆ ಹಲವರು ಇದ್ದರು.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular