Thursday, November 21, 2024

Dalith Protest: ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ದಲಿತ ಒಕ್ಕೂಟದ ಪ್ರತಿಭಟನೆ…!

Dalith Protest – ಸುಪ್ರೀಂ ಕೋರ್ಟಿನ ಆದೇಶದಂತೆ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕರ್ನಾಟಕ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದ್ದು, ಕೂಡಲೇ ಒಳಮೀಸಲಾತಿಯನ್ನು ಘೋಷಣೆ ಮಾಡಬೇಕೆಂದು ದಲಿತ ಸಂಘಟನೆಗಳ (Dalith Protest) ಒಕ್ಕೂಟ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಬಳಿಕ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

Dalith protest 2

ಈ ವೇಳೆ ದಲಿತ ಸಂಘಟನೆಗಳ ಒಕ್ಕೂಟದ ಎಲ್.ಎನ್.ಈಶ್ವರಪ್ಪ, ಸುಪ್ರೀಂಕೋರ್ಟ್ ಒಳಮೀಸಲಾತಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಆಗಸ್ಟ್‌ನಲ್ಲಿ ಆದೇಶ ನೀಡಿದೆ. ಆದರೆ ತಿಂಗಳು ಕಳೆದರೂ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಬಗ್ಗೆ ಚಕಾರವೆತ್ತಿಲ್ಲ. ಒಳಮೀಸಲಾತಿ ಜಾರಿಗಾಗಿ ಕಳೆದ 30 ವರ್ಷಗಳಿಂದಲೂ ಈ ಕುರಿತು ಹೋರಾಟ (Dalith Protest) ಮಾಡಿಕೊಂಡು ಬಂದಿದ್ದು ನಮ್ಮ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಅಲ್ಲದೆ ಇದು ಮೀಸಲಾತಿ ವ್ಯವಸ್ಥೆಯಲ್ಲಿ ಬಹಳ ಮುಖ್ಯವಾದ ಹೆಜ್ಜೆಯಾಗಿದೆ. ಉಪ ಜಾತಿಗಳಿಗೆ ಒಳ ಮೀಸಲಾತಿ (Dalith Protest) ಇಲ್ಲದೆ ಅಭಿವೃದ್ದಿಯಲ್ಲಿ ಹಿಂದಿವೆ. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೆ ಒಳಮೀಸಲಾತಿ ನೀಡುವುದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತರಬೇಕೆಂದು ಆಗ್ರಹಿಸಿದ್ದರು. ಆದರೆ ಒಳಮೀಸಲಾತಿ (Dalith Protest) ಕುರಿತು ಇದ್ದ ಗೊಂದಲಗಳಿಗೆ ಸುಪ್ರೀಂಕೋರ್ಟ್ ತೆರೆ ಎಳೆದು ಆದೇಶ ನೀಡಿದ್ದರೂ ಮುಖ್ಯಮಂತ್ರಿಗಳು ಮೀನಮೇಷ ಎಣಿಸುತ್ತಿದ್ದಾರೆ ಕೂಡಲೇ ಒಳ ಮೀಸಲಾತಿ ಜಾರಿ ಮಾಡದೇ ಇದ್ದರೇ ಮುಂದಿನ (Dalith Protest)  ದಿನಗಳಲ್ಲಿ ಮತಷ್ಟು ಉಗ್ರ ರೀತಿಯ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಬಳಿಕ ದಲಿತ ಮುಖಂಡ ಸುಬ್ಬರಾಯಪ್ಪ ಮಾತನಾಡಿ, ಒಳಮೀಸಲಾತಿ (Dalith Protest) ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದರೂ ರಾಜ್ಯ ಸರ್ಕಾರ ಜಾಣಕುರುಡು ವಹಿಸುತ್ತಿದೆ. ಚುನಾವಣೆ ಸಮಯದಲ್ಲಿ ಮತ ಕೇಳುವ ನೆಪದಲ್ಲಿ ರಾಜಕಾರಣಿಗಳು ಒಳಮೀಸಲಾತಿಯ ಬಗ್ಗೆ ಮಾತನಾಡುತ್ತಾರೆ. ಆದರೆ ಅಧಿಕಾರ ಸಿಕ್ಕ ನಂತರ ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾರೆ. ದಲಿತರಿಗೆ ಯಾವ ಸೌಲಭ್ಯಗಳು ಸಿಗುತ್ತಿಲ್ಲ. (Dalith Protest)  ಪರಿಶಿಷ್ಟ ಜಾತಿಯೊಳಗಡೆ ಯಾವುದೇ ಸೌಲಭ್ಯ ದೊರೆಯದೆ ಅನ್ಯಾಯಕ್ಕೊಳಗಾಗಿರುವ ಸಮುದಾಯಗಳಿಗೆ ಒಳ ಮೀಸಲಾತಿಯು ಸಾಮಾಜಿಕ ನ್ಯಾಯ ದೊರಕಿಸಿಕೊಡಲಿದ್ದು, ಶೀಘ್ರ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

Dalith protest 1

ಈ ಸಮಯದಲ್ಲಿ (Dalith Protest) ದಲಿತ ಮುಖಂಡ ಗಂಗಪ್ಪ, ನಾರಾಯಣಸ್ವಾಮಿ, ರಮಣಪ್ಪ ಸೇರಿದಂತೆ ಹಲವರು ಮಾತನಾಡಿದರು. ಪಟ್ಟಣ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆಯ ಮೂಲಕ ಹಾಗೂ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್‍ ಸಿಗ್ಬತ್ತುಲ್ಲಾ ರವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ಈ ವೇಳೆ ದಲಿತ (Dalith Protest) ಸಂಘಟನೆಗಳ ಒಕ್ಕೂಟ ಒಳ ಮೀಸಲಾತಿ ಹೋರಾಟ ಸಮಿತಿಯ ಪ.ಪಂ ಉಪಾಧ್ಯಕ್ಷ ಗಂಗರಾಜು, ದಲಿತ ಮುಖಂಡರಾದ ಚನ್ನರಾಯಪ್ಪ, ಜಿ.ವಿ.ಗಂಗಪ್ಪ, ಗಂಗಾಧರಪ್ಪ, ಬಾವಣ್ಣ, ಎಂ.ಎನ್.ನಾರಾಯಣಪ್ಪ, ಚಲಪತಿ, ಬ್ಯಾಂಕ್ ಸುಬ್ಬರಾಯಪ್ಪ, ನರಸಿಂಹಮೂರ್ತಿ, ಅಶ್ವತ್ಥಪ್ಪ, ವೆಂಕಟೇಶ್, ರಾಮಾಂಜಿ, ರಾಜು, ನರಸಿಂಹಪ್ಪ, ಅಮರಾವತಿ, ಜಗನ್ನಾಥ್, ರಮಣಪ್ಪ, ಕೆ.ಎನ್.ನರಸಿಂಹಪ್ಪ ಸೇರಿದಂತೆ ಹಲವರು ಇದ್ದರು.

by Admin
by Adminhttp://ismkannadanews.com
Welcome to ISM News, if you want to contact us, then feel free to say anything about www.ismkannadanews.com. We'll appreciate your feedback.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe

Latest Articles

error: Content is protected !!