Friday, November 22, 2024

Siddaramaiah : ನಾನು ರಾಜೀನಾಮೆ ಯಾಕೆ ಕೊಡಬೇಕು, ತನಿಖೆಗೆ ಮಾತ್ರ ಅನುಮತಿ, ಪ್ರಾಸಿಕ್ಯೂಷನ್ ಗೆ ಅಲ್ಲ ಎಂದ ಸಿದ್ದರಾಮಯ್ಯ….!

ಸಿಎಂ ಸಿದ್ದರಾಮಯ್ಯನವರ (Siddaramaiah)  ವಿರುದ್ದ ಕೇಳಿಬಂದ ಮುಡಾ ಸೈಟು ಹಗರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ತೀರ್ಪು ನೀಡಿದೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಎನ್‌ಎಸ್‌ ಸೆಕ್ಷನ್‌ 218, ಭ್ರಷ್ಟಾಚಾರ ತಡೆ ಕಾಯ್ದೆ (PC Act) ಸೆಕ್ಷನ್ 17 ಎ, 19 ರ ಅಡಿ ಪ್ರಾಸಿಕ್ಯೂಷನ್‌ಗೆ ದೂರುದಾರರು ಅನುಮತಿ ಕೇಳಿದ್ದರು. ಪಿಸಿ ಕಾಯ್ದೆಯ 19 ಅಡಿ ಕೇಳಿದ್ದ ಮನವಿಯನ್ನು ರಾಜ್ಯಪಾಲರೇ ತಿರಸ್ಕರಿಸಿದ್ದರು. ಈಗ ಕೋರ್ಟ್‌ ಬಿಎನ್‌ಎಸ್‌ ಸೆಕ್ಷನ್‌ 218ರ ಅಡಿ ನೀಡಿರುವ ಅನುಮತಿಯನ್ನು ತಿರಸ್ಕರಿಸಿದೆ. ನ್ಯಾಯಾಲಯ ಈಗ ಪಿಸಿ ಕಾಯ್ದೆಯ ಸೆಕ್ಷನ್‌ 17 ಎ ಮಾತ್ರ ಸೀಮಿತಗೊಳಿಸಿ ಆದೇಶ ಪ್ರಕಟಿಸಿದೆ. ಆದ್ದರಿಂದ ನಾನು (Siddaramaiah) ರಾಜೀನಾಮೆ ಏಕೆ ಕೊಡಬೇಕು, ತನಿಖೆಗೆ ಅನುಮತಿ ಅಷ್ಟೆ, ಪ್ರಾಸಿಕ್ಯೂಷನ್ ಗೆ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಮ್ಮ (Siddaramaiah) ಸರ್ಕಾರವನ್ನು ಅಭದ್ರಗೊಳಿಸಲು ಹಾಗೂ ನನ್ನ ರಾಜಕೀಯ ಜೀವನಕ್ಕೆ ಮಸಿ ಬಳಿಯಲು ಬಿಜೆಪಿ – ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಭವಿಷ್ಯದಲ್ಲಿ ಸೋಲು ಖಚಿತ. ಬಿಜೆಪಿ – ಜೆಡಿಎಸ್ ನಾಯಕರ ಸಂಚು, ರಾಜಭವನ ದುರುಪಯೋಗ – ದುರ್ಬಳಕೆಗೆ ನಾನು ಹೆದರುವುದಿಲ್ಲ. ರಾಜ್ಯದ ಜನ, ಪಕ್ಷದ ಹೈಕಮಾಂಡ್, ಶಾಸಕರು, ಸಚಿವರು, ಕಾರ್ಯಕರ್ತರು ನನ್ನೊಂದಿಗಿದ್ದಾರೆ. ಕಾನೂನು ಹೋರಾಟಕ್ಕೆ ಹೈಕಮಾಂಡ್ ಸಹಕಾರ ನೀಡಲಿದೆ. ನರೆಂದ್ರ ಮೋದಿಯವರ ಭಾರತೀಯ ಜನತಾ ಪಾರ್ಟಿ ಸರ್ಕಾರ ಕೇವಲ ನನ್ನ ಮೇಲಷ್ಟೇ ಅಲ್ಲ, ಇಡೀ ದೇಶದ ವಿರೋಧಪಕ್ಷಗಳ ಮೇಲೆ ಸೇಡಿನ ರಾಜಕೀಯ ಮಾಡುತ್ತಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, (Siddaramaiah)  ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ ಕಾಯ್ದೆ 19ರಂತೆ ತನಿಖೆಗೆ ಅನುಮತಿ ನೀಡುವುದನ್ನು ತಿರಸ್ಕರಿಸಿ, ಪಿಸಿ ಕಾಯ್ದೆಯ 17ಎ ಪ್ರಕಾರ ತನಿಖೆಗೆ ಉಚ್ಛನ್ಯಾಯಾಲಯ ಆದೇಶ ನೀಡಿದೆ. ಈ ತೀರ್ಪಿನ ಮೇಲೆ ಮುಂದಿನ ಕಾನೂನು ಹೋರಾಟದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ, ತೀರ್ಮಾನ ಮಾಡಲಾಗುವುದು. ನಾನು ತಪ್ಪು ಮಾಡಿಲ್ಲ. 17ಎ ರಡಿ ತನಿಖೆ ಮಾಡಲು ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ. ಇಡೀ ದೇಶದಲ್ಲಿ ವಿಪಕ್ಷಗಳ ಸರ್ಕಾರದ ಮೇಲೆ ನರೇಂದ್ರ ಮೋದಿ ಅವರ ಸರ್ಕಾರ ಪಿತೂರಿ ಮಾಡಿದಂತೆ ಕರ್ನಾಟಕದಲ್ಲಿಯೂ ನನ್ನ ಹಾಗೂ ನಮ್ಮ ಸರ್ಕಾರದ ವಿರುದ್ಧ ಪಿತೂರಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಖಂಡಿತಾ ನನಗೆ (Siddaramaiah) ಜಯ ಸಿಗಲಿದೆ.

Siddaramaiah comments about muda case judgement 1

ಬಿಜೆಪಿಯವರನ್ನು ನಾವು ರಾಜಕೀಯವಾಗಿ ಎದುರಿಸುತ್ತೇವೆ. ಅವರು ಹೇಳಿದ ಮಾತ್ರಕ್ಕೆ ನಾನು ರಾಜೀನಾಮೆ ಏಕೆ ಕೊಡಬೇಕು? ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮೇಲೆ ಎಫ್.ಐ.ಆರ್ ಆಗಿದ್ದು, ಅವರು ಜಾಮೀನಿನ ಮೇಲೆ ಇದ್ದಾರೆ. ಅವರು ರಾಜೀನಾಮೆ ಕೊಟ್ಟಿದ್ದಾರೆಯೇ? ಇದು ಅವರಿಗೆ ಅನ್ವಯವಾಗುವುದಿಲ್ಲವೇ? ತನಿಖೆ ಹಂತದಲ್ಲಿಯೇ ರಾಜೀನಾಮೆ ಕೊಡಬೇಕು ಎನ್ನುವ ಬಿಜೆಪಿ ವಾದಕ್ಕೆ ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ಏನೆಂದು ಕೇಳಿ ಎಂದು ಪ್ರಶ್ನೆ ಮಾಡಿದರು.

ಬಿಜೆಪಿ ಹಾಗೂ ಜೆ.ಡಿ.ಎಸ್ ನವರು ಒಮ್ಮೆಯೂ ರಾಜ್ಯದಲ್ಲಿ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಂದಿಲ್ಲ. (Siddaramaiah) ವಿಧಾನಸಭೆ ಚುನಾವಣೆಯಲ್ಲಿಯೂ ಸೋತಿದ್ದಾರೆ. ಅವರು ಈ ಹಿಂದೆ ಹಣಬಲದಿಂದ, ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೇ ಹೊರತು, ಜನರ ಆಶೀರ್ವಾದದೊಂದಿಗೆ ಎಂದಿಗೂ ಬಂದಿಲ್ಲ.  ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿದ್ದೇವೆ ಹಾಗಾಗಿ ಆಪರೇಷನ್ ಕಮಲ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ದುಡ್ಡನ್ನು ಕೊಟ್ಟು ಶಾಸಕರನ್ನು ಖರೀದಿಸುವ ಪ್ರಯತ್ನ ಮಾಡಿದ್ದರು, ಆದರೆ ನಮ್ಮ ಯಾವ ಶಾಸಕರೂ ದುಡ್ಡಿನ ಹಿಂದೆ ಹೋಗದ ಕಾರಣ ಅವರ ಪ್ರಯತ್ನ ವಿಫಲವಾಯಿತು.

ನಮ್ಮ ಸರ್ಕಾರದ ಬಡವರ ಪರ ಕಾರ್ಯಕ್ರಮಗಳನ್ನು ಬಿಜೆಪಿ ನಾಯಕರು ವಿರೋಧಿಸುತ್ತಾ ಬಂದಿದ್ದಾರೆ. ಶೂಭಾಗ್ಯ, ಪಶುಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಜನಪರ ಯೋಜನೆಗಳು ಹಾಗೂ ಈಗಿನ ಗ್ಯಾರಂಟಿ ಯೋಜನೆಗಳನ್ನು ಸಹ ವಿರೋಧಿಸುತ್ತಿದ್ದಾರೆ. ಬಿಜೆಪಿಯವರು ಸಾಮಾಜಿಕ ನ್ಯಾಯ, ಬಡವರ ವಿರೋಧಿಗಳು. ಸರ್ಕಾರಕ್ಕೆ ಕಪ್ಪು ಮಸಿ ಬಳಿಯುವುದು ಅವರ ದುರಾಲೋಚನೆ. ಹೈಕೋರ್ಟ್ ಆದೇಶದ ಪ್ರತಿಯನ್ನು ಸಂಪೂರ್ಣ ಪರಿಶೀಲಿಸಿ, ಮುಂದಿನ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ.

by Admin
by Adminhttp://ismkannadanews.com
Welcome to ISM News, if you want to contact us, then feel free to say anything about www.ismkannadanews.com. We'll appreciate your feedback.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe

Latest Articles

error: Content is protected !!