Accident News – ಎರಡು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಯುವತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಮಳ್ಳವಳ್ಳಿ ತಾಲೂಕಿನ ಬಸಾಪುರ ಗೇಟ್ ಬಳಿ ಈ ಘಟನೆ ನಡೆದಿದ್ದು, ಮೃತ ದುರ್ದೈವಿಯನ್ನು ಶರಣ್ಯ ಗೌಡ (25) ಎಂದು ಗುರ್ತಿಸಲಾಗಿದೆ. ಶನಿವಾರ ಜ.18 ರಂದು ಅವಘಡ ಸಂಭವಿಸಿದ್ದು, ಕಳೆದ ಒಂದು ವರ್ಷದಿಂದ ಕನಕಪುರ ತಾಲೂಕಿನ ಸಾತನೂರು ಪಂಚಾಯತಿಯಲ್ಲಿ ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಮೃತಳನ್ನು ಮೂಲತಃ ಹಲಗೂರು ಸಮೀಪದ ಬಳೆಹೊನ್ನಿಗ ಗ್ರಾಮದ ಶರಣ್ಯ ಗೌಡ (25) ನರೇಗಾ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ ಕೆಲಸ ಮುಗಿಸಿ ಸ್ವಗ್ರಾಮ ಬಳೆ ಹೊನ್ನಿಗನದಿಂದ ಹಲಗೂರಿಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಇನ್ನೂ ಮುಂದಿನ ತಿಂಗಳು ಫೆಬ್ರವರಿ 16 ರಂದು ಶರಣ್ಯ ಗೌಡ ಮದುವೆ ನಡೆಯಬೇಕಿದ್ದು, ಮದುವೆ ಕೆಲಸಗಳೂ ಸಹ ನಡೆಯುತ್ತಿತ್ತು ಎನ್ನಲಾಗಿದೆ. ಆದರೆ ನೂರಾರು ಕನಸುಗಳನ್ನು ಕಂಡಿದ್ದ ಶರಣ್ಯ ಗೌಡ ಇದೀಗ ಅಪಘಾತದ ಕಾರಣ ಇಹಲೋಕ ತ್ಯೆಜಿಸಿದ್ದಾರೆ.
ಇನ್ನೂ ಕಳೆದ ಒಂದು ವರ್ಷದಿಂದ ಕನಕಪುರ ತಾಲೂಕಿನ ಸಾತನೂರು ಪಂಚಾಯತಿಯಲ್ಲಿ ಶರಣ್ಯ ನರೇಗಾ ಇಂಜನೀಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲವೇ ದಿನಗಳಲ್ಲಿ ಮದುವೆಯಾಗಬೇಕಿದ್ದ ಶರಣ್ಯ ಇದೀಗ ಮೃತಪಟ್ಟಿದ್ದಾರೆ. ಆಕೆಯ ಜೀವನ ವಿದಿಯಾಟಕ್ಕೆ ಬಲಿಯಾಗಿದೆ. ಸ್ವಗ್ರಾಮದಿಂದ ಹಲಗೂರಿಗೆ ಹೋಗಿದ್ದಾಗ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಹಿನ್ನೆಲೆಯಲ್ಲಿ ತೀವ್ರ ರಕ್ತಸ್ರಾವವಾಗಿ ಶರಣ್ಯ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ಇನ್ನೂ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ