ಪ್ರತಿಭಾವಂತ ವಿದ್ಯಾರ್ಥಿಗೆ ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣ ಪಡೆಯಲು ಹಣಕಾಸಿನ ಸಮಸ್ಯೆಯಿರುತ್ತದೆ. ಈ ಸಮಸ್ಯೆಯನ್ನು ಬಗೆಹರಿಸಲು ಕೇಂದ್ರ ಸರ್ಕಾರ ಪಿಎಂ ವಿದ್ಯಾಲಕ್ಷ್ಮಿ (PM Vidyalaxmi) ಎಂಬ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲಾಗುತ್ತಿದೆ. ಉನ್ನತ ವ್ಯಾಸಂಗಕ್ಕೆ ಆರ್ಥಿಕ ಸಮಸ್ಯೆಯಿಂದ ಹಿಂಜರಿಯುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ.
ಕೇಂದ್ರ ಸರ್ಕಾರ ಪಿಎಂ ವಿದ್ಯಾಲಕ್ಷ್ಮಿ (PM Vidyalaxmi) ಎಂಬ ಯೋಜನೆಯನ್ನು ಸರ್ಕಾರದ ವೆಬ್ ಸೈಟ್ ಮೂಲಕ ಜಾರಿಗೊಳಿಸಲಾಗುತ್ತದೆ. ಅದರ ಮೂಲಕ ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಬ್ಯಾಂಕ್ ಗಳು ಮತ್ತು ಹಣಕಾಸು ಸಂಸ್ಥೆಗಳಿಂದ ಕೊಲ್ಯಾಟರಲ್ ಅಥವಾ ಗ್ಯಾರಂಟಿದಾರರ ಅಗತ್ಯವಿಲ್ಲದೇ ಸಾಲವನ್ನು ಪಡೆಯಲು ಅರ್ಹರಾಗಿರುತ್ತಾರೆ. ಈ ಸಾಲ ಪೂರ್ಣ ಪ್ರಮಾಣದ ಬೋಧನಾ ಶುಲ್ಕ ಸೇರಿದಂತೆ ಇತರೆ ವೆಚ್ಚಗಳನ್ನು ಸಹ ಒಳಗೊಂಡಿರುತ್ತದೆ. ಈ ಯೋಜನೆಯು NIRF ಶ್ರೇಯಾಂಕದಲ್ಲಿ ಅಗ್ರ 100ರೊಳಗೆ ಸ್ಥಾನ ಪಡೆದಿರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುತ್ತದೆ. ಜೊತೆಗೆ NIRFನಲ್ಲಿ 101-200ರಲ್ಲಿ ರಾಜ್ಯ ಸರ್ಕಾರದ HEI ಗಳು ಮತ್ತು ಎಲ್ಲಾ ಕೇಂದ್ರ ಸರ್ಕಾರದ ಆಡಳಿತದ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದೆ. ಎಂದು ಹೇಳಲಾಗಿದೆ.
ಈ ಕುರಿತು ಪೋಸ್ಟ್ ಇಲ್ಲಿದೆ ನೋಡಿ: https://x.com/PIB_India/status/1854101718965076093
ಇನ್ನೂ ಸಾಲ ಪಡೆಯುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 8 ಲಕ್ಷರೂ ವರೆಗಿನ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ 10 ಲಕ್ಷ ರೂಪಾಯಿವರೆಗಿನ ಸಾಲದ ಮೇಲೆ ಶೇ.3 ರಷ್ಟು ರಿಯಾಯಿತಿಯನ್ನು ನೀಡುತ್ತದೆ. ಪ್ರತಿ ವರ್ಷ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುತ್ತದೆ. ಕೇಂದ್ರ ಸರ್ಕಾರ ಪಿಎಂ ವಿದ್ಯಾಲಕ್ಷ್ಮಿ (PM Vidyalaxmi) ಎಂಬ ಯೋಜನೆ ಕೇಂದ್ರ ವಲಯದ ಬಡ್ಡಿ ಸಬ್ಸಿಡಿ (CSIS) ಮತ್ತು ಶಿಕ್ಷಣ ಸಾಲಗಳ ಕ್ರೆಡಿಟ್ ಗ್ಯಾರಂಟಿ ಫಂಡ್ ಯೋಜನೆ (CGFSEL), ವಾರ್ಷಿಕ ಕುಟುಂಬ ಆದಾಯ 4.5 ಲಕ್ಷ ರೂ.ವರೆಗೆ ಮತ್ತು ಅನುಮೋದಿತ ಸಂಸ್ಥೆಗಳಿಂದ ತಾಂತ್ರಿಕ ಅಥವಾ ವೃತ್ತಿಪರ ಕೋರ್ಸ್ ಅನ್ನು ಅನುಸರಿಸುವ ವಿದ್ಯಾರ್ಥಿಗಳಿಗೆ ಪೂರಕವಾಗಿರುತ್ತದೆ.