ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಕ್ರಾಸ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಶಾಲಾ ವಾಹನದ ನಡುವೆ ಅಪಘಾತ (Accident News) ಸಂಭವಿಸಿದ್ದು, ಇಬ್ಬರು ವಿದ್ಯಾರ್ಥಿಗಳು ಮೃತಪಟ್ತಿದ್ದಾರೆ. ಶಿಕ್ಷಕರ ದಿನಾಚರಣೆಯ ವೇಳೆಯಲ್ಲೇ ಈ ದುರ್ಘಟನೆ ನಡೆದಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಲು ಬಂದ ವಿದ್ಯಾರ್ಥಿಗಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಕ್ರಾಸ್ ಬಳಿ ಸಂಭವಿಸಿದೆ. ಮೃತ ದುರ್ದೈವಿಗಳನ್ನು ಸಮರ್ಥ್(7), ಶ್ರೀಕಾಂತ್ (12) ಮೃತ ವಿದ್ಯಾರ್ಥಿಗಳು. 32 ಜನರ ಪೈಕಿ 18 ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತು 14 ವಿದ್ಯಾರ್ಥಿಗಳಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಡಿಸಿ ಕೆ.ನಿತೇಶ್ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮ ಸಮೀಪ ನಡೆದಿದ್ದ ಅಪಘಾತ ಸಂಭವಿಸಿದೆ. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗಾಯಗೊಂಡ ಮಕ್ಕಳ ಚಿಕಿತ್ಸೆಗೆ ತಲಾ 3 ಲಕ್ಷ ರೂ. ನೆರವು ನೀಡಲಾಗುತ್ತಿದೆ ಎಂದಿದ್ದಾರೆ. ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.