Sunday, August 31, 2025
HomeStatePDO Recruitment 2024: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪರೀಕ್ಷಾ ಪ್ರವೇಶ ಪತ್ರ ಈ ರೀತಿ ಡೌನ್...

PDO Recruitment 2024: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪರೀಕ್ಷಾ ಪ್ರವೇಶ ಪತ್ರ ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ…!

PDO Recruitment 2024 – ಕರ್ನಾಟಕ ಲೋಕಸೇವಾ ಆಯೋಗದ (KPSC) ಮೂಲಕ ರಾಜ್ಯದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅನೇಕರು ಅರ್ಜಿ ಸಹ ಸಲ್ಲಿಸಿದ್ದಾರೆ. ಇದೀಗ ಡಿ.7 & 8 ರಂದು ಪರೀಕ್ಷೆ ಸಹ ನಡೆಯಲಿದೆ. ಈಗಾಗಲೇ ಹೈದರಾಬಾದ್ ಕರ್ನಾಟಕ ವೃಂದದ 97 ಹುದ್ದೆಗಳಿಗೆ ಪರೀಕ್ಷೆ ನಡೆದಿದೆ. ಉಳಿದ ಮೂಲ ವೃಂದದ 150 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಹೇಗೆ ಡೌನ್ ಲೋಡ್ ಮಾಡಿಕೊಳ್ಳಬೇಕು (PDO Recruitment 2024) ಎಂಬ ಮಾಹಿತಿಯನ್ನು ಈ ಸುದ್ದಿಯ ಮೂಲಕ ಹಂಚಿಕೊಳ್ಳಲಾಗಿದೆ.

KPSC hall ticket download method 1

ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪಂಚಾಯತಿ ಅಭಿವೃದ್ದಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗ (KPSC) ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಸೆ.18 ರಿಂದ ಅಕ್ಟೋಬರ್‍ 3 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಯಶಸ್ವಿಯಾಗಿ ಸಲ್ಲಿಕೆಯಾದ ಅಭ್ಯರ್ಥಿಗಳಿಗೆ ಇದೀಗ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಡಿ.7 & 8 ರಂದು ಪರೀಕ್ಷೆ ನಡೆಯಲಿದೆ. ಇನ್ನೂ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರ ಹೇಗೆ ಡೌನ್ ಲೋಡ್ ಮಾಡಿಕೊಳ್ಳಬೇಕೆಂಬುದನ್ನು ಈ ಕೆಳಗೆ ತಿಳಿಸಲಾಗಿದೆ.

ಪಂಚಾಯತಿ ಅಭಿವೃದ್ದಿ ಅಧಿಕಾರಿ (PDO)ಯ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಲು ಈ ಕೆಳಗಿನ ವಿಧಾನ ಅನುಸರಿಸಿ

  • ಮೊದಲು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://kpsconline.karnataka.gov.inಗೆ ಭೇಟಿ ನೀಡಿ.
  • ವೆಬ್‌ಸೈಟ್‌ನಲ್ಲಿ ಕಾಣುವ ‘Login’ ಆಯ್ಕೆ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ಹೆಸರು (Username) ಮತ್ತು ಪಾಸ್‌ವರ್ಡ್‌ (Password) ಭರ್ತಿ ಮಾಡಿ, ‘Sign In’ ಆಯ್ಕೆಯನ್ನು ಕ್ಲಿಕ್ಕಿಸಿ.
  • ಬಳಿಕ ಪ್ರವೇಶ ಪತ್ರ ಕಾಣಿಸುತ್ತದೆ. ನೀವು, ಡೌನ್‌ಲೋಡ್ ಮಾಡಿ ಪ್ರಿಂಟ್‌ ತೆಗೆದುಕೊಳ್ಳಬಹುದು.
  • ಜೊತೆಗೆ ಪ್ರವೇಶ ಪತ್ರದಲ್ಲಿನ ಸೂಚನೆಗಳನ್ನು ಒಮ್ಮೆ ಓದುವುದು ಉತ್ತಮ.

KPSC hall ticket download method 0

ಇನ್ನೂ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಕರ್ನಾಟಕ ಲೋಕಸೇವಾ ಆಯೋಗ (KPSC) ಕೆಲವೊಂದು ಕಠಿಣ ನಿರ್ಧಾರಗಳನ್ನು ಕೈಗೊಂಡಿದೆ. ಪರೀಕ್ಷಾ ಕೇಂದ್ರ ಹಾಗೂ ಉಪಕೇಂದ್ರದಲ್ಲಿ ಜಾಮರ್ಸ್ ಗಳನ್ನು ಅಳವಡಿಸಲಿದೆ. ಎಲೆಕ್ಟ್ರಾನಿಕ್ ಉಪಕರಣಗಳ ಮೂಲಕ ಸಂವಹನ ನಡೆಸದಂತೆ ಎಚ್ಚರಿಕೆ ವಹಿಸಿದೆ. ಅಭ್ಯರ್ಥಿಗಳ ಪರಿಶೀಲನೆಗಾಗಿ ಬಯೋಮೆಟ್ರಿಕ್ ಫೇಸ್ ರೆಕಗ್ನೈಜೇಷನ್ ಮಾಡಲಾಗುತ್ತದೆ. ಜೊತೆಗೆ ಎಲ್ಲಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಸಹ ಅಳವಡಿಸಲಾಗುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಬ್ಲೂಟೂತ್, ಮೊಬೈಲ್, ಕ್ಯಾಲ್ಕುಲೇಟರ್‍, ವೈಟ್ ಪ್ಲೂಯಿಡ್, ಪೇಪರ್‍, ಬುಕ್ ಮೊದಲಾದವುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಮಹಿಳೆಯರು ಯಾವುದೇ ಆಭರಣಗಳನ್ನು (ಮಾಂಗಲ್ಯ ಬಿಟ್ಟು) ಧರಿಸುವಂತಿಲ್ಲ. ಕಿವಿ, ಬಾಯಿಯನ್ನು ಮುಚ್ಚಿಕೊಳ್ಳುವಂತಹ ಫೇಸ್ ಮಾಸ್ಕ್ ಧರಿಸುವಂತಿಲ್ಲ. ಇನ್ನೂ ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ತಿಳಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಿದೆ.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular