Karnataka Rainfall – ಕರ್ನಾಟಕದಲ್ಲಿ ಮಳೆ ಕೊಂಚ ವಿರಾಮ ತೆಗೆದುಕೊಂಡಿದ್ದರೂ, ಆಗಸ್ಟ್ 27 ರಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ಅಬ್ಬರಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Karnataka Rainfall – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಕಳೆದ ಕೆಲವು ವಾರಗಳಿಂದ ಸೌಮ್ಯವಾಗಿದ್ದ ಮಳೆ, ಗಣೇಶ ಚತುರ್ಥಿ ಹಬ್ಬದ ಬಳಿಕ ಮತ್ತೆ ತೀವ್ರಗೊಳ್ಳಲಿದೆ. ಹವಾಮಾನ ಇಲಾಖೆಯ ಪ್ರಕಾರ, ಆಗಸ್ಟ್ 27 ರಿಂದ ಕರಾವಳಿ ಕರ್ನಾಟಕದಾದ್ಯಂತ ಭಾರೀ ಮಳೆಯಾಗಲಿದೆ. ನಿರ್ದಿಷ್ಟವಾಗಿ, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ 150 ಮಿಲಿ ಮೀಟರ್‌ಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Karnataka Rainfall – ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?
ಕರಾವಳಿಯ ಜೊತೆಗೆ ರಾಜ್ಯದ ಇತರೆ ಕೆಲವು ಭಾಗಗಳಲ್ಲಿಯೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಆಗಸ್ಟ್ 27 ಮತ್ತು 28 ರಂದು ಕಲಬುರಗಿ, ಬೀದರ್, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅದೇ ರೀತಿ, ಬೆಳಗಾವಿ, ಕೊಡಗು ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಒಂದು ದಿನ ಯೆಲ್ಲೋ ಅಲರ್ಟ್ ಜಾರಿಯಲ್ಲಿ ಇರಲಿದೆ. ಈ ಜಿಲ್ಲೆಗಳಲ್ಲಿ 115 ಮಿಲಿ ಮೀಟರ್‌ವರೆಗೆ ಮಳೆಯಾಗುವ ಸಾಧ್ಯತೆ ಇದೆ.
Karnataka Rainfall – ಬೆಂಗಳೂರು ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲೂ ಮಳೆ
ಕಳೆದ ಕೆಲವು ವಾರಗಳಿಂದ ಮಳೆ ಇಲ್ಲದೆ ಕಂಗೆಟ್ಟಿದ್ದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಸೇರಿದಂತೆ ರಾಜ್ಯದ ಇತರ ಹಲವು ಜಿಲ್ಲೆಗಳಿಗೂ ಮಳೆ ಬರಲಿದೆ. ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಾಗಲಿದೆ.

ದಕ್ಷಿಣ ಒಳನಾಡು: ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ. Read this also : ಡೆಂಗ್ಯೂ ಜ್ವರ, ಇದರ ಲಕ್ಷಣಗಳು, ಅಪಾಯಗಳು ಮತ್ತು ಮುನ್ನೆಚ್ಚರಿಕೆಗಳ ಸಂಪೂರ್ಣ ಮಾಹಿತಿ….!
ಉತ್ತರ ಒಳನಾಡು: ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ.
ಹೀಗಾಗಿ, ರಾಜ್ಯಾದ್ಯಂತ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಜನರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.
