HomeStateDowry Case : ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ನವವಿವಾಹಿತೆ….!

Dowry Case : ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ನವವಿವಾಹಿತೆ….!

Dowry Case – ಸಾಮಾಜಿಕ ಪಿಡುಗುಗಳಲ್ಲಿ ವರದಕ್ಷಿಣೆ ಸಹ ಒಂದಾಗಿದ್ದು, ವರದಕ್ಷಿಣೆ ಕೊಡುವುದು ಹಾಗೂ ತೆಗೆದುಕೊಳ್ಳುವುದು ವರದಕ್ಷಿಣೆ ನಿಷೇದ ಕಾಯ್ದೆ 1961ರ ಕಾಯ್ದೆಯ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಆದರೂ ಸಹ (Dowry Case) ವರದಕ್ಷಿಣೆ ಕಿರುಕುಳದಿಂದ ಅನೇಕರು ಆತ್ಮಹತ್ಯೆ ಮಾಡಿಕೊಂಡ ಘಟನೆಗಳ ಬಗ್ಗೆ ಕೇಳುತ್ತಲೇ ಇರುತ್ತೇವೆ. ಅಂತಹುದೇ ಪ್ರಕರಣವೊಂದು ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ದೊಡ್ಡಬಳ್ಳಾಪುರದ ಗುಮ್ಮನಹಳ್ಳಿ ಎಂಬಲ್ಲಿ ನಡೆದಿದೆ ಎನ್ನಲಾಗಿದೆ.

ವರದಕ್ಷಿಣೆ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ರೂಪ (29) ಎಂದು ಗುರ್ತಿಸಲಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಸುರೇಶ್ ಎಂಬಾತನನ್ನು ಪ್ರೀತಿಸಿದ ರೂಪ ಮನೆಯವರ ಒಪ್ಪಿಗೆ ಮೇರೆಗೆ ಮದುವೆಯಾಗಿದ್ದರು. ಮೃತಳ ಗಂಡ ಸುರೇಶ್ ಸಾಸಲು ಪಂಚಾಯತಿಯಲ್ಲಿ ಡಾಟಾ ಎಂಟ್ರಿ ಆಪರೇಟರ್‍ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಲಕ್ಷಾಂತರ ಹಣ ಖರ್ಚು ಮಾಡಿ ರೂಪ ಕುಟುಂಬದವರು ಮದುವೆ ಮಾಡಿದ್ದಾರೆ. ಮದುವೆ ಸಮಯದಲ್ಲಿ 100ಗ್ರಾಂ ಒಡವೆ ನೀಡಿದ್ದರಂತೆ. ಆದರೂ ವರದಕ್ಷಿಣೆ ಹಣವನ್ನು ತೆಗೆದುಕೊಂಡು ಬಾ ಎಂದು ಕಿರುಕುಳ ನೀಡುತ್ತಿದ್ದರು ಎಂದು ಮೃತಳ ಮನೆಯವರು ಆರೋಪಿಸಿದ್ದಾರೆ.

ಇನ್ನೂ ಮೃತ ರೂಪ ಸಾಯುವುದಕ್ಕೂ ಮುನ್ನಾ ಡೆತ್ ನೋಟ್ ಬರೆದಿದ್ದಾಳೆ ಎನ್ನಲಾಗಿದೆ. ಅದರಲ್ಲಿ ನನ್ನ ಸಾವಿಗೆ ಗಂಡ ಸುರೇಶ್, ಮಾವ ನರಸಿಂಹಮೂರ್ತಿ, ಅತ್ತೆ ದೇವಮ್ಮ ಕಾರಣ ಎಂದು ಬರೆದಿದ್ದಾರೆ ಎನ್ನಲಾಗಿದೆ. ಇನ್ನೂ ಈ ಕುರಿತು ದೊಡ್ಡ ಬೆಳವಂಗಲ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳದ ಆರೋಪದಡಿ ಪ್ರಕರಣ ದಾಖಲಾಗಿದೆ. ಆರೋಪಿ ಸುರೇಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಲೆಮರಿಸಿಕೊಂಡಿರುವ ಸುರೇಶ್ ತಂದೆ-ತಾಯಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

by Baluhttp://ismkannadanews.com
ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular