HomeStateHealth Camp : ಗುಡಿಬಂಡೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ: ಆರೋಗ್ಯ ಶಿಬಿರಗಳನ್ನು ಸದ್ಬಳಕೆ ಮಾಡಿಕೊಳ್ಳಿ...

Health Camp : ಗುಡಿಬಂಡೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ: ಆರೋಗ್ಯ ಶಿಬಿರಗಳನ್ನು ಸದ್ಬಳಕೆ ಮಾಡಿಕೊಳ್ಳಿ : ರಾಮಾಂಜಿನಪ್ಪ

ಪ್ರತಿಯೊಬ್ಬರಿಗೂ ಆರೋಗ್ಯ ಎಂಬುದು ಅತ್ಯಂತ ಮುಖ್ಯವಾಗಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಶಿಬಿರಗಳಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ (Health Camp) ಮಾಡಿಸಿಕೊಳ್ಳಬೇಕು ಎಂದು ತಾಪಂ ಸಹಾಯಕ ಲೆಕ್ಕಾಧಿಕಾರಿ ರಾಮಾಂಜಿನಪ್ಪ ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿಗಳ ಆಶ್ರಯದಲ್ಲಿ ಪಂಚಾಯತ್ ರಾಜ್ ಇಲಾಖೆ  ಹಾಗೂ ದೇವನಹಳ್ಳಿಯ ಆಕಾಶ್ ಸೂಪರ್‍ ಸ್ಪೇಷಾಲಿಟಿ ಆಸ್ಪತ್ರೆ ರವರ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು.

Doctors providing free checkups at a Health Camp in Gudibande, Karnataka

Health Camp – ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ

ನಾವು ಆರೋಗ್ಯವಾಗಿದ್ದರೇ ಎಲ್ಲವೂ ಸುಖಮಯವಾಗಿ ಸಾಗುತ್ತದೆ. ಇಂದಿನ ಜೀವನ ಶೈಲಿಯ ಕಾರಣದಿಂದ ನಾವೆಲ್ಲರೂ ಸಾಕಷ್ಟು ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದೇವೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆಗಿದ್ದಾಂಗೆ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಅದರಲ್ಲೂ ಎಲ್ಲಾದರೂ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜನೆ ಮಾಡಿದರೇ, ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು. Read this also : ಗೃಹಲಕ್ಷ್ಮಿ ಫಲಾನುಭವಿಗಳ ಗಮನಕ್ಕೆ: ಇನ್ಮುಂದೆ ‘ಜೀವಿತ ಪ್ರಮಾಣಪತ್ರ’ ಕಡ್ಡಾಯ? ಸರ್ಕಾರದ ಹೊಸ ಪ್ಲಾನ್ ಇಲ್ಲಿದೆ!

ಯಶಸ್ವಿಯಾದ ಶಿಬಿರ

ಇನ್ನೂ ಈ ಶಿಬಿರದಲ್ಲಿ ನೂರಾರು ಸಾರ್ವಜನಿಕರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೂ ಸಹ ಭಾಗವಹಿಸಿ ಉಚಿತ ವೈದ್ಯಕೀಯ ಸೇವೆಗಳನ್ನು ಪಡೆದುಕೊಂಡರು. ಸಾಮಾನ್ಯ ಆರೋಗ್ಯ ತಪಾಸಣೆ, (Health Camp)  ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯ, ಕಣ್ಣು, ಎಲುಬು ಸಂಬಂಧಿತ ಸಮಸ್ಯೆಗಳು ಸೇರಿದಂತೆ ವಿವಿಧ ರೋಗಗಳ ತಪಾಸಣೆ ಹಾಗೂ ಚಿಕಿತ್ಸಾ ಸಲಹೆಗಳನ್ನು ವೈದ್ಯರು ನೀಡಿದರು.

Doctors providing free checkups at a Health Camp in Gudibande, Karnataka

ಹಿರಿಯ ನಾಗರಿಕರು, ಮಹಿಳೆಯರು ಮತ್ತು ಮಕ್ಕಳಿಗೆ ವಿಶೇಷವಾಗಿ ತಪಾಸಣೆ ನಡೆಸಲಾಗಿದ್ದು, ಅಗತ್ಯವಿರುವವರಿಗೆ ಮುಂದಿನ ಚಿಕಿತ್ಸೆಗೆ ಮಾರ್ಗದರ್ಶನ ನೀಡಲಾಯಿತು. ಕಾರ್ಯಕ್ರಮದ ಯಶಸ್ಸಿಗೆ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ (Health Camp)  ಸ್ವಯಂಸೇವಕರು ಶ್ರಮಿಸಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯಿತು.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular