ಪ್ರತಿಯೊಂದು ಮಗು ಒಂದಲ್ಲ ಒಂದು ಪ್ರತಿಭೆಯನ್ನು ಹೊಂದಿರುತ್ತದೆ, ಆ ಪ್ರತಿಭೆಯನ್ನು ಹೊರತರಲು (Prathiba Karanji) ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿದೆ. ಮಕ್ಕಳಲ್ಲಿನ ಪ್ರತಿಭೆಯನ್ನು ಗುರ್ತಿಸುವ ಕೆಲಸ ಶಿಕ್ಷಕರು ಹಾಗೂ ಪೋಷಕರು ಮಾಡಬೇಕೆಂದು (Prathiba Karanji) ಸಂಪನ್ಮೂಲ ವ್ಯಕ್ತಿ ರಾಜೇಶ್ ದೇಶಪಾಂಡೆ ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ (Prathiba Karanji) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಬಾಹ್ಯ ಪ್ರಪಂಚಕ್ಕೆ ಪರಿಚಯಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. (Prathiba Karanji)ಮಕ್ಕಳಲ್ಲಿನ ಪ್ರತಿಭೆಯನ್ನು ಗುರ್ತಿಸುವ ನಿಟ್ಟಿನಲ್ಲಿ ಸರ್ಕಾರ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಮಕ್ಕಳು ಸಹ ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸಬೇಕು. ಸೋಲು, (Prathiba Karanji) ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ. ಮಕ್ಕಳು ಹೆಚ್ಚು ಹೆಚ್ಚಾಗಿ ಇಂತಹ ಕಾರ್ಯ ಕ್ರಮಗಳಲ್ಲಿ ಭಾಗವಹಿಸುವ ಮೂಲಕ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ (Prathiba Karanji) ಪ್ರಗತಿ ಉತ್ಸಾಹದಾಯಕವಾಗಿ ಹಾಗೂ ಆತ್ಮವಿಶ್ವಾಸ ವೃದ್ಧಿಗಾಗಿ ಸರ್ಕಾರ ಕೈಗೊಂಡಿರುವ ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ (Prathiba Karanji)ಉತ್ತಮ ಪ್ರತಿಭೆಯನ್ನು ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಈ ವೇಳೆ ಸೋಮೇನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಸುಮಂಗಳಮ್ಮ, ಇಸಿಒ ನಂಜುಂಡಪ್ಪ, ಬಿ.ಆರ್.ಪಿ ಗಳಾದ ಮಂಜುನಾಥ್, ಭಾರತಿ, ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ್, (Prathiba Karanji) ಶಾಲೆಯ ಮುಖ್ಯ ಶಿಕ್ಷಕ ನಾಗಲಿಂಗಪ್ಪ ಸೇರಿದಂತೆ ಹಲವರು ಇದ್ದರು.