HomeStateKalaburagi: ರಾಜ್ಯದಲ್ಲಿ ನಡೀತು ಹೀನ ಕೃತ್ಯ, ಒಂದೂವರೆ ವರ್ಷ ಹಸುಗೂಸಿನ ಮೇಲೆ ಅತ್ಯಾಚಾರ….!

Kalaburagi: ರಾಜ್ಯದಲ್ಲಿ ನಡೀತು ಹೀನ ಕೃತ್ಯ, ಒಂದೂವರೆ ವರ್ಷ ಹಸುಗೂಸಿನ ಮೇಲೆ ಅತ್ಯಾಚಾರ….!

ಇಂದಿನ ಸಮಾಜದಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳಿಗೆ ಕಠಿಣ ಕಾನೂನಿದ್ದರೂ ಸಹ ಇನ್ನೂ ಈ ಕೃತ್ಯಗಳು ಮಾತ್ರ ಕಡಿಮೆಯಾಗುತ್ತಿಲ್ಲ. ಅನೇಕರು ಭಾರತದಲ್ಲಿ ಮತಷ್ಟು ಕಠಿಣ ರೀತಿಯ ಕಾನೂನು ಬರಬೇಕಿದೆ ಎಂಬ ಕೂಗೂ ಸಹ ಕೇಳಿಬರುತ್ತಿದೆ. ಇದೀಗ ಮತ್ತೊಂದು ಹೀನ ಕೃತ್ಯ ನಡೆದಿದೆ. ಕಲಬುರಗಿಯಲ್ಲಿ (Kalaburagi) ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರವೆಸಗಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ಇಡೀ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಘಟನೆಯಾಗಿದೆ ಎಂದು ಹೇಳಲಾಗುತ್ತಿದೆ.

ಕಲಬುರಗಿ (Kalaburagi)ಜಿಲ್ಲೆಯ ಆಳಂದ ತಾಲೂಕಿನ ಗ್ರಾಮವೊಂದರಲ್ಲಿ ಈ ಹೀನ ಕೃತ್ಯ ನಡೆದಿದೆ ಎನ್ನಲಾಗಿದೆ. ಈ ಗ್ರಾಮದಲ್ಲಿ ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದೆ. ಈ ಮಗು ಚಿಕಿತ್ಸೆ ಫಳಕಾರಿಯಾಗಿದೆ ಆಸ್ಪತ್ರೆಯಲ್ಲೇ ಸಾವನ್ನಪ್ಪಿದೆ ಎಂದು ಹೇಳಲಾಗಿದೆ. ವಿಕೃತ ಕಾಮಿ ಮಗುವಿನ ಎರಡೂ ಭಾಗದಲ್ಲಿ ವಿಕೃತಿ ಮೆರೆದಿದ್ದಾನೆ ಎಂದು ಹೇಳಲಾಗಿದ್ದು, ಕುರುಹುಗಳೂ ಸಹ ಪತ್ತೆಯಾಗಿದೆ ಎನ್ನಲಾಗಿದೆ. ಈ ಬಗ್ಗೆ ನರೋಣಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಹಾಗೂ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೂ ಕರ್ನಾಟಕ ರಾಜ್ಯದಲ್ಲಿ ಮಾತ್ರವಲ್ಲದೇ ದೇಶ ಸೇರಿದಂತೆ ವಿದೇಶಗಳಲ್ಲೂ ಇಂತಹ ಕ್ರೈಮ್ ಗಳು ನಡೆಯುತ್ತಿವೆ. ಅದರಲ್ಲೂ ಹಸು ಗೂಸಿನಿಂದ ಮುದುಕರ ವರೆಗೂ ಲಿಂಗ ಭೇದವಿಲ್ಲದೇ ಅತ್ಯಾಚಾರಗಳು, ದೌರ್ಜನ್ಯಗಳು ನಡೆಯುತ್ತಿವೆ. ಅಂತಹ ಪಾಪಿ ವಿಕೃತ ಕಾಮಿಗಳಿಗೆ ಮತಷ್ಟು ಕಠಿಣ ಕಾನೂನುಗಳು ಜಾರಿಯಾಗಬೇಕೆಂದು ಅನೇಕರ ಆಗ್ರಹವಾಗಿದೆ.

by Baluhttp://ismkannadanews.com
ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular