ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್.ಎಸ್.ಎ (Local News) ಶಿಕ್ಷಕರು ಹಾಗೂ ಸಂಪನ್ಮೂಲ ವ್ಯಕ್ತಿಗಳ ಆಗಸ್ಟ್ ಹಾಗೂ ಸೆಪ್ಟೆಂಬರ್ ಮಾಹೆಯ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು (Local News) ಒತ್ತಾಯಿಸಿ ಸರ್ಕಾರಿ ನೌಕರರ ಸಂಘ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ವೇಳೆ ಗುಡಿಬಂಡೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ (Local News)ಕೆ.ವಿ.ನಾರಾಯಣಸ್ವಾಮಿ ಮಾತನಾಡಿ, ತಾಲೂಕಿನಲ್ಲಿ ಕೆಲಸ ನಿರ್ವಹಿಸುತ್ತಿರುವ 14 ಎಸ್.ಎಸ್.ಎ ಶಿಕ್ಷಕರಿಗೆ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸುತ್ತಿರುವ 13 ಜನರಿಗೆ ಆಗಸ್ಟ್ ಮತ್ತು ಸೆಪ್ಟೆಂಬರ್ ಮಾಹೆಯ ವೇತನ ಬಿಡುಗಡೆ ಮಾಡದೇ ಇರುವುದರಿಂದ ನೌಕರರು ಆರ್ಥಿಕ ಸಂಕಷ್ಟಗಳಿಗೆ ಸಿಲುಕಿದ್ದಾರೆ. (Local News) ಸಕಾಲಕ್ಕೆ ವೇತನ ಬರದ ಕಾರಣ ಶಿಕ್ಷಕರ ಮಕ್ಕಳ ವಿದ್ಯಾಭ್ಯಾಸ, ಮನೆ ಬಾಡಿಗೆ, ಆರೋಗ್ಯ ಸೇರಿ ಇತರೆ ಸೌಕರ್ಯಗಳಿಂದ ವಂಚಿರತಾಗುವಂತಾಗಿದೆ. ರಾಜ್ಯದ ಎಲ್ಲಾ ತಾಲೂಕಿನ ನೌಕರರಿಗೂ ವೇತನ ಪಾವತಿಯಾಗಿದೆ. (Local News) ಆದರೆ ಗುಡಿಬಂಡೆ ತಾಲೂಕಿನಲ್ಲಿ ಮಾತ್ರ ಪಾವತಿ ಆಗದೇ ಇರುವುದರಿಂದ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಆದ್ದರಿಂದ ಕೂಡಲೇ ಅವರಿಗೆ ವೇತನ ಬಿಡುಗಡೆ ಮಾಡಬೇಕೆಂದರು.
ನಂತರ ಗುಡಿಬಂಡೆ (Local News) ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ ಮಾತನಾಡಿ, ತಾಲೂಕಿನಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿ.ಆರ್.ಪಿ, ಬಿ.ಆರ್.ಪಿ ಹಾಗೂ ಇಸಿಒ ಸೇರಿ ಎಸ್.ಎಸ್.ಎ ಶಿಕ್ಷಕರಿಗೆ ಕಳೆದ ಎರಡು ತಿಂಗಳುಗಳಿಂದ ವೇತನ ಬಾಕಿ ಇದೆ. ಇದರಿಂದಾಗಿ ಆಯಾ ಸಿಬ್ಬಂದಿಗಳು (Local News) ಪಾವತಿಸಬೇಕಾದ ವೇತನ ಸಾಲ, ಇಎಂಐ, ಮನೆ ಸಾಲ, ಮಕ್ಕಳ ವಿದ್ಯಾಭ್ಯಾಸ ಶುಲ್ಕ, ಮನೆ ನಿರ್ವಹಣೆ, ತಂದೆ ತಾಯಿ ಆರೋಗ್ಯದ ಖರ್ಚು ಸೇರಿದಂತೆ ಹಲವಾರು ಸಮಸ್ಯೆಗಳನ್ನು (Local News) ಎದುರಿಸುತ್ತಿದ್ದಾರೆ. ಆದ್ದರಿಂದ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿ ನೌಕರರಿಗೆ ನೆರವಾಗಬೇಕೆಂದರು.
ಇನ್ನು (Local News) ನೌಕರರ ಸಂಘದಿಂದ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರತ್ಯೇಕವಾಗಿ ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಶಿಕ್ಷಕರಿಗೆ ಕೂಡಲೇ ವೇತನ ಬಿಡುಗಡೆಗೆ ಕ್ರಮವಹಿಸುತ್ತೇನೆಂದು ಆಶ್ವಾಸನೆ ನೀಡಿದರು. ಈ ವೇಳೆ ನೌಕರರ ಸಂಘದ ಕಾರ್ಯದರ್ಶಿ (Local News) ಮುನಿಕೃಷ್ಣ, ನಿರ್ದೇಶಕ ಕೃಷ್ಣಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಶ್ರೀರಾಮರೆಡ್ಡಿ, ಸುಮಿತ್ರ, ಕಾರ್ಯದರ್ಶಿ ಶ್ರೀರಾಮಪ್ಪ, ಪದವಿಧರರ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎನ್.ರಾಜಶೇಖರ್ ಸೇರಿದಂತೆ ಹಲವರಿದ್ದರು.