HomeStateಇಂದು ಮದ್ಯಾಹ್ನ ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶ ಪ್ರಕಟ, ಮೊಬೈಲ್ ನಲ್ಲಿಯೇ ಈ ರೀತಿ ಚೆಕ್...

ಇಂದು ಮದ್ಯಾಹ್ನ ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶ ಪ್ರಕಟ, ಮೊಬೈಲ್ ನಲ್ಲಿಯೇ ಈ ರೀತಿ ಚೆಕ್ ಮಾಡಿ….!

ಇಂದು ಮೇ.21 ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟವಾಗಲಿದೆ. Karnataka Second PUC Exam 2nd Result 2024 ರ ಫಲಿತಾಂಶವನ್ನು ಇಂದು (May 21) ರ ಮದ್ಯಾಹ್ನ ಬಿಡುಗಡೆಯಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಈಗಾಗಲೇ ಮೊದಲ ಹಂತದ ಫಲಿತಾಂಶ ಪ್ರಕಟವಾಗಿತ್ತು. ಮೊದಲ ಹಂತದಲ್ಲಿ ಫೇಲ್ ಆದಂತಹ ವಿದ್ಯಾರ್ಥಿಗಳಿಗೆ ಕಳೆದ ಏಪ್ರಿಲ್ 29 ರಿಂದ ಮೇ.16 ರವರೆಗೆ ಪೂರಕ ಪರೀಕ್ಷೆಗಳನ್ನು ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶ ಇಂದು ಮದ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ. ಈ ವರ್ಷದಿಂದಲೇ ವಿದ್ಯಾರ್ಥಿಗಳು ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶವನ್ನು ಸಹ ನೀಡಲಾಗಿದೆ. ದ್ವಿತೀಯ ಪಿಯುಸಿ 2 ರ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯಗೊಂಡಿದ್ದು, ಇದೀಗ ಫಲಿತಾಂಶ ಪ್ರಕಟವಾಗಲಿದೆ.

PUC 2 results 1

ಇನ್ನೂ ವಿದ್ಯಾರ್ಥಿಗಳು ಫಲಿತಾಂಶ ಈ ರೀತಿ ಚೆಕ್ ಮಾಡಿಕೊಳ್ಳಬಹುದಾಗಿದೆ.

  • karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
  • ಬಳಿಕ ಬಂದಂತಹ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ. ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್​​ ಮೇಲೆ ಕಾಣಿಸುತ್ತದೆ.
  • ಬಳಿಕ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಿ.
by Baluhttp://ismkannadanews.com
ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular