HomeStateಬಾಗೇಪಲ್ಲಿಯಲ್ಲಿ ಟಿಪ್ಪರ್ - ಬೈಕ್ ಅಪಘಾತ : ದ್ವಿಚಕ್ರ ವಾಹನ ಸವಾರ ಸಾವು

ಬಾಗೇಪಲ್ಲಿಯಲ್ಲಿ ಟಿಪ್ಪರ್ – ಬೈಕ್ ಅಪಘಾತ : ದ್ವಿಚಕ್ರ ವಾಹನ ಸವಾರ ಸಾವು

ಬಾಗೇಪಲ್ಲಿ: ಟಿಪ್ಪರ್‍ ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಗೂಳೂರು ಗ್ರಾಮದ ಹೊರವಲಯದ ಪೆಟ್ರೋಲ್ ಬಂಕ್ ನಡೆದಿರುತ್ತೆ.

ತಾಲೂಕಿನ ಗೂಳೂರು ಗ್ರಾ.ಪಂ ವ್ಯಾಪ್ತಿಯ ಕೊತ್ತೂರು ಗ್ರಾಮದ ಸುನಿಲ್(38) ಮೃತಪಟ್ಟಿರುವ ರ್ದುದೈವಿ ಎಂದು ಗುರ್ತಿಸಲಾಗಿದೆ. ಮೃತ ವ್ಯಕ್ತಿ ಗೂಳೂರು ಕಡೆಯಿಂದ ತಮ್ಮ ಸ್ವಗ್ರಾಮಕ್ಕೆ ತಡರಾತ್ರಿಯಲ್ಲಿ ತಮ್ಮ ಬೈಕ್‍ನಲ್ಲಿ ಹೋಗುತ್ತಿದ್ದ ವೇಳೆ  ಗೂಳೂರು ಗ್ರಾಮದ ಹೊರವಲಯದ ಪೆಟ್ರೋಲ್ ಬಂಕ್ ಬಳಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಇನ್ಸ್‍ಪೆಕ್ಟರ್ ಘಟನಾ ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವ ಕಾಂಗ್ರೆಸ್ ಮುಖಂಡನಾಗಿರುವ ಸುನಿಲ್ ಕುಮಾರ್ ನಿಧನಕ್ಕೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ತಾ.ಪಂ ಮಾಜಿ ಅಧ್ಯಕ್ಷ ಗೂಳೂರು ರಮೇಶ್ ಬಾಬು ರವರು ಸಂತಾಪ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular