Agriculture – ರೈತರು ಉತ್ತಮ ಆದಾಯ ಪಡೆದುಕೊಳ್ಳಲು ಹೆಚ್ಚು ರಾಸಾಯನಿಕಗಳನ್ನು ಬಳಸುತ್ತಾರೆ. ಆದರೆ ಸಾವಯವ ಹಾಗೂ ಸಮಗ್ರ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳುವುದರ ಮೂಲಕ ರೈತರು ಸುಸ್ಥಿರ ಆದಾಯವನ್ನು ಗಳಿಸಬಹುದಾಗಿದ್ದು, ರೈತರು ಈ ಕುರಿತು ಗಮನಹರಿಸಬೇಕೆಂದು ಜಂಟಿ ಕೃಷಿ ನಿರ್ದೇಶಕಿ ಜಾವೀದಾ ನಾಸಿಂ ಖಾನಂ ಸಲಹೆ ನೀಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿ ಹೋಬಳಿಯ ಗೆಗ್ಗಿಲರಾಳ್ಳಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆಯ ವತಿಯಿಂದ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ (Agriculture) ರಾಗಿ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇತ್ತಿಚಿಗೆ ರೈತರು (Agriculture) ಹೆಚ್ಚು ಹೆಚ್ಚು ರಾಸಾಯನಿಕ ಔಷಧಗಳನ್ನು ಬಳಸುತ್ತಿರುವ ಹಿನ್ನೆಲೆಯಲ್ಲಿ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿದೆ. ಜೊತೆಗೆ ರಾಸಾಯನಿಕಗಳಿಂದ ಕೂಡಿದ ಆಹಾರವನ್ನು ನಾವು ಸೇವನೆ ಮಾಡುತ್ತಿದ್ದೇವೆ. ಆದ್ದರಿಂದ ನಮ್ಮ ಪೂರ್ವಜರು ಅಳವಡಿಸಿಕೊಂಡಂತಹ ಸಾವಯವ ಕೃಷಿ ಪದ್ದತಿಯನ್ನು ಅಳವಡಿಸಿಕೊಂಡು ಭೂಮಿಯ ಫಲವತ್ತತೆ ಕಾಪಾಡುವುದರ ಜೊತೆಗೆ ಪರಿಸರವನ್ನು ಸಹ ಸಂರಕ್ಷಣೆ ಮಾಡಬಹುದಾಗಿದೆ. ಜೊತೆಗೆ ಕೇವಲ (Agriculture) ಕೃಷಿಯನ್ನು ಮಾತ್ರವಲ್ಲದೇ ಹೈನುಗಾರಿಕೆ, ಮೀನುಗಾರಿಕೆ ಮೊದಲಾದ ಚಟುವಟಿಕೆಗಳನ್ನು ಕೃಷಿಯೊಂದಿಗೆ ಕೈಗೊಂಡು ಸುಸ್ಥಿರ ಆದಾಯ ಗಳಿಸಬಹುದಾಗಿದೆ. ಈ ನಿಟ್ಟಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕಾಲಕಾಲಕ್ಕೆ ತರಬೇತಿ, ಕ್ಷೇತ್ರೋತ್ಸವಗಳನ್ನು ಮಾಡಿ ಬೆಳೆಗಳ ಉತ್ಪಾದನೆ ಹೆಚ್ಚಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ರೈತರು ತಾವು (Agriculture) ಕೃಷಿ ಚಟುವಟಿಕೆಗಳನ್ನು ಕೈಗೊಂಡಾಗ ಕೃಷಿ ಇಲಾಖೆಯ ಅಧಿಕಾರಿಗಳ ಸಲಹೆಗಳನ್ನು ಪಡೆದುಕೊಳ್ಳಬೇಕು ಎಂದರು.
ನಂತರ ಸಹಾಯಕ ಕೃಷಿ ನಿರ್ದೇಶಕ ಕೇಶವರೆಡ್ಡಿ ಮಾತನಾಡಿ, ತಾಲೂಕಿನಲ್ಲಿ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ರಾಗಿ, ಮುಸುಕಿನ ಜೋಳ, ತೊಗರಿ ಮತ್ತು ನೆಲಗಡಲೆ ಬೆಳೆಗಳಲ್ಲಿ ಪ್ರಾತ್ಯಕ್ಷಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. (Agriculture) ರೈತರಿಗೆ ಈ ಕುರಿತು ಮಾಹಿತಿ, ತಾಂತ್ರಿಕ ಮಾಹಿತಿ ,ರಿಕರಗಳನ್ನು ಹಾಗೂ ತರಬೇತಿ ನೀಡಿ ಸುಸ್ಥಿರ ಇಳುವರಿ ಪಡೆಯಲು ಅಗತ್ಯ ಮಾಹಿತಿ ನೀಡಲಾಗಿದೆ. ರೈತರು ಸಹ ಈ ರೀತಿಯ ಕ್ಷೇತ್ರೋತ್ಸವಗಳಲ್ಲಿ ಭಾಗಿಯಾಗಿ ಕೃಷಿಯ ಮೂಲಕ ಒಳ್ಳೆಯ ಆದಾಯ ಗಳಿಸಲು ಮುಂದಾಗಬೇಕು. ರೈತರಿಗೆ ಕೃಷಿ ಸಂಬಂಧಿತ ಏನಾದರೂ ಗೊಂದಲಗಳು, ಸಮಸ್ಯೆಗಳಿದ್ದರೇ (Agriculture) ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕ ಮಾಡಿ ಸಲಹೆ ಸೂಚನೆಗಳನ್ನು ಪಡೆದುಕೊಳ್ಳಬಹುದು ಎಂದರು.
ಕಾರ್ಯಕ್ರಮದಲ್ಲಿ ಚಿಂತಾಮಣಿಯ ಕೃಷಿ (Agriculture) ವಿಜ್ಞಾನ ಕೇಂದ್ರದ ಡಾ.ವಿಶ್ವನಾಥ್ ರಾಗಿ ಬಳೆಯ ಸಮಗ್ರ ಬೇಸಾಯ ಕ್ರಮಗಳು, ಮಣ್ಣಿನ ಫಲವತ್ತತೆ ಹೆಚ್ಚಿಸಲು ರೈತರು ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು. ಇದೇ ಸಮಯದಲ್ಲಿ ಉಪ ಕೃಷಿ ನಿರ್ದೇಶಕಿ ದೀಪ ಕೃಷಿ ಇಲಾಖೆಯ ವತಿಯಿಂದ (Agriculture) ಕೃಷಿ ಯಂತ್ರೋಪಕರಣ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಸಿಗುವಂತಹ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ನಂತರ ಆತ್ಮ ಯೋಜನೆಯ ನಿರ್ದೇಶಕ ಸತೀಶ್ ಕುಮಾರ್ ಸಿರಿಧಾನ್ಯಗಳ ಮಹತ್ವ, ಪಿ.ಎಂ.ಎಫ್.ಎಂ.ಇ ಯೋಜನೆಯ ಕುರಿತು ಮಾಹಿತಿ ನೀಡಿದರು. ಈ ವೇಳೆ ಸೋಮೇನಹಳ್ಳಿ ಗ್ರಾ.ಪಂ. ಸದಸ್ಯೆ ಸೈದಾಬಿ, ರೈತ ಮುಖಂಡರಾದ ಆದಿನಾರಾಯಣಪ್ಪ, ನಾಗರಾಜು, ಆತ್ಮ ಯೋಜನೆಯ ಜ್ಯೋತಿ, ಕೃಷಿ ಇಲಾಖೆಯ ಸಿಬ್ಬಂದಿ ಸೇರಿದಂತೆ ರೈತರು ಹಾಜರಿದ್ದರು.