Sunday, November 24, 2024

Tobacco Products Prohibition: ಸರ್ಕಾರಿ ಕಚೇರಿಗಳ ಆವರಣದಲ್ಲಿ ಧೂಮಪಾನ-ತಂಬಾನು ಸೇವನೆ ನಿಷೇಧ….!

ಸರ್ಕಾರಿ ಕಚೇರಿ ಹಾಗೂ ಕಚೇರಿ ಆವರಣಗಳಲ್ಲಿ ಧೂಮಪಾನ ಹಾಗೂ ಇತರ ತಂಬಾಕು ಉತ್ಪನ್ನ (Tobacco Products Prohibition) ಗಳ ಸೇವನೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆ ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ.

no smoking no gutkha 1

ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಹಾಗೂ ತಂಬಾಕಿನ ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ. ಶಾಸನಾತ್ಮಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.

no smoking no gutkha 0

ಈ ಕಾರಣದಿಂದ ಸಿಬ್ಬಂದಿಗಳ ಆರೋಗ್ಯ ದೃಷ್ಠಿಯ ಜೊತೆಗೆ ಸಾರ್ವಜನಿಕರನ್ನೂಸಹ ಧೂಮಪಾನದಿಂದ ರಕ್ಷಣೆ ಮಾಡುವ ಉದ್ದೇಶದಿಂದ ಸರ್ಕಾರಿ ನೌಕರ ಸರ್ಕಾರಿ ಕಚೇರಿ ಅಥವಾ ಕಚೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಚೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸುವಂತೆ ನಿರ್ದೇಶನ ನೀಡಲಾಗಿದೆ. ಈ ಆದೇಶ ಹಾಗೂ ಸೂಚನೆಗಳನ್ನು ಉಲ್ಲಂಘಿಸಿ ಯಾವುದೇ ಸರ್ಕಾರಿ ನೌಕರ ನಡೆದುಕೊಂಡು ತಂಬಾಕು ಸೇವನೆ (ಗುಟ್ಕಾ, ಪಾನ್ ಮಸಾಲ, ಹೊಗೆ ಸೊಪ್ಪು ಮೊದಲಾದವು) ಅಥವಾ ಧೂಮಪಾನ ಮಾಡಿದರೇ ಅಂತಹ ನೌಕರರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ಸಹ ನೀಡಲಾಗಿದೆ. ಇದು ಎಷ್ಟರ ಮಟ್ಟಿಗೆ ಪಾಲನೆಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

by Admin
by Adminhttp://ismkannadanews.com
Welcome to ISM News, if you want to contact us, then feel free to say anything about www.ismkannadanews.com. We'll appreciate your feedback.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe

Latest Articles

error: Content is protected !!