Protest : ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಪಟ್ಟಣದ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಅಪಮಾನ ಮಾಡುತ್ತಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಅಂಬೇಡ್ಕರ್ ರವರ ವಿರೋಧಿ ಧೋರಣೆ ಅನುಸರಿಸುವುದನ್ನು ತೀವ್ರವಾಗಿ ಖಂಡಿಸಿ ಮಾ.6ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಂ.ಜಿ.ಕಿರಣ್ ತಿಳಿಸಿದರು.

Protest – ಬಾಗೇಪಲ್ಲಿಯಲ್ಲಿ ನಡೆದ ಪತ್ರಿಕಾಗೋಷ್ಟಿ
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಚಿಂತಾಮಣಿ ನಗರದ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಇದೇ ಶಾಲೆಯಲ್ಲಿ ಓದಿರುವ ಹಳೆ ವಿದ್ಯಾರ್ಥಿಗಳು ಶಿಥಿಲಾವೆಸ್ಥೆಯಲ್ಲಿರುವ ಶಾಲೆಯನ್ನು ದತ್ತುಪಡೆದು ಅಭಿವೃದ್ದಿಪಡಿಸಿ ಸಂವಿಧಾನ ಪಿತಾಮಹ ಹಾಗೂ ಮಾನವತಾವಾದಿಗಳಾದ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿಯನ್ನು ಮಕ್ಕಳ ಶೈಕ್ಷಣಿಕ ಅಭಿವೃದ್ದಿಯ ದೃಷ್ಠಿಯ ಪ್ರೇರಣೆಯಾಗುವ ಉದ್ದೇಶದಿಂದ ಶಾಲೆಯ ಆವರಣದಲ್ಲಿ ಸ್ಥಾಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಅನುಮೋಧನೆಯನ್ನು ಪಡೆಯಲಾಗಿತ್ತು ಆದರೆ ಉದ್ಘಾಟನೆಗೆ ಸಿದ್ದವಾಗಿದ್ದ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಂಬೇಡ್ಕರ್ ವಿರೋಧಿ ವರ್ತನೆ ಹಾಗೂ ಜನ ಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸುಮಾರು 6 ತಿಂಗಳಿಂದ ಅಂಬೇಡ್ಕರ್ ಪುತ್ಥಳಿಯನ್ನು ಕೊಳಕು ಬಟ್ಟೆಯಲ್ಲಿ ಮುಚ್ಚುವ ಮೂಲಕ ಅಂಬೇಡ್ಕರ್‍ರವರಿಗೆ ಅಗೌರವ ತೋರುತ್ತಿರುವ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
Protest – ಆಕ್ರೋಷ ಹೊರಹಾಕಿದ ಮುಖಂಡರು
ಕಳೆದ 6 ತಿಂಗಳಿಂದ ರಾಷ್ಟ್ರನಾಯಕರ ಪುತ್ಥಳಿಗೆ ಕೊಳಕು ಬಟ್ಟೆಯನ್ನು ಸುತ್ತಿ ಅಪಮಾನ ಮಾಡಿರುವ ವಿಚಾರದ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತಂದಿದ್ದರೂ ಸಹ ಜಿಲ್ಲಾಡಳಿತ ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ ಅಲ್ಲದೆ ಈ ವಿಚಾರದ ಬಗ್ಗೆ ಸರ್ಕಾರದ ಗಮನಕ್ಕಿದ್ದರೂ ಸಹ ಸಂಬಂಧಪಟ್ಟವರ ವಿರುದ್ದ ಯಾವುದೇ ಕ್ರಮವಹಿಸಲು ಮುಂದಾಗಿಲ್ಲ ಎಂದು ಆರೋಪಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಸೇರಿದಂತೆ ಸರ್ಕಾರವೂ ಸಹ ಅಂಬೇಡ್ಕರ್ ವಿರೋಧಿ ಧೋರಣೆ ಅನುಸರಿಸತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.
Protest – ಪ್ರತಿಭಟನೆ ಮತ್ತು ಎಚ್ಚರಿಕೆ
ಅಂಬೇಡ್ಕರ್ ವಿರೋಧಿಗಳಂತೆ ವರ್ತಿಸುತ್ತಿರುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡೆಯಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿವತಿಯಿಂದ ಮಾ. 6ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ಜಿಲ್ಲೆಯ ಎಲ್ಲಾ ಅಂಬೇಡ್ಕರ್ ವಾದಿಗಳು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ವಿಧಾನ ಸೌಧ ಮುತ್ತಿಗೆ ಹಾಕುವಂತಹ ಕೆಲಸಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಂದಾಗಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.
ಈ ಸಮಯದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಎಂ.ಎಸ್.ನರಸಿಂಹಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪಧಾಧಿಕಾರಿಗಳಾದ ಎಂ.ಎ.ಈಶ್ವರಪ್ಪ, ಸಿ.ವೆಂಕಟೇಶ್, ಗಂಗಾಧರ, ನರಸ ರಾಮಪ್ಪ, ಸುರೇಶ್, ರಮೇಶ್, ಬಾಬು, ವೆಂಕಟೇಶ್, ಶ್ರೀರಾಮಪ್ಪ, ರಾಮಾಂಜಿ ಬಾಬು ಮತ್ತಿತರರು ಇದ್ದರು.