ಭಗವದ್ಗೀತೆ ಮೂಲಕ ಶ್ರೀಕೃಷ್ಣ ಸಾರಿರುವ ಸಂದೇಶಗಳು ಸರ್ವಕಾಲಕ್ಕೂ ಇಡೀ ವಿಶ್ವಕ್ಕೆ ಅನ್ವಯವಾಗಲಿವೆ. ಅವತಾರ ಪುರುಷ ಶ್ರೀಕೃಷ್ಣನ ಮಾರ್ಗದರ್ಶನ ಹಾಗೂ ಅವರು (SriKrishna Jayanthi) ನೀಡಿರುವ ಸಂದೇಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕೆಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.
ತಾಲೂಕು ಯಾದವ ಕುಲ ಟ್ರಸ್ಟ್‍ವತಿಯಿಂದ ಪಟ್ಟಣದ ತಹಸೀಲ್ದಾರ್ ವಸತಿ ಗೃಹದ ಆವರಣದಲ್ಲಿ ಆಯೋಜಿಸಲಾಗಿದ್ದ ಶ್ರೀಕೃಷ್ಣ ಜನ್ಮಾಷ್ಠಮಿ (SriKrishna Jayanthi) ಉತ್ಸವ ಕಾರ್ಯಕ್ರದಲ್ಲಿ ಭಾಗವಹಿಸಿ ಮಾತನಾಡಿ, ಯಾವುದೇ ಒಂದು ಸಮುದಾಯ ಅಭಿವೃದ್ದಿಯಾಗಲು ಶಿಕ್ಷಣ ಒಂದೇ ದಾರಿಯಾಗಿದೆ. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಬೇಕಾಗಿದೆ. (SriKrishna Jayanthi) ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಯಾದವ ಸಮುದಾಯ ಸರ್ಕಾರದ ವಿವಿಧ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದರು.
ಸರ್ಕಾರದಿಂದ ಸಿಗುವ ಎಲ್ಲಾ ರೀತಿಯ ಸೌಲಭ್ಯಗಳನ್ನು (SriKrishna Jayanthi) ಯಾದವ ಸಮುದಾಯಕ್ಕೆ ಒದಗಿಸುವುದು ನನ್ನ ಕರ್ತವ್ಯವಾಗಿದೆ ಎಂದ ಅವರು ಸಮುದಾಯ ಭವನ ನಿರ್ಮಾಣಕ್ಕಾಗಿ ಜಮೀನು ಮಂಜೂರು ಮಾಡಿಸಿಕೊಂಡುವಂತೆ ಸಮುದಾಯದ ಮುಖಂಡರು ಮನವಿ ಮಾಡಿದ್ದರು ಅವರ ಮನವಿಯಂತೆ ಇಂದು ಸಮುದಾಯ ಭವನಕ್ಕೆ ಸರ್ಕಾರದಿಂದ 20 ಗುಂಟೆ ಜಮೀನು ಮಂಜೂರಾತಿ ಮಾಡಿಸಲಾಗಿದೆ. (SriKrishna Jayanthi) ಅಲ್ಲದೆ ಭವನದ ನಿರ್ಮಾಣಕ್ಕೆ ಮೊದಲ ಹಂತವಾಗಿ 25 ಲಕ್ಷ ರೂ.ಗಳ ಹಣವನ್ನು ಸಂಘಕ್ಕೆ ನೀಡಲಾಗಿದೆ ಸಮುದಾಯದವರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದರು.
ಬಳಿಕ ಬಾಗೇಪಲ್ಲಿ ಪಟ್ಟಣದ ತಾ.ಪಂ ಆವರಣದಲ್ಲಿ 2023-24ನೇ ಸಾಲಿನ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದವತಿಯಿಂದ ಆಯೋಜಿಸಲಾಗಿದ್ದ ಅರ್ಹಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿ, ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಮಹಿಳೆಯರು ಸ್ವಾಲಂಭಿಗಳಾಗಿ ಜೀವನ ನಡೆಸಲು ಅನುಕೂಲವಾಗುವ ಉದ್ದೇಶದಿಂದ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರ ಸೇರಿದಂತೆ ಅನೇಕ ಸೌಲಭ್ಯಗಳನ್ನು ಕಲ್ಪಿಸಿದೆ ಈ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಅಭಿವೃದ್ದಿ ಹೊಂದಬೇಕೆಂದರು.
ಈ ಸಮಯದಲ್ಲಿ ನಿಗಮದಿಂದ 36 ಅರ್ಹ ಮಹಿಳಾ ಫಲಾನುಭವಿಗಳಿಗೆ ಸುಮಾರು 18 ಸಾವಿರ ರೂ.ಗಳ ಬೆಲೆಬಾಳುವ ಹೊಲಿಗೆ ಯಂತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಮನಿಷಾ ಎನ್.ಪತ್ರಿ, ಸಿಡಿಪಿಒ ರಾಮಚಂದ್ರಪ್ಪ, ಸಮುದಾಯದ ಮುಖಂಡ ಹಾಗೂ ಕೆಡಿಪಿ ಸದಸ್ಯ ಜಿ.ರಾಮಕೃಷ್ಣ, ಬಾಲರೆಡ್ಡಿ ಸೇರಿದಂತೆ ಯಾದವ ಕುಲ ಟ್ರಸ್ಟ್‍ನ ಪದಾಧಿಕಾರಿಗಳು ಇದ್ದರು.