ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ವಿಡಿಯೋ ಹರಿಬಿಟ್ಟ ಅಪ್ರಾಪ್ತ ಬಾಲಕರು…..!

ನಾಗರೀಕ ಸಮಾಜದಲ್ಲಿ ಆಗಾಗ ಅತ್ಯಾಚಾರದಂತಹ ಪ್ರಕರಣಗಳು ನಡೆಯುತ್ತಲೇ ಇದೆ. ಅತ್ಯಾಚಾರ ಪ್ರಕರಣಗಳಿಗೆ ಕಠಿಣ ಶಿಕ್ಷೆಯಿದ್ದರೂ ಸಹ ಅತ್ಯಾಚಾರಗಳು, ದೌರ್ಜನ್ಯಗಳು ಮಾತ್ರ ನಿಲ್ಲುತ್ತಿಲ್ಲ. ಇದೀಗ ಜಾರ್ಖಂಡ್ ನಲ್ಲಿ ನಾಲ್ಕು ಮಂದಿ ಅಪ್ರಾಪ್ತ ಬಾಲಕರು ಯುವತಿಯೊಬ್ಬಳನ್ನು ಅತ್ಯಾಚಾರವೆಸಗಿ ಈ ಕೃತ್ಯವನ್ನು ವಿಡಿಯೋ ಮಾಡಿ ಸೋಷಿಯಲ್ ಮಿಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಈ ಆರೋಪದ ಮೇರೆಗೆ ನಾಲ್ಕು ಮಂದಿ ಅಪ್ರಾಪ್ತರನ್ನು ಪೊಲೀಸರು ಬಂಧನ ಮಾಡಿದ್ದಾರೆ.

girl gang rape jharkhand

ಯುವತಿಯೊಬ್ಬಳ ಮೇಲೆ ನಾಲ್ವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಈ ಘಟನೆ ಕಳೆದ ಏ.21 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರವೆಸಗಿದ ಬಾಲಕರು ಸುಮಾರು 15-17 ವರ್ಷದ ವಯಸ್ಸಿನವರು ಎನ್ನಲಾಗಿದೆ. 19 ವರ್ಷದ ಯುವತಿಯ ಮೇಲೆ ಈ ನಾಲ್ವರು ಆರೋಪಿಗಳು ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರದ ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ಬಹಿರಂಗಪಡಿಸಿದರೇ ಸೋಷಿಯಲ್ ಮಿಡಿಯಾದಲ್ಲಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಸಹ ಹಾಕಿದ್ದರು ಎಂದು ಸಂತ್ರಸ್ತ ಯುವತಿ ದೂರಿನಲ್ಲಿ ತಿಳಿಸಿದ್ದರು ಎನ್ನಲಾಗಿದೆ.

girl gang rape jharkhand 0

ಕಳೆದ ಮೇ.3 ರಂದು ಅತ್ಯಾಚಾರದ ವಿಡಿಯೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಂಬಂಧ ಯುವತಿ ದೂರು ನೀಡಿದ್ದು, ದೂರಿನಂತೆ ಕೃತ್ಯದಲ್ಲಿ ಭಾಗಿಯಾದ ಎಲ್ಲಾ ಬಾಲಕರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಏ.21 ರಂದು ಜಾರ್ಖಂಡ್ ನ ರಾಮಗಢ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲಿದ್ದಲು ಡಂಪಿಂಗ್ ಯಾರ್ಡ್ ಬಳಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು.

Leave a Comment

Your email address will not be published. Required fields are marked *

Scroll to Top