Local News – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಮುಖ್ಯರಸ್ತೆಯ ಎರಡೂ ಬದಿಗಳಲ್ಲಿರುವ ಅಂಗಡಿ ಮುಗ್ಗಟ್ಟುಗಳನ್ನು ಪಪಂ ಅಧಿಕಾರಿಗಳು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದರು. ಏಕಾಏಕಿ ಅಧಿಕಾರಿಗಳು ಈ ಕೆಲಸಕ್ಕೆ ಮುಂದಾಗಿರುವುದರಿಂದ ಬೀದಿಬದಿ ವ್ಯಾಪಾರಿಗಳು ಅಧಿಕಾರಿಗಳ ವಿರುದ್ದ ಆಕ್ರೋಷ ಹೊರಹಾಕಿದ್ದಾರೆ.

Local News – ಅಂಗಡಿ ಮಾಲೀಕರಿಗೆ ಎಚ್ಚರಿಕೆ
ಪಟ್ಟಣದ ಮುಖ್ಯರಸ್ತೆಯ ಎರಡೂ ಬದಿಯಲ್ಲಿ ಕೆಲವರು ಸಣ್ಣಪುಟ್ಟ ವ್ಯಾಪಾರಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಕೆಲವರು ತಮ್ಮ ವ್ಯಾಪಾರಕ್ಕಾಗಿ ಅಂಗಡಿಗಳ ಮುಂದ ತಾತ್ಕಲಿಕವಾಗಿ ಟೆಂಟ್ ಅಥವಾ ಶೆಡ್ ಗಳನ್ನು ನಿರ್ಮಿಸಿಕೊಂಡಿದ್ದಾರೆ. ಇದರಿಂದ ರಸ್ತೆಯಲ್ಲಿ ನೀರು ಶೇಖರಣೆಯಾಗಿ ಸಮಸ್ಯೆಯಾಗುತ್ತಿದೆ ಎಂಬ ದೂರಿನ ಮೇರೆಗೆ ಅಧಿಕಾರಿಗಳು ಪುಟ್ ಪಾತ್ ಅಂಗಡಿಗಳ ತೆರವಿಗೆ ಮುಂದಾಗಿದ್ದಾರೆ. ಈ ವೇಳೆ ತಹಸೀಲ್ದಾರ್, ಪೊಲೀಸರು ಹಾಗೂ ಪಟ್ಟಣ ಪಂಚಾಯತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಂಗಡಿ ಮಾಲೀಕರಿಗೆ ಎಚ್ಚರಿಕೆ ಹಾಗೂ ಮಾಹಿತಿ ಕೊಟ್ಟು ಅಂಗಡಿ ತೆರವು ಗೊಳಿಸುವಂತೆ ಸೂಚನೆ ನೀಡಿದರು. Read this also : ಸ್ವಚ್ಚತೆ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಶ್ಲಾಘನೀಯ : ಸಭಾ ಶಿರೀನ್
Local News – ಅಧಿಕಾರಿಗಳ ವಿರುದ್ದ ವ್ಯಾಪಾರಸ್ಥರ ಆಕ್ರೋಷ
ಇನ್ನೂ ಬೀದಿ ಬದಿ ಅಂಗಡಿಗಳನ್ನು ತೆರವುಗೊಳಿಸಲು ಮುಂದಾದ ಅಧಿಕಾರಿಗಳ ವಿರುದ್ದ ಕೆಲ ವ್ಯಾಪಾರಸ್ಥರು ಆಕ್ರೋಷ ಹೊರಹಾಕಿದರು. ಈ ಕುರಿತು ಮುನಿರತ್ನ ಎಂಬ ಬೀದಿ ಬದಿ ವ್ಯಾಪಾರಸ್ಥೆ ಮಾತನಾಡಿ, ನಮಗೆ ಯಾವುದೇ ಮಾಹಿತಿ ಇಲ್ಲದೇ ಏಕಾಏಕಿ ಈ ರೀತಿ ನಡೆದುಕೊಂಡಿರುವುದು ಸರಿಯಲ್ಲ. ಚುನಾವಣೆಯ ಸಮಯದಲ್ಲಿ ನಿಮಗೆ ಸಹಕಾರ ನೀಡುತ್ತೇವೆ. ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಆಶ್ವಾಸನೆ ಕೊಡುತ್ತಾರೆ. ಬಳಿಕ ಜನಪ್ರತಿನಿಧಿಗಳು ನಾಪತ್ತೆಯಾಗುತ್ತಾರೆ. ಕೆಲವು ವರ್ಷಗಳ ಹಿಂದೆ ತಾಲೂಕು ಕಚೇರಿಯ ಮುಂಭಾಗ ಪಪಂ ವತಿಯಿಂದ ಅಂಗಡಿ ಮಳಿಗೆಗಳನ್ನು ಕಟ್ಟಿಸಿದ್ದರು. ಅವು 2 ಅಡಿಗೂ ಕಡಿಮೆಯಿದೆ. ಅಲ್ಲಿ ನಾವು ವ್ಯಾಪಾರ ಮಾಡೋಕೆ ಆಗುವುದಿಲ್ಲ. ಆದ್ದರಿಂದ ಅಧಿಕಾರಿಗಳು ನಮಗೆ ಸರಿಯಾದ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

Local News – ಶೀಘ್ರ ಬೀದಿಬದಿ ವ್ಯಾಪಾರಸ್ಥರ ಸಭೆ
ಈ ಕುರಿತು ಜಿಲ್ಲಾ ಕೌಶಲ್ಯಾಭಿವೃದ್ದಿ ಇಲಾಖೆಯ ಅಧಿಕಾರಿ ವೆಂಕಟಾಚಲಪತಿ ಮಾತನಾಡಿ, ಪಟ್ಟಣ ಸುಂದರವಾಗಿರಲು ಹಾಗೂ ಸ್ವಚ್ಚತೆ ಕಾಪಾಡುವ ಉದ್ದೇಶದಿಂದ ಬೀದಿ ಬದಿ ವ್ಯಾಪಾರ ಮಾಡುವ ಅಂಗಡಿಗಳನ್ನು ತೆರವುಗೊಳಿಸಲು ಮುಂದಾಗಿದ್ದೇವೆ. ನಾವು ಬೀದಿ ಬದಿ ವ್ಯಾಪಾರಸ್ಥರ ಸಭೆ ಕರೆದು ಸಭೆಯಲ್ಲಿ ವ್ಯಾಪಾರಸ್ಥರ ಸಮಸ್ಯೆಗಳನ್ನು, ಸಲಹೆಗಳನ್ನು ಸ್ವೀಕರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ. ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರು ಸ್ವಚ್ಚತೆಯನ್ನು ಕಾಪಾಡಬೇಕು ಎಂದರು.
