ಗೌರಿಬಿದನೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ಮೂರು ಮಂದಿ ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯ ನಗರಗೆರೆ ಬಳಿಯ ತಿರುವಿನಲ್ಲಿ ಜೂ.7 ಶುಕ್ರವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು 3 ಮಂದಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ನಗರಗೆರೆ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ನುಗ್ಗಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

accident 1
Oplus_0

ಈ ಅಪಘಾತದಲ್ಲಿ ವಾಟದಹೊಸಹಳ್ಳಿ ಬೆಸ್ಕಾಂ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಬೆಸ್ಕಾಂ ಲೈನ್ ಮ್ಯಾನ್ ಗಳಾದ ಶ್ರೀಧರ್ (28), ವೇಣು ಗೋಪಾಲ್ (38), ಮಂಜುನಾಥ್ (37) ಎಂಬವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಶಿವಕುಮಾರ್ ಎಂಬವರಿಗೆ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ರಾತ್ರಿ ಗೌರಿಬಿದನೂರು ತಾಲೂಕಿನ ನಗರಗೆರೆ-ವಾಟದಹೊಸಹಳ್ಳಿ ರಸ್ತೆಯಲ್ಲಿ ವೇಣುಗೋಪಾಲ್ ಅವರು ಕಾರಿನಲ್ಲಿ ಬರುವಾಗ ಕಾರು ಆಯತಪ್ಪಿ ರಸ್ತೆಯ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದು ಮತ್ತೋರ್ವನ‌ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿಲಾಗಿದೆ ಎಂದು ತಿಳಿದು ಬಂದಿದೆ. ಇನ್ನೂ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತ ದೇಹಗಳನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ

Leave a Comment

Your email address will not be published. Required fields are marked *

Scroll to Top