ರಾಜ್ಯದಲ್ಲಿ ಅ.9 ರವರೆಗೂ ಗುಡುಗು, ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆಯನ್ನು (Rain update) ಹವಾಮಾನ ಇಲಾಖೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಮದ್ಯಾಹ್ನವೇ ವರುಣನ ಆಗಮನವಾಗಿದ್ದು, ಗುಡುಗು, ಮಿಂಚು ಸಹಿತಿ ಮಳೆಯಾಗಿದೆ. ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನವರಾತ್ರಿ ಹಬ್ಬದ ಆಚರಣೆಯ ಸಮಯದಲ್ಲಿ ವರುಣ ಕೃಪೆ ತೋರಿದ್ದು, ಜನರಿಗೆ ಸಂತಸ ತಂದಿದೆ ಎನ್ನಲಾಗಿದೆ.
ಕರ್ನಾಟಕ ರಾಜ್ಯದ ಹಲವು ಕಡೆ ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬೆಳಗಾವಿ, ಉತ್ತರ ಕನ್ನಡ, ಚಾಮರಾಜನಗರದ ವ್ಯಾಪ್ತಿಯಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆಯಂತೆ. ಇನ್ನೂ ಕೊಪ್ಪಳ, ಗುಲ್ಬರ್ಗಾ, ಗದಗ, ರಾಯಚೂರು, ಹಾವೇರಿ, ಧಾರವಾಡ, ಬಳ್ಳಾರಿ, ಬೀದರ್, ಬಿಜಾಪುರ, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ. ಮಂಡ್ಯ, ಕೋಲಾರ, ಬೆಂಗಳೂರೂ, ರಾಮನಗರ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಅಕ್ಟೋಬರ್ 9 ರಂದು ಬೀದರ್, ಕಲಬುರಗಿ, ದಾವಣಗೆರೆ, ದಕ್ಷಿಣ ಕನ್ನಡ, ತುಮಕೂರು, ಶಿವಮೊಗ್ಗ, ಉಡುಪಿ, ಧಾರವಾಡ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಗದಗ, ಬೆಳಗಾವಿ, ಧಾರವಾಡ, ಉಡುಪಿ, ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇನ್ನೂ ದೇಶ ಅನೇಕ ರಾಜ್ಯಗಳಲ್ಲಿ ಮಳೆಯ ಪ್ರಭಾವ ಕಡಿಮೆಯಿದೆ. ಕೆಲವೊಂದು ರಾಜ್ಯಗಳಲ್ಲಿ ಭಾರಿ ಮಳೆ ಮುಂದುವರೆದಿದೆ. ಅಕ್ಟೋಬರ್ 8 ರವರೆಗೆ ದೇಶದ ಈ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.4 ರಂದು ಗಂಗಾ ಪಶ್ಚಿಮ ಬಂಗಾಳ, ಅಕ್ಟೋಬರ್ 4 ರಿಂದ 5 ರಂದು ಅಸ್ಸಾಂ, ಮಣಿಪುರ, ಮಿಜೋರಾಂ, ಮೇಘಾಲಯ ಹಾಗೂ ನಾಗಾಲ್ಯಾಂಡ್, ಅ.6 ರಿಂದ 8 ರವರೆಗೆ ತ್ರಿಪುರಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.