HomeNationalHeart Attack: ಹೃದಯಾಘಾತಕ್ಕೆ ಬಲಿಯಾದ 3 ನೇ ತರಗತಿ ಬಾಲಕಿ, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಭಯಾನಕ...

Heart Attack: ಹೃದಯಾಘಾತಕ್ಕೆ ಬಲಿಯಾದ 3 ನೇ ತರಗತಿ ಬಾಲಕಿ, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಭಯಾನಕ ವಿಡಿಯೋ….!

Heart Attack-ಇತ್ತೀಚಿಗೆ ಹೃದಾಯಾಘಾತ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಈ ಹೃದಯಾಘಾತ ಯಾರಿಗೆ ಯಾವಾಗ ಸಂಭವಿಸುತ್ತದೆ ಎಂದು ಹೇಳೋಕೆ ಆಗೋದೆ ಇಲ್ಲ ಎಂದು ಹೇಳಬಹುದಾಗಿದೆ. ಪುಟ್ಟ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಈ ಹೃದಯಾಘಾತ ಸಂಭವಿಸುತ್ತಿದೆ. ಅದರಲ್ಲೂ ಇತ್ತೀಚಿಗೆ ಪುಟ್ಟ ಕಂದಮ್ಮಗಳು, ಯುವಕರನ್ನೇ ಈ ಹೃದಯಾಘಾತ ಅಟ್ಯಾಕ್ ಮಾಡುತ್ತಿದೆ. ಇದೀಗ ಅಹಮದಾಬಾದ್‌ ನಲ್ಲಿ 3ನೇ ತರಗತಿ ಬಾಲಕಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ನೋಡಿದರೇ ಎಂತಹವರನ್ನಾದರೂ ಭಾವುಕರನ್ನಾಗಿ ಮಾಡಿಬಿಡುತ್ತದೆ.

9 year girl died by heart attack in ahmedabad 0

ಕಳೆದೆರಡು ದಿನಗಳ ಹಿಂದೆಯ್ಟೆ ಚಾಮರಾಜನಗರದ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಓದುತ್ತಿದ್ದ 9 ವರ್ಷದ ಬಾಲಕಿ ತೇಜಸ್ವಿನಿ ಶಾಲೆಯಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟಿದ್ದಳು. ಇದೀಗ ಅಂತಹುದೇ ಘೋರ ದುರಂತವೊಂದು ನಡೆದಿದೆ. ಅಹಮದಾಬಾದ್‌ ನ ಝೆಬಾರ್ ಶಾಲೆಯ 3 ನೇ ತರಗತಿಯ ವಿದ್ಯಾರ್ಥಿನಿಯು ಶಾಲೆಯ ಲಾಬಿಯಲ್ಲಿ ಅಸ್ವಸ್ಥತೆಗೊಂಡು ಬೆಂಚ್ ಮೇಲೆ ಕುಳಿತುಕೊಂಡಿದ್ದಾಕೆ ಏಕಾಏಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ವಿದ್ಯಾರ್ಥಿನಿ ಕುಸಿದು ಬಿಳುತ್ತಿರೋ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಮಯದಲ್ಲಿ ಹತ್ತಿರದಲ್ಲಿದ್ದ ಶಿಕ್ಷಕರು ಬಾಲಕಿಯ ಸಹಾಯಕ್ಕೆ ಧಾವಿಸಿದ್ದಾರೆ. ಕೂಡಲೇ ಬಾಲಕಿಗೆ ಸಿಪಿಆರ್‍ ನೀಡಲು ಪ್ರಯತ್ನ ಮಾಡಿದ್ದಾರೆ. ನಂತರ ಹತ್ತಿರದ ಆಸ್ಪತ್ರೆಗೂ ದಾಖಲು ಮಾಡಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಪುಟ್ಟ ಕಂದಮ್ಮ ಇಹಲೋಕ ತ್ಯೆಜಿಸಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ: Click Here

ಇನ್ನೂ ಈ ಕುರಿತು ಶಾಲೆಯ ಪ್ರಾಂಶುಪಾಲೆ ಶರ್ಮಿಷ್ಠ ಸಿನ್ಹಾ ಮಾಹಿತಿ ಹಂಚಿಕೊಂಡಿದ್ದಾರೆ. ಮೃತ ಬಾಲಕಿಗೆ ಈ ಹಿಂದೆ ಯಾವುದೇ ಆರೋಗ್ಯ ಸಮಸ್ಯೆಯಿರಲಿಲ್ಲ. ಆದರೆ ಶುಕ್ರವಾರ ಅಸ್ವಸ್ಥಳಾಗಿದ್ದಾಳೆ. ಶಾಲೆಯ ಲಾಬಿಯ ಬೇಂಜ್ ಮೇಲೆ ಕುಳಿತುಕೊಂಡಿದ್ದಳು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾಳೆ. ನಂತರ ಬಾಲಕಿಯನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಅಷ್ಟೊತ್ತಿಗಾಗಲೇ ಬಾಲಕಿ ಮೃತಪಟ್ಟಿದ್ದಾಳೆ. ಇನ್ನೂ ಪ್ರಾಥಮಿಕ ಸಂಶೋಧನೆಯಂತೆ ಬಾಲಕಿಗೆ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ.

by Baluhttp://ismkannadanews.com
ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular