Teachers Protest – ಬಡ್ತಿ, ವರ್ಗಾವಣೆಗೆ ದೊಡ್ಡ ಅಡ್ಡಿಯಾಗಿರುವ ವೃಂದ ಮತ್ತು ನೇಮಕ ನಿಯಮ 2017ಕ್ಕೆ ತಿದ್ದುಪಡಿ ಮಾಡಿ ಶಿಕ್ಷಕರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಆ.12 ಕ್ಕೆ ಬೆಂಗಳೂರು ಚಲೋ (Teachers Protest) ಹಮ್ಮಿಕೊಂಡಿದ್ದು, ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಹಸೀಲ್ದಾರ್ ಹಾಗೂ ಬಿಇಒ ರವರ ಮೂಲಕ ಸರ್ಕಾರಕ್ಕೆ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು.
ಈ ವೇಳೆ ಸಂಘದ ತಾಲೂಕು ಅಧ್ಯಕ್ಷ ಬಾಲಾಜಿ ಮಾತನಾಡಿ, (Teachers Protest) ಕರ್ನಾಟಕ ರಾಜ್ಯ ಶಾಲಾ ಶಿಕ್ಷಕರು ಕಳೆದ 6, 7 ವರ್ಷಗಳಿಂದ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅಳವಡಿಸಿರುವ ಅವೈಜ್ಞಾನಿಕ ಅಂಶಗಳಿಂದ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತರುವ ಸೇವಾ ನಿರತ ಪದವೀಧರ ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯದ ಕುರಿತು ಹಲವಾರು ಬಾರಿ ತಾಲ್ಲೂಕು, ಜಿಲ್ಲೆ, ರಾಜ್ಯ ಹಂತದಲ್ಲಿ ಸಂಬಂಧಿಸಿದ ಎಲ್ಲರಿಗೂ ಮನವಿ (Teachers Protest) ಮಾಡಿಕೊಂಡಿದ್ದರೂ ಯಾರು ಸ್ಪಂದಿಸುವ ಕೆಲಸ ಮಾಡಿಲ್ಲ. 2017 ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿ ಆದವರಿಗೆ ಪೂರ್ವಾನ್ವಯಗೊಳಿಸಬಾರದು. ಇದರಿಂದ ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯ ಆಗುತ್ತಿದೆ. ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016ರ ಪೂರ್ವದಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢ ಶಾಲೆಗೆ ಬಡ್ತಿ ನೀಡಬೇಕು. ಇದರ ಜೊತೆಗೆ ಮತಷ್ಟು ಬೇಡಿಕೆಗಳನ್ನು ಈಡೇರಿಸುವಂತೆ ಆ.12 ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟ ಹಮ್ಮಿಕೊಂಡಿದ್ದು, (Teachers Protest) ಈ ಹೋರಾಟದಲ್ಲಿ ಎಲ್ಲಾ ಶಿಕ್ಷಕರು ಭಾಗಿಯಾಗಲಿದ್ದಾರೆ ಎಂದರು.
ಬಳಿಕ ಸಂಘದ ತಾಲೂಕು ಕಾರ್ಯದರ್ಶಿ ಶ್ರೀರಾಮಪ್ಪಮಾತನಾಡಿ, (Teachers Protest) ಪ್ರಾಥಮಿಕ ಶಾಲಾ ಶಿಕ್ಷಕರ ಸುಮಾರು ವರ್ಷಗಳ ಕೆಲ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ. ಶಿಕ್ಷಕರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಈಡೇರಿಸದ ಕಾರಣ ಜು.29 ರಂದು ಬೆಂಗಳೂರಿನಲ್ಲಿ ನಡೆದ ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಬೃಹತ್ (Teachers Protest) ಹೋರಾಟ ಹಮ್ಮಿಕೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಹಂತ ಹಂತವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಬರುತ್ತಿದ್ದೇವೆ. ಇದೀಗ ತಹಸೀಲ್ದಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಲಾಗಿದೆ. ಜೊತೆಗೆ ಹೋರಾಟದ ಬಗ್ಗೆ ಶಿಕ್ಷಕರಿಗೆ ಜಾಗೃತಿ ಮೂಡಿಸಲಾಗಿದೆ. ಆದ್ದರಿಂದ ಆ.12 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಹೋರಾಟದಲ್ಲಿ (Teachers Protest) ಎಲ್ಲಾ ಶಿಕ್ಷಕರು ಭಾಗಿಯಾಗಬೇಕೆಂದು ಮನವಿ ಮಾಡಿದರು.
ಈ (Teachers Protest) ಸಮಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಾರಾಯಣಸ್ವಾಮಿ, ಮುನಿಕೃಷ್ಣ, ಕೃಷ್ಣಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಉಮಾಶಂಕರ್, ಶ್ರೀಮರಾರೆಡ್ಡಿ, ಶ್ವೇತಾ, ಸುಮಿತ್ರಾ, ಆದಿನಾರಾಯಣ, ಮುದ್ದುರಾಜು, ಆದಿನಾರಾಯಣಪ್ಪ ಸೇರಿದಂತೆ ಹಲವರು ಇದ್ದರು.