ಸರ್ಕಾರದಿಂದ ಬಡವರಿಗೆ ಅನೇಕ ಸೌಲಭ್ಯಗಳು ದೊರೆಯುತ್ತಿದ್ದು, ಅವುಗಳನ್ನು ಪಡೆಯಲು ಕೆಲ ಸಂಘ ಸಂಸ್ಥೆಗಳು ಹಾಗೂ ಮಧ್ಯವರ್ತಿಗಳ ಹಾವಳಿ ಹೆಚ್ಚಾಗುತ್ತಿದೆ. ಇದಕ್ಕೆ ಅಧಿಕಾರಿಗಳು ಕಡಿವಾಣ ಹಾಕಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ತಾಲೂಕು ಪಂಚಾಯತಿ (Local News) ಸಭಾಂಗಣಗದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದರು.
Local News – ಮಧ್ಯವರ್ತಿಗಳಿಗೆ ಅವಕಾಶ ಕೊಡಬೇಡಿ
ಇಂದು ಹಲವು ಇಲಾಖೆಗಳಲ್ಲಿ ಅದರಲ್ಲೂ ಕೃಷಿ, ತೋಟಗಾರಿಕೆ ಇಲಾಖೆಗಳಲ್ಲಿ ಸಂಘ ಸಂಸ್ಥೆಗಳು, ಮಧ್ಯವರ್ತಿಗಳ ಹಾವಳಿ ಹೆಚ್ಚಾಗುತ್ತಿದೆ. ಇದರಿಂದ ಅರ್ಹರಿಗೆ ಸೌಲಭ್ಯಗಳು ಸಿಗುತ್ತಿಲ್ಲ. ಇನ್ನು ಮುಂದೆ ತಾಲೂಕಿನ ಯಾವುದೇ ಇಲಾಖೆಯಲ್ಲಿ ಫಲಾನುಭವಿಗಳಿಗೆ ಸೌಲಭ್ಯಗಲನ್ನು ನೀಡುವಾಗ ನನ್ನನ್ನು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಫಲಾನುಭವಿಗಳನ್ನು ಕರೆಸಿ ನೇರವಾಗಿ ಫಲಾನುಭವಿಗೆ ವಿತರಣೆ ಮಾಡುವ ಕೆಲಸ ಆಗಬೇಕು. ಆಗ ಅರ್ಹರಿಗೆ ಸೌಲಭ್ಯ ಸಿಗುವುದರ ಜೊತೆಗೆ ಬೇರೆಯವರಿಗೂ ಸರ್ಕಾರದ ಸೌಲಭ್ಯಗಳ ಕುರಿತು ಮಾಹಿತಿ ದೊರೆಯುತ್ತದೆ ಎಂದರು.
ಹದೆಗೆಟ್ಟ ರಸ್ತೆಗಳ ಮಾಹಿತಿ ನೀಡಿ
ಇನ್ನೂ ಇಲಾಖಾವಾರು ಪ್ರಗತಿ ಪರಿಶೀಲನೆಯನ್ನು ಕೈಗೊಂಡ ಶಾಸಕರು, ಜಿಲ್ಲಾ ಪಂಚಾಯತಿ ಇಲಾಖೆಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಉಳಿಕೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಇದರ ಜೊತೆಗೆ ತಾಲೂಕಿನಲ್ಲಿ ಹದೆಗಟ್ಟಿರುವ ರಸ್ತೆಗಳಿಂದ ವಾಹನ ಸವಾರರಿಗೆ, ಸಾರ್ವಜನಿಕರಿಗೆ (Local News) ತೊಂದರೆಯಾಗುತ್ತಿದ್ದು, ಅಂತಹ ರಸ್ತೆಗಳ ಪಟ್ಟಿಯನ್ನು ತಯಾರಿಸಿ ನನಗೆ ನೀಡಿ, ಅದಕ್ಕೂ ಅನುದಾನ ಒದಗಿಸುತ್ತೇನೆ ಎಂದು ಜಿ.ಪಂ. ಅಧಿಕಾರಿಗಳಿಗೆ ಸೂಚಿಸಿದರು.
ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲು ಸೂಚನೆ
ಬಳಿಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಬಗ್ಗೆ ಮಾಹಿತಿ ಪಡೆದರು. ಇಲಾಖೆಯ ಅಧಿಕಾರಿ ನವೀನ್ ಮಾತನಾಡಿ ತಾಲೂಕಿನಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ತೀವ್ರ ಸಮಸ್ಯೆಯಿಲ್ಲ ಹಾಗೂ ಲಭ್ಯವಿರುವ ಮೂಲಗಳಿಂದಲೇ ಸಮರ್ಪಕವಾಗಿ ನೀರು ಪೂರೈಕೆ ಮಾಡಲಾಗುತ್ತಿದೆ. ತಾಲೂಕಿನಲ್ಲಿರುವ ಒಟ್ಟು 117 ಘಟಕಗಳ ಪೈಕಿ 100 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಉಳಿದ 17 ಘಟಕಗಳ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ. ಹೊಸದಾಗಿ 8 ಗ್ರಾಮಗಳಿಗೆ (Local News) ನೀರಿನ ಘಟಕಗಳ ಅಗತ್ಯವಿದೆ ಎಂದು ಸಭೆಯ ಗಮನಕ್ಕೆ ತಂದಾಗ, ಎಲ್ಲಾ ಗ್ರಾಮಗಳಿಗೂ ಹೊಸ ಘಟಕಗಳ ಸ್ಥಾಪನೆಗೆ ಅಗತ್ಯ ಅನುದಾನ ನೀಡುವುದಾಗಿ ಶಾಸಕರು ಭರವಸೆ ನೀಡಿದರು.
ಹಾಸ್ಟೆಲ್ ಗಳಲ್ಲಿ ಆಹಾರ ಗುಣಮಟ್ಟ ಪರಿಶೀಲನೆ ನಡೆಸಿ
ಹಾಸ್ಟೆಲ್‌ಗಳಲ್ಲಿ ಆಹಾರದ ಗುಣಮಟ್ಟದ ಕುರಿತು ಮಾತನಾಡಿದ ಶಾಸಕರು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ತಪಾಸಣೆ ನಡೆಸಬೇಕು. ಇತ್ತೀಚೆಗೆ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಆಹಾರ ಧಾನ್ಯಗಳ ಅಕ್ರಮ ನಡೆದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದ್ದು, ಬಡ ಮಕ್ಕಳ ಪಾಲಿನ (Local News) ಆಹಾರವನ್ನು ಕದಿಯುವ ಭ್ರಷ್ಟರಿಗೆ ತಕ್ಕ ಶಿಕ್ಷೆ ಖಂಡಿತ ಎಂದು ಈ ಸಂದರ್ಭದಲ್ಲಿ ಎಚ್ಚರಿಸಿದರು. Read this also : ಸಣ್ಣ ಉದ್ದಿಮೆದಾರರಿಗೆ ಗುಡ್ ನ್ಯೂಸ್: 20 ಲಕ್ಷದವರೆಗೆ ಅಡಮಾನ ರಹಿತ ಸಾಲ! RBI ಹೊಸ ಘೋಷಣೆಗಳೇನು?
ಉತ್ತಮ ಫಲಿತಾಂಶ ತರಲು ಶ್ರಮಿಸಿ
ನಂತರ ಶಿಕ್ಷಣ ಇಲಾಖೆಯ ಪ್ರಗತಿಯ ಬಗ್ಗೆ ಚರ್ಚಿಸಿದ ಶಾಸಕರು, ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕು ಉತ್ತಮ ಫಲಿತಾಂಶ ದಾಖಲಿಸಲು ಹೆಚ್ಚಿನ ಶ್ರಮ ವಹಿಸಬೇಕು ಎಂದು ತಿಳಿಸಿದರು. ಈಗಾಗಲೇ ನಡೆದ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿರುವುದು ಸಮಾಧಾನಕರ ಸಂಗತಿಯಾಗಿದ್ದು, (Local News) ಪಟ್ಟಣದ ಪಿ.ಎಂ. ಶ್ರೀ ಶಾಲೆಗೆ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಲು ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.
ಕೆಡಿಪಿ ಸಭೆಗೆ ಗೈರಾದ ಅಧಿಕಾರಿಗಳಿಗೆ ನೊಟೀಸ್ ನೀಡಿ
ತಾಲೂಕಿನ ಹಲವು ಕಡೆ ಮನೆಗಳ ಮೇಲೆ ಅಪಾಯಕಾರಿಯಾಗಿ ಜೋತು ಬೀಳುತ್ತಿರುವ ವಿದ್ಯುತ್ ತಂತಿಗಳು ಹಾಗೂ ಹಳೆಯ ಸ್ಟೀಲ್ ಕಂಬಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಸರ್ವೆ ನಡೆಸಿ ಕ್ರಮ ಕೈಗೊಳ್ಳುವಂತೆ ಕೆಇಬಿ ಇಲಾಖೆಯ ಅಧಿಕಾರಿಗಳಿಗೆ ಸಭೆಯಲ್ಲಿ ಶಾಸಕ ಸುಬ್ಬಾರೆಡ್ಡಿ ಅವರು ಆದೇಶಿಸಿದರು. ಉಳಿದಂತೆ ಇತರೆ ಇಲಾಖೆಗಳ (Local News) ಪ್ರಗತಿ ಪರಿಶೀಲನೆ ನಡೆಸಿದರು. ಸಭೆಗೆ ಗೈರು ಹಾಜರಿಯಾದ ಇಲಾಖೆಯ ಅಧಿಕಾರಿಗಳಿಗೆ ನೊಟೀಸ್ ನೀಡುವಂತೆ ತಾಪಂ ಇಒ ರವರಿಗೆ ಸೂಚನೆ ನೀಡಿದರು.
ಈ ಸಮಯದಲ್ಲಿ ತಹಸೀಲ್ದಾರ್ ಸಿಗ್ಬತ್ತುಲ್ಲಾ, ತಾಪಂ ಇಒ ನಾಗಮಣಿ, ಆರಕ್ಷಕ ವೃತ್ತ ನಿರೀಕ್ಷಕ ಮುನಿಕೃಷ್ಣ ಸೇರಿದಂತೆ ಕೆಡಿಪಿ ನಾಮ ನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಯಗಳ ಅಧಿಕಾರಿಗಳು ಹಾಜರಿದ್ದರು.


