ಮುಡಾ ಸೈಟು ಹಂಚಿಕೆ ವಿವಾದ (MUDA SCAM) ರಾಜ್ಯದಲ್ಲಿ ಜೋರಾಗಿ ನಡೆಯುತ್ತಿದ್ದು, ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರು (Siddaramaiah)ಭಾಗಿಯಾಗಿದ್ದು, ಅವರು ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸುತ್ತಿದೆ. ಈ ನಡುವೆ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಎಂಬುವವರು ಸಿಎಂ ಸಿದ್ದರಾಮಯ್ಯ ವಿರುದ್ದ ಕೇಂದ್ರ ಚುನಾವಣಾ ಆಯೋಗಕ್ಕೆ (Election Commission of India) ದೂರು ನೀಡಿದ್ದಾರೆ. ಕಳೆದ 2013ರ ವಿಧಾನ ಸಭೆ ಚುನಾವಣೆಯಲ್ಲಿ ತಮ್ಮ ಪತ್ನಿ ಪಾವರ್ತಿರವರ ಹೆಸರಿನಲ್ಲಿದ್ದ 3 ಎಕರೆ 16 ಗುಂಟೆ ಕೃಷಿ ಭೂಮಿಯ ವಿವರವನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದಾರೆ.
ಕಳೆದ 2013ರ ವಿಧಾನ ಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಕೃಷಿ ಜಮೀನಿನ ಬಗ್ಗೆ ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ಪತ್ನಿ ಹೆಸರಲ್ಲಿರುವ 3.16 ಎಕರೆ ಜಮೀನು ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದಾರೆ. 2013ರ ಚುನಾವಣಾ ಅಫಿಡವಿಟ್‌ನಲ್ಲಿ ದಾಖಲೆಗಳು ಸಲ್ಲಿಕೆ ಆಗಿಲ್ಲ. ಸಿದ್ದರಾಮಯ್ಯ ಗಮನದಲ್ಲಿದ್ದೂ ಕೂಡ ಕೃಷಿ ಜಮೀನಿನ ವಿವರಗಳನ್ನು ಮುಚ್ಚಿ ಇಡಲಾಗಿದೆ. ಉದ್ದೇಶ ಪೂರ್ವಕವಾಗಿ ಕಲಂ ಖಾಲಿ ಬಿಟ್ಟಿದ್ದಾರೆ. ಅವರ ಪತ್ನಿ ಪಾರ್ವತಿ ರವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ 2010 ರಲ್ಲಿ ಈ ಜಾಗವನ್ನು ಗಿಫ್ಟ್ ಡೀಡ್ ಆಗಿ ನೊಂದಣಿ ಮಾಡಿದ್ದಾರೆ. ಈ ಜಾಗದ ಮೂಲ ಮಾಲೀಕರು ದೇವರಾಜು ಹಾಗೂ ಅವರ ಕುಟುಂಬಸ್ಥರಾಗಿದ್ದಾರೆ. ಆ.25,2004ರಂದು ಮಲ್ಲಿಕಾರ್ಜುನ ಸ್ವಾಮಿ ರವರಿಗೆ ಈ ಜಾಗವನ್ನು ಮಾರಾಟ ಮಾಡಿದ್ದಾರೆ. ಈ ಅವಧಿಯಲ್ಲಿ ಸಿದ್ದರಾಮಯ್ಯನವರು ಜೆಡಿಎಸ್ ಪಕ್ಷದಲ್ಲಿದ್ದು, ಉಪಮುಖ್ಯಮಂತ್ರಿಯಾಗಿದ್ದರು. 31ನೇ ಮಾರ್ಚ್ 2013 ರ ಹಣಕಾಸು ವರ್ಷದ ವಾರ್ಷಿಕ ರಿಟರ್ನ್ ಲೋಕಾಯುಕ್ತಕ್ಕೆಸಲ್ಲಿಸುವ ವೇಳೆ ಅವರು ತಮ್ಮ ಪತ್ನಿಯ ಬಳಿಯಿದ್ದ ನಿವೇಶನದ ವಿವರ ಉಲ್ಲೇಖಿಸಿದರು. 2013ರ ಚುನಾವಣೆ ಸಮಯದಲ್ಲಿ ಅಫಿಡಿವೆಟ್ ಸಲ್ಲಿಸುವಾಗ ಈ ವಿವರಗಳನ್ನು ಉಲ್ಲೇಖಿಸಿಲ್ಲ ಎಂದು ಆರೋಪಿಸಿ ದೂರು ನೀಡಿದ್ದಾರೆ.
ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.12 ರಂದು ಮೈಸೂರಿನ ಮೂಡಾ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ಸಜ್ಜಾಗಿದೆ. ಅಧಿವೇಶನದಲ್ಲೂ ಸಹ ಈ ವಿಚಾರದ ಬಗ್ಗೆ ಅಬ್ಬರಿಸುವುದಾಗಿ ಹೇಳಿದೆ. ಈ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಪ್ರಕರಣ ಹೊರಬಂದಾಗಿನಿಂದಲೂ ಬಿಜೆಪಿ ನಾಯಕರು ಈ ಪ್ರಕರಣವನ್ನು ಸಿಬಿಐ ಗೆ ಕೊಡುವಂತೆ ಆಗ್ರಹಿಸುತ್ತಿದ್ದಾರೆ. ಬಿಜೆಪಿ ಅಧ್ಯಕ್ಷ ವಿಜಯೇಂದ್ರ ರವರೂ ಸಹ ಸಿಎಂ ಪ್ರಮಾಣಿಕರಾಗಿದ್ದಾರೆ ಸಿಬಿಐ ತನಿಖೆಗೆ ಕೊಡಲಿ ಎಂದು ಸವಾಲಾಕಿದ್ದರು. ಈ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ. ಬಿಜೆಪಿಯವರು ಯಾವುದಾದರೂ ಒಂದು ಕೇಸ್ ಸಿಬಿಐಗೆ ಕೊಟ್ಟಿದ್ದಾರಯೇ ಎಂದಿದ್ದಾರೆ.