ಮೇ.30ರೊಳಗೆ BOBCARD ಲಿಮಿಟೆಡ್ ನಲ್ಲಿರುವ ಕೇಂದ್ರ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ…!

ಕೇಂದ್ರ ಸರ್ಕಾರದ ಕೆಲಸ ಬಯಸುವವರಿಗೆ ಇಲ್ಲೊಂದು ಒಳ್ಳೆಯ ಅವಕಾಶವಿದೆ. ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ BOBCARD ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದು, ಮೇ.30 ರೊಳಗೆ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನೂ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳ ಬಗ್ಗೆ ತಿಳಿಯಲು ಮುಂದೆ ಓದಿರಿ….

ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯಾದ BOBCARD ಸಂಸ್ಥೆಯಲ್ಲಿ ಅನೇಕ ಸೇಲ್ಸ್​ ಮ್ಯಾನೇಜರ್- ಓಪನ್ ಮಾರ್ಕೆಟ್ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೇ.30 ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಕೇಂದ್ರ ಸರ್ಕಾರಿ ಹುದ್ದೆ ಬಯಸುವಂತಹವರು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಇನ್ನೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ನೇಮಕಾತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಒದಗಿಸಲಾಗಿದೆ.

bobcard recruitment 2024 0

BOBCARD ಸಂಸ್ಥೆಯಲ್ಲಿ ಸೇಲ್ಸ್ ಮ್ಯಾನೇಜರ್‍-ಒಪೆನ್ ಮಾರ್ಕೆಟ್ ಹುದ್ದೆಗಳು ಖಾಲಿಯಿವೆ. ಮಾಸಿಕ ವೇತನದ ಬಗ್ಗೆ ಸಹ ಮಾಹಿತಿ ನೀಡಿಲ್ಲ. ಈ ಹುದ್ದೆಗಳು ಕೇಂದ್ರ ಸರ್ಕಾರದ ಮಾನದಂತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಂತಹ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ. ವಯಸ್ಸಿನ ವಿಚಾರಕ್ಕೆ ಬಂದರೇ ಗರಿಷ್ಟ ವಯಸ್ಸು 40 ವರ್ಷ ಮೀರಿರಬಾರದು. ಮೀಸಲಾತಿಯಂತೆ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳನ್ನು ಕಮಪನಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳುತ್ತದೆ. ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.

ಇನ್ನೂ ಅರ್ಜಿ ಸಲ್ಲಿಸಲು ಯಾವುದೇ ವರ್ಗದ ಅಭ್ಯರ್ಥಿ ಅರ್ಜಿ ಶುಲ್ಕ ನೀಡಬೇಕಿಲ್ಲ. ಉಚಿತವಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ಅಧಿಸೂಚನೆ ಹಾಗೂ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು https://www.bobcard.co.in/careers ತಾಣವನ್ನು ಭೇಟಿ ನೀಡಬಹುದಾಗಿದೆ.

Leave a Comment

Your email address will not be published. Required fields are marked *

Scroll to Top