ತಂಬಾಕು ಉತ್ಪನ್ನಗಳ ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಅದರಿಂದ ಜೀವ ಹೋಗುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ತಂಬಾಕು ಪದಾರ್ಥಗಳನ್ನು ಸೇವನೆ ಮಾಡುವುದನ್ನು ಬಿಟ್ಟು ಆರೋಗ್ಯಯುತ ಜೀವನ ನಡೆಸಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರಶಾಂತ್ ಸಲಹೆ ನೀಡಿದರು. ಚಿಕ್ಕಬಳ್ಳಾಪುರದ ಪೆರೇಸಂದ್ರ ಶಂಖರಮಠದ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ದಿನಾಚರಣೆ ನಿಮಿತ್ತ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಅವರು ಮಾತನಾಡಿದರು.
ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರಶಾಂತ್ ಜಿಲ್ಲಾ ನಿರ್ದೇಶಕರು ಗಳಿಗೆ ಬಲಿಯಾಗಿ ಕಣ್ಣೀರಿನಿಂದ ಕೈ ತೊಳೆಯುತ್ತಿರುವ ಬಗ್ಗೆ ಹಾಗೂ ದುಶ್ಚಟದಲ್ಲಿ ತೊಡಗಿರುವ ಜನರು ದುರ್ಮಾರ್ಗದಿಂದ ಸನ್ಮಾರ್ಗದಡೆಗೆ ಹೋಗುವ ಬಗ್ಗೆ ಮಾಹಿತಿ ನೀಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿನ್ನೆಲೆ ಮತ್ತು ದೇಯೋದ್ದೇಶಗಳ ಬಗ್ಗೆ ವಿವರಿಸುತ್ತಾ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ದೇವಸ್ಥಾನದ ಜೀರ್ಣೋದ್ಧಾರ, ಕೆರೆ ಹೂಳೆತ್ತುವ ಕಾರ್ಯಕ್ರಮ, ನಿರ್ಗತಿಕರಿಗೆ ಮಾಸಾಸನ, ಹಾಲಿನ ಡೈರಿಗಳಿಗೆ ಅನುದಾನ, ಶಾಲೆಗಳಿಗೆ ಶೌಚಾಲಯದ ವ್ಯವಸ್ಥೆ, ಕೃಷಿ ಕಾರ್ಯಕ್ರಮಗಳಿಗೆ ಅನುದಾನ, ಜಲಮಂಗಲ ಕಾರ್ಯಕ್ರಮ, ಇನ್ನಿತರ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆಯವರು ತೊಡಗಿಸಿಕೊಂಡಿರುವ ಬಗ್ಗೆ ತಿಳಿಸಿಕೊಟ್ಟರು.
ಬಳಿ ಆಗಮಿಸಿದ ಡಿ.ಎಲ್.ಪರಿಮಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯರು ಚಿಕ್ಕಬಳ್ಳಾಪುರ ಜಿಲ್ಲೆ, ಇವರು ಮಾತನಾಡಿ ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಮನೆಯೇ ಮೊದಲ ಪಾಠಶಾಲೆಯಾಗಿರುವುದರಿಂದ ಪ್ರತಿಯೊಬ್ಬ ತಾಯಂದಿರು ತಮ್ಮ ಮಕ್ಕಳನ್ನು ದುಶ್ಚಟ ಮುಕ್ತವಾಗಿ ಬೆಳೆಸುವ ಜವಾಬ್ದಾರಿ ಇದೆ, ಮಕ್ಕಳ ದೈನಂದಿನ ಚಟುವಟಿಕೆಗಳ ಬಗ್ಗೆ ಹೆತ್ತವರು ಗಮನಹರಿಸುತ್ತಾ ಇರಬೇಕು ಹದಿಹರೆಯದ ವಯಸ್ಸಿನಲ್ಲಿ ಮಕ್ಕಳು ದಾರಿ ತಪ್ಪುವ ಸಾಧ್ಯತೆ ಇರುವುದರಿಂದ ಮಕ್ಕಳ ಬಗ್ಗೆ ಬಹಳಷ್ಟು ಕಾಳಜಿಯಿಂದ ನೋಡಿಕೊಂಡು ಉತ್ತಮ ಪ್ರಜೆಗಳನ್ನು ಸಮಾಜಕ್ಕೆ ನೀಡುವ ಜವಾಬ್ದಾರಿ ಇದೆ ಎಂದು ತಿಳಿಸಿದರು.
ನಂತರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಿಕ್ಕಬಳ್ಳಾಪುರ ತಾಲೂಕಿನ ಯೋಜನಾಧಿಕಾರಿ ಧನಂಜಯ್ ರವರು ಪ್ರಾಸ್ತಾವಿಕ ಮಾತನಾಡಿ ಪ್ರತಿ ವರ್ಷ ವಿಶ್ವ ತಂಬಾಕು ವಿರೋಧಿ ದಿನಾಚರಣೆ, ಪರಿಸರ ಕಾರ್ಯಕ್ರಮ, ಶ್ರದ್ದಾ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ,ಆರೋಗ್ಯ ತಪಾಸಣಾ ಶಿಬಿರ ಹಾಗೂ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಗಿಡ ನೆಡುವ ಕಾರ್ಯಕ್ರಮ ಇತ್ಯಾದಿ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.
ಒಕ್ಕೂಟದ ಅಧ್ಯಕ್ಷ ಮಂಜುನಾಥ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ವಲಯದ ಮೇಲ್ವಿಚಾರಕಿ ಮಂಜುಳಾ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿಗಳಾದ ಸುರೇಶ್ ಮತ್ತು ರಮೇಶ್ ಹಾಗೂ ಆಸಿಯ ಮತ್ತು ಸಿ ಎಸ್ ಸಿ ಸೇವದಾರರಾದ ಅಶ್ವಿನಿ, ಸ್ವ ಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.