HomeStateCrime News: ಗುಡಿಬಂಡೆಯಲ್ಲಿ ಮಗನಿಂದಲೇ ತಾಯಿಯ ಮೇಲೆ ಅತ್ಯಾಚಾರಕ್ಕೆ ಯತ್ನದ ಆರೋಪ….!

Crime News: ಗುಡಿಬಂಡೆಯಲ್ಲಿ ಮಗನಿಂದಲೇ ತಾಯಿಯ ಮೇಲೆ ಅತ್ಯಾಚಾರಕ್ಕೆ ಯತ್ನದ ಆರೋಪ….!

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿನ್ನಹಳ್ಳಿ ಗ್ರಾಮದಲ್ಲಿ ಮಗನೊಬ್ಬ ತಾಯಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬ ಆರೋಪ (Crime News) ಕೇಳಿಬಂದಿದೆ. ಕುಡಿದ ಅಮಲಿನಲ್ಲಿ ತಾಯಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಆಕೆಯ ಮೇಲೆ ಹಲ್ಲೆ ನಡೆಸಿ ತಿಪ್ಪೆಗುಂಡಿಗೆ (Crime News)ಬಿಸಾಡಿದ್ದಾನೆ ಎಂದು ತಿಳಿದುಬಂದಿದೆ. ಈ ಸಂಬಂಧ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿ ಅಶೋಕ್ ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಗುಡಿಬಂಡೆ ತಾಲೂಕಿನ ಉಲ್ಲೋಡು ಗ್ರಾ.ಪಂ, ವ್ಯಾಪ್ತಿಯ ಚಿನ್ನಹಳ್ಳಿ ಗ್ರಾಮದಲ್ಲಿ ಕುಡಿದ ಅಮಲಿನಲ್ಲಿ ಮಗ ತಾಯಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬ (Crime News)ಆರೋಪ ಕೇಳಿಬಂದಿದೆ. ಆರೋಪಿ ಮಗ ತಂದೆ ಹಾಗೂ ತಾಯಿಯ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದಾನೆ. ಬಳಿಕ ಮನೆಯ ಹಿಂಬದಿಯ ತಿಪ್ಪೆಗುಂಡಿಗೆ ಎಸೆದು (Crime News)ಪರಾರಿಯಾಗಿದ್ದಾನೆ ಎನ್ನಲಾಗಿದೆ. ಇನ್ನೂ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಇನ್ನೂ ಆರೋಪಿಗೆ ಮದುವೆಯಾಗಿದ್ದು, ಹೆಂಡತಿ ಆತನಿಂದ ದೂರವಿದ್ದಾಳೆ ಎನ್ನಲಾಗಿದೆ. (Crime News)ಆರೋಪಿ ತಂದೆ ತಾಯಿಯೊಂದಿಗೆ ವಾಸವಿದ್ದ. ಆರೋಪಿಗೆ ಕುಡಿತದ ಚಟ ಇದ್ದ ಹಿನ್ನೆಲೆಯಲ್ಲಿ ಪ್ರತಿನಿತ್ಯ ಕುಡಿದು ಗಲಾಟೆ ಮಾಡುತ್ತಿದ್ದನಂತೆ. ಅನೇಕ ಬಾರಿ ಮನೆಯಲ್ಲಿ ಗಲಾಟೆ ನಡೆದಿತ್ತು. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಅವರ ಸಂಬಂಧಿಯೊಬ್ಬರು (Crime News) ಆಗ್ರಹಿಸಿದ್ದಾರೆ. ಇನ್ನೂ ಗುಡಿಬಂಡೆಗೆ ಡಿ.ವೈ.ಎಸ್.ಪಿ ಶಿವಕುಮಾರ್‍ ಭೇಟಿ ನೀಡಿ ಸಂತ್ರಸ್ತೆಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular