ಚಾಮರಾಜನಗರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಏ.29ರ ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದು, ಈ ಸುದ್ದಿ ಹೊರಬರುತ್ತಿದ್ದಂತೆ ಅವರ ಕುಟುಂಬಸ್ಥರು, ರಾಜಕಾರಣಿಗಳು ಹಾಗೂ ಅವರ ಬೆಂಬಲಿಗರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಳೆದೆರಡು ದಿನಗಳ ಹಿಂದೆಯಷ್ಟೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು (ಏ.29) ರ ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಬಹು ಅಂಗಾಗ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ರವರನ್ನು ಕಳೆದೆರಡು ದಿನಗಳ ಹಿಂದೆಯಷ್ಟೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ವೈದ್ಯರು ಅವರನ್ನು ಗುಣಮುಖರನ್ನಾಗಿ ಮಾಡಲು ತುಂಬಾ ಶ್ರಮವಹಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯೆಜಿಸಿದ್ದಾರೆ. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ ಬಳಿಕ ಸ್ವಲ್ಪ ಚೇತರಿಕೆ ಕಂಡಿದ್ದರು. ಎಲ್ಲರ ಜೊತೆಗೆ ಚೆನ್ನಾಗಿ ಮಾತನಾಡಿದ್ದರು. ಭಾನುವಾರದಿಂದ ಮಾತನಾಡಲು ಆಗುತ್ತಿರಲಿಲ್ಲ. ಅವರಿಗೆ ಪೆನ್ನು ಪೇಪರ್ ಕೊಟ್ಟಿದ್ವಿ. ಅವರು ಪೇಪರ್ ನಲ್ಲಿ ಕಾಫಿ ಎಂದು ಬರೆದಿದ್ದರು. ಎರಡು ಗುಟುಕು ಕಾಫಿ ಕುಡಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು. ಇನ್ನೂ ನಮ್ಮ ತಂದೆ ಸದಾ ಸಂತೋಷವಾಗಿದ್ದರು. ನನ್ನ ಸಾವಾದರೂ ನಗುತ್ತಾ ಕಳುಹಿಸಿಕೊಡಿ ಎಂದು ಹೇಳಿದ್ದರು. ಅದೇ ರೀತಿ ಅವರನ್ನು ಕಳುಹಿಸಿಕೊಡೋಣ ಎಂದು ಮನವಿ ಮಾಡಿದ್ದರು.
ಕಳೆದ ಮಾರ್ಚ್ ಮಾಹೆಯಲ್ಲಿ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ರವರು ಘೋಷಣೆ ಮಾಡಿದ್ದರು. ಅವರನ್ನು ಚುನಾವಣಾ ಪ್ರಚಾರಕ್ಕೆ ಆಹ್ವಾನಿಸಲು ಬಿಜೆಪಿ ಹಾಗೂ ಕಾಂಗ್ರೇಸ್ ಎರಡೂ ಪಕ್ಷಗಳು ಮುಂದಾಗಿದ್ದವು. ಇದೀಗ ಅವರು ಮೃತಪಟ್ಟಿದ್ದ ಸುದ್ದಿ ತಿಳಿದು ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ.