Sunday, August 31, 2025
HomeStateಜು.4 ರವರೆಗೂ ನಟ ದರ್ಶನ್ ಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ….!

ಜು.4 ರವರೆಗೂ ನಟ ದರ್ಶನ್ ಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ….!

ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ದರ್ಶನ್ ಸೇರಿದಂತೆ ನಾಲ್ಕು ಮಂದಿ ಆರೋಪಿಗಳಿಗೆ ಜು.4 ರವರೆಗೂ ನ್ಯಾಯಾಂಗ ಬಂಧನ ವಿಧಿಸಿದೆ. ದರ್ಶನ್, ಧನರಾಜ್, ವಿನಯ್, ಪ್ರದೋಶ್ ಮೂವರನ್ನು ಪೊಲೀಸರು ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರು ಪಡಿಸಿದ್ದರು. ನ್ಯಾಯಾಲಯದಲ್ಲಿ ವಾದ ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ಈ ನಾಲ್ವರಿಗೂ ಜು.4 ರವೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

darshan case 14 days judicial custody 0

ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಆರೋಪಿಗಳನ್ನು ಮತ್ತೆ 24 ನೇ ಎಸಿಎಂಎಂ ಕೋರ್ಟ್‍ಗೆ ಹಾಜರುಪಡಿಸಲಾಗಿತ್ತು. ವಾದ-ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ಆರೋಪಿಗಳಾದ ದರ್ಶನ್, ವಿನಯ್, ಧನರಾಜ್ ಹಾಗೂ ಪ್ರದೋಶ್ ನನ್ನು ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿಗಳನ್ನು ಮೂರು ಬಾರಿ ಕಸ್ಟಡಿಗೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ನಟ ದರ್ಶನ್ ಮನೆಯಲ್ಲಿ ಸಿಕ್ಕಂತಹ ಹಣದ ಬಗ್ಗೆ ವಿಚಾರಿಸಲು ಎರಡು ದಿನದ ಹಿಂದೆ ಪೊಲೀಸರು, ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಮತ್ತೆ ಕಸ್ಟಡಿಗೆ ತೆಗೆದುಕೊಂಡಿದ್ದರು.

darshan case 14 days judicial custody 1

ಇನ್ನೂ 12 ದಿನಗಳ ಕಾಲ ರೇಣುಕಾಸ್ವಾಮಿ ಕೊಲೆ ಪ್ರಕರಣದ ನಿಮಿತ್ತ ಆರೋಪಿಗಳನ್ನು ವಿಚಾರಣೆ ನಡೆಸಿದ ಪೊಲೀಸರು ಮಹತ್ತರ ಸಾಕ್ಷಿಗಳನ್ನು ಕಲೆ ಹಾಕಿದ್ದರು. ಪುನಃ ಕಸ್ಟಡಿಯ ಅಗತ್ಯವಿಲ್ಲ ಎಂದು ಪೊಲೀಸರು ಕೋರ್ಟ್‌ಗೆ ವರದಿ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಸೇರಿದಂತೆ ನಾಲ್ಕು ಮಂದಿಗೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಈಗಾಗಲೇ ಈ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅವರಿಗೂ ಸಹ ಜು.4 ರವರೆಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular