HomeStateಡ್ರಾಪ್ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ, ಸಿನಿಮೀಯ ರೀತಿಯಲ್ಲಿ ಯುವತಿಯನ್ನು ರಕ್ಷಣೆ ಮಾಡಿದ...

ಡ್ರಾಪ್ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ, ಸಿನಿಮೀಯ ರೀತಿಯಲ್ಲಿ ಯುವತಿಯನ್ನು ರಕ್ಷಣೆ ಮಾಡಿದ ಪೊಲೀಸರು…!

ಅತ್ಯಾಚಾರಗಳು, ಲೈಂಗಿಕ ದೌರ್ಜನ್ಯಗಳಿಗೆ ಕಾನೂನಿನಲ್ಲಿ ಕಠಿಣ ಶಿಕ್ಷೆಯಿದ್ದರೂ ಸಹ ಕೆಲವು ಪುಂಡರು ಅತ್ಯಾಚಾರಗಳು, ಲೈಂಗಿಕ ದೌರ್ಜನ್ಯ ಮಾಡುವಂತಹ ಕೃತ್ಯಕ್ಕೆ ಮುಂದಾಗುತ್ತಿರುತ್ತಾರೆ. ಚಿಕ್ಕಬಳ್ಳಾಪುರದ ಪೇರೆಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಯೊಬ್ಬ ಇಬ್ಬರು ವಿದ್ಯಾರ್ಥಿನಿಯರಿಗೆ ಡ್ರಾಪ್ ಕೊಡುತ್ತೇನೆ ಎಂದು ಹೇಳಿ ಅತ್ಯಾಚಾರಕ್ಕೆ ಮುಂದಾಗಿದ್ದಾನೆ. ಆದರೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರೂ ವಿದ್ಯಾರ್ಥಿನಿಯರನ್ನು ರಕ್ಷಣೆ ಮಾಡಿ, ಆರೋಪಿಯನ್ನು ಬಂಧನ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಪೇರೆಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿನೀಯರಿಬ್ಬರಿಗೆ ಡ್ರಾಪ್ ಕೊಡುವುದಾಗಿ ಕರೆದುಕೊಂಡು ಹೋದ ವ್ಯಕ್ತಿಯೋರ್ವ ಅತ್ಯಾಚಾರಕ್ಕೆ ಮುಂದಾಗಿದ್ದಾನೆ. ವಿದ್ಯಾರ್ಥಿನಿಯರಿಬ್ಬರು ಮದುವೆಯೊಂದರ ರಿಸೆಪ್ಷನ್ ಕೆಲಸ ಮುಗಿಸಿಕೊಂಡು ತಡರಾತ್ರಿ ತಮ್ಮ ಗ್ರಾಮಕ್ಕೆ ಹೋಗಲು ಸಿದ್ದವಾಗಿದ್ದಾರೆ. ಈ ವೇಳೆ ಪೋಲಕುಂಟಹಳ್ಳಿ ಎಂಬ ಗ್ರಾಮದ ನಿವಾಸಿ ಶ್ರೀಕಾಂತ್ ಆ ವಿದ್ಯಾರ್ಥಿನಿಯರಿಗೆ ಡ್ರಾಪ್ ಕೊಡುವ ಡ್ರಾಮಾ ಆಡಿದ್ದಾನೆ. ಇಬ್ಬರನ್ನೂ ಬೈಕ್ ಮೇಲೆ ಕೂರಿಸಿಕೊಂಡು ಸಾಗಿದ್ದಾನೆ. ಪೇರೆಸಂದ್ರದಿಂದ ಚಿಕ್ಕಬಳ್ಳಾಪುರಕ್ಕೆ ಡ್ರಾಪ್ ಕೊಡುವ ನೆಪದಲ್ಲಿ ಬೈಕ್ ಹತ್ತಿಸಿಕೊಂಡ ಶ್ರೀಕಾಂತ್ ಹೆದ್ದಾರಿಗೆ ಬರುವ ಬದಲು ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದನಂತೆ. ಅರಣ್ಯ ಪ್ರದೇಶದಲ್ಲಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಮುಂದಾಗಿದ್ದಾನೆ.

man attempted to rape arrested 1

ಆದರೆ ವಿದ್ಯಾರ್ಥಿನಿಯರು ಸಮಯ ಪ್ರಜ್ಞೆ ಪ್ರದರ್ಶನ ಮಾಡಿ ಆರೋಪಿಯಿಂದ ತಪ್ಪಿಸಿಕೊಂಡು 112 ಸಹಾಯವಾಣಿಗೆ ಕರೆ ಮಾಡಿದ್ದಾರೆ. ಪೊಲೀಸರ ರಕ್ಷಣೆ ಕೋರಿದ್ದಾರೆ. ಕೂಡಲೇ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ವಿದ್ಯಾರ್ಥಿನಿಯರ ಮೊಬೈಲ್ ಲೊಕೇಷನ್ ಮೂಲಕ ಅವರಿರುವ ಸ್ಥಳ ತಿಳಿದುಕೊಂಡು ಇಬ್ಬರೂ ವಿದ್ಯಾರ್ಥಿನಿಯರನ್ನು ರಕ್ಷಣೆ ಮಾಡಿದ್ದಾರೆ. ಜೊತೆಗೆ ಆರೋಪಿ ಶ್ರೀಕಾಂತ್ ನನ್ನು ಬಂಧನ ಮಾಡಿರುವ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

by Balajihttp://ismkannadanews.com
ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

John Doe on TieLabs White T-shirt